ತಾಲೂಕು ಕಚೇರಿಗೆ ಜನಸಾಮಾನ್ಯರನ್ನು ಅಲೆದಾಡಿಸಬೇಡಿ; ನಾರಾಯಣಸ್ವಾಮಿ

ಶಾಸಕನಾದ ಮೇಲೆ ಯಾವುದೇ ಅಧಿಕಾರಿಗಳಿಗೆ ಒತ್ತಡ ಹಾಕದೆ ಕೆಲಸ ಮಾಡಿಸಲಾಗಿದೆ.

Team Udayavani, Apr 8, 2022, 5:15 PM IST

ತಾಲೂಕು ಕಚೇರಿಗೆ ಜನಸಾಮಾನ್ಯರನ್ನು ಅಲೆದಾಡಿಸಬೇಡಿ; ನಾರಾಯಣಸ್ವಾಮಿ

ದೇವನಹಳ್ಳಿ: ತಾಲೂಕಿನ ಬಡಜನರಿಗೆ ಹಾಗೂ ರೈತರಿಗೆ ತಾಲೂಕು ಕಚೇರಿಯಿಂದ ಆಗುವ ಕೆಲಸಗಳನ್ನು ತ್ವರಿತವಾಗಿ ಮಾಡಿಕೊಡಬೇಕು. ಕಚೇರಿಗಳಿಗೆ ಅಲೆದಾಡಿಸುವುದನ್ನು ಮೊದಲು ತಪ್ಪಿಸಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

ಪಟ್ಟಣದ ತಾಲೂಕು ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ತಾಲೂಕು ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಬಡವರೇ ವಿವಿಧ ಕೆಲಸಗಳಿಗೆ ತಾಲೂಕು ಕಚೇರಿಗೆ ಬರುತ್ತಾರೆ. ಸರಿಯಾದ ಸಮಯಕ್ಕೆ ಅವರ ಕೆಲಸ ಮಾಡಿ ಕೊಟ್ಟರೆ ಅನುಕೂಲವಾಗುತ್ತದೆ. ಬಡವರನ್ನು ಅಲೆದಾಡಿಸುವುದರ ಬದಲು ಅವರ ಕೆಲಸ ಮಾಡಿ ಕೊಡಿ. ಅವರ ಕಷ್ಟಗಳಿಗೆ ಸ್ಪಂದಿಸಬೇಕು ಎಂದರು.

ಅಭಿವೃದ್ಧಿಗೆ ಹೆಚ್ಚಿನ ಒತ್ತು: ನನ್ನ ಕಚೇರಿಗೆ ಸಾಕಷ್ಟು ಜನ ಬರುತ್ತಾರೆ. ಅವರ ಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ತಾಲೂಕು ಕಚೇರಿಗೆ ಸಂಬಂಧಪಟ್ಟಂತೆ ಸಾಕಷ್ಟು ದೂರುಗಳು ಬರುತ್ತಿದೆ.

ಇನ್ನು ಮುಂದೆಯಾದರೂ ಇಂತಹ ದೂರು ಬರಬಾರದು. ತಹಶೀಲ್ದಾರ್‌ ಶಿವರಾಜ್‌ ಕಚೇರಿಯಲ್ಲಿ ಕುಳಿತು ಜನಸಾಮಾನ್ಯರ ಕೆಲಸಗಳಿಗೆ ವೇಗವಾಗಿ ಸ್ಪಂದಿಸಿ ಸಹಕಾರಿ ಆಗುತ್ತಿದ್ದಾರೆ. ಅವರ ರೀತಿಯಲ್ಲೇ ತಾಲೂಕು ಕಚೇರಿ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ವರ್ಗ ವೇಗವಾಗಿ ಕೆಲಸ ಮಾಡಿದರೆ ಮತ್ತಷ್ಟು ಕೆಲಸಗಳ ವೇಗೆ ಹೆಚ್ಚುತ್ತದೆ ಎಂದ ಅವರು, ಕಳೆದ ಮೂರು ವರ್ಷಗಳಿಂದ ಶಾಸಕನಾದ ಮೇಲೆ ಯಾವುದೇ ಅಧಿಕಾರಿಗಳಿಗೆ ಒತ್ತಡ ಹಾಕದೆ ಕೆಲಸ ಮಾಡಿಸಲಾಗಿದೆ. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲಾಗುತ್ತದೆ ಎಂದು ಹೇಳಿದರು.

ಪೋಡಿ ದುರಸ್ತಿಗೆ ಅಡೆತಡೆ ಇಲ್ಲ: ಸ್ಮಶಾನಗಳಿಗೆ ಜಾಗ ಗುರುತಿಸಿ ಸರ್ವೆ ಅಧಿಕಾರಿಗಳು ಸರ್ವೆ ಕಾರ್ಯ ಮಾಡಿಕೊಡಬೇಕು. ತಾಲೂಕು ಕಚೇರಿಯಲ್ಲಿ 3 ಮತ್ತು 9 ಮ್ಯಾಚ್ಯು, ಆರ್‌ಟಿಸಿ ಯಲ್ಲಿರುವ ವ್ಯತ್ಯಾಸವನ್ನು ಭೂ ದಾಖಲೆಗಳ ಉಪನಿರ್ದೇಶಕರ ಕಚೇರಿಯಲ್ಲಿ ಸಂಬಂಧಪಟ್ಟ ದಾಖಲೆ ತೆಗೆದುಕೊಂಡು ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಆರ್‌ಟಿಸಿ ಪೋಡಿ, ದುರಸ್ತಿ ಕಾರ್ಯ, ಭೂ ಮಂಜೂರಾತಿ ಸಮಯದಲ್ಲಿ ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಸಭೆಯಲ್ಲಿ ಅವರವರ ಹೆಸರಿಗೆ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಮಾಡಿರುವ ತೀರ್ಮಾನ(ರೆಗ್ಯುಲೇಷನ್‌) ಹಾಗೂ ಸಾಗುವಳಿ ಚೀಟಿ ನೀಡುರುವುದಕ್ಕೆ ವಿತರಣಾವಹಿ ಹಾಗೂ ಒಎಂ ಕಾಪಿ, ಇನ್ನಿತರೆ ದಾಖಲೆ ಅನುಭವದಂತೆ ರೈತರ ಹೂಳುತ್ತಿರುವ ಭೂಮಿಯನ್ನು ಮತ್ತೆ ಸರ್ವೆ ಕಾರ್ಯ ಮಾಡಿದರು. ಪೋಡಿ ದುರಸ್ತಿಗೆ ಯಾವುದೇ ಅಡೆ ತಡೆಯಿರುವುದಿಲ್ಲ. ಸ್ಮಶಾನ ಒತ್ತುವರಿ, ಸರ್ಕಾರಿ ಒತ್ತುವರಿ ಸೇರಿ ವಿವಿಧ ಜಾಗಗಳನ್ನು ತೆರವು ಗೊಳಿಸಬೇಕು ಎಂದು ಹೇಳಿದರು.

ಸಿಬ್ಬಂದಿ ಕೊರತೆ ಉತ್ತಮ ಕೆಲಸ: ತಹಶೀಲ್ದಾರ್‌ ಶಿವರಾಜ್‌ ಮಾತನಾಡಿ, ತಾಲೂಕು ಕಚೇರಿಯಲ್ಲಿ ಜನಸಾಮಾನ್ಯರು ಹಾಗೂ ರೈತರ ಕೆಲಸ ಕಾರ್ಯಗಳಿಗೆ ಹೆಚ್ಚಿನ ಒತ್ತನ್ನು ಕೊಡಲಾಗಿದೆ. ಸಿಬ್ಬಂದಿ ಕೊರತೆ ನಡುವೆಯೂ ಇರುವ ಸಿಬ್ಬಂದಿಗಳಲ್ಲಿಯೇ. ಕೆಲಸ ತೆಗೆದುಕೊಳ್ಳುತ್ತಿದ್ದೇವೆ. ಸರ್ಕಾರದ ಕಾರ್ಯಕ್ರಮ ಜನಸಾಮಾನ್ಯರಿಗೆ ತಲುಪುವಂತೆ ಆಗಬೇಕು ಎಂದು ಹೇಳಿದರು. ಶಿರಸ್ತೇದಾರ್‌, ಬಿ.ಜಿ. ಭರತ್‌, ಶಶಿಕಲಾ, ತಾಲೂಕು ಕಚೇರಿ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.