ದೇಶೀಯ ವಿಮಾನ ಹಾರಾಟ; ಪ್ರಯಾಣಿಕರು ಇಳಿಮುಖ

Team Udayavani, May 27, 2020, 8:12 AM IST

deshiya

ದೇವನಹಳ್ಳಿ: ದೇಶೀಯ ವಿಮಾನಗಳ ಹಾರಾಟ ಹಿನ್ನೆಲೆಯಲ್ಲಿ ಮಂಗಳವಾರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿ ದೆ. ಸೋಮವಾರವೇ ಕೇಂದ್ರ ಸರ್ಕಾರ ದೇಶೀಯ ವಿಮಾನಗಳ ಹಾರಾಟ ಆರಂಭಕ್ಕೆ ಸೂಚಿಸಿತ್ತು.  ವಿವಿಧ ರಾಜ್ಯಗಳಿಂದ ಬರುವ ಪ್ರಯಾಣಿಕರಲ್ಲಿ ಕ್ವಾರಂಟೈನ್‌ ಮಾಡುವ ಭಯದಿಂದ ಬೇರೆ ಬೇರೆ ರಾಜ್ಯಗಳಿಂದ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಹೀಗಾಗಿ ಹಲವು ವಿಮಾನಗಳ ಬಂದ್‌ ಆಗುವ ಸಾಧ್ಯತೆಗಳಿವೆ. ಚೆನ್ನೈ,  ದೆಹಲಿಯಿಂದ ಆಗಮಿಸುವ ಪ್ರಯಾಣಿಕರನ್ನು ಬಿಎಂಟಿಸಿ ಬಸ್‌ಗಳಲ್ಲಿ ಕ್ವಾರಂಟೈನ್‌ಗೆ ಅಧಿಕಾರಿಗಳು ಕಳುಹಿಸುತ್ತಿ  ದ್ದಾರೆ. ಸ್ಥಳದಲ್ಲೇ 15 ಆ್ಯಂಬುಲೆನ್ಸ್‌ ಮೊಕ್ಕಾಂ ಹೂಡಿವೆ. ಹಿಂದೂರ್‌ನಿಂದ ದೆಹಲಿಗೆ ಆಗಮಿಸಿ, ದೆಹಲಿಯಿಂದ  ಕೆಂಪೇಗೌಡ ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 5 ಜನ ಬಡ ಕುಟುಂಬದವರು ಕ್ವಾರಂಟೈನ್‌ಗೆ ಹಣ ಭರಿಸಲು ಸಾಧ್ಯವಿಲ್ಲ.

ಸೋಮವಾರ ದಿಂದ ವಿಮಾನ ನಿಲ್ದಾಣದ ಒಳಗಡೆ ಪರದಾಡುತ್ತಿದ್ದಾರೆ. ದೆಹಲಿಯಿಂದ  ಬಂದ ಪತ್ನಿಯನ್ನು ಹೊರಗೆ ಬಿಡುತ್ತಿಲ್ಲ. ನಮಗೆ ಸರ್ಕಾರ ಸಹಾಯ ಮಾಡಿಲ್ಲ. ಕ್ವಾರಂಟೈನ್‌ಗೆ ಹಣವನ್ನು ಸರ್ಕಾರ ಭರಿಸಲಿ ಎಂದು ಪತಿ ಏರ್‌ಪೋಟ್‌ನಲ್ಲಿ ಅಳಲು ತೋಡಿಕೊಂಡರು.

2 ಪ್ರತ್ಯೇಕ ಕೌಂಟರ್‌: ದೇಶಿಯ ಪ್ರಯಾಣಿಕರು ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿ ಗಾಗಿ 2 ಪ್ರತ್ಯೇತಕ ಕೌಂಟರ್‌ ತೆರೆಯಲಾಗಿದೆ. ಬಂದವರನ್ನು ಹೋಟೆಲ್‌ ಕ್ವಾರಂ ಟೈನ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ  ಒಂದಿಷ್ಟು ಜನ ಬಸ್‌ ಹತ್ತಲು ಆಗಮಿಸಿ ಪರಾರಿಯಾಗಲು ಯತ್ನಿಸಿ  ದ್ದರು ಎನ್ನಲಾಗಿದ್ದು ಭದ್ರತೆ ಕಲ್ಪಿಸಲಾಗಿದೆ.

750 ಪ್ರಯಾಣಿಕರು ಆಗಮನ: 2 ಅಂತಾರಾಷ್ಟ್ರೀಯ ವಿಮಾನಗಳು ಈಗಾಗಲೇ ಬಂದಿವೆ. ಬಂದ ಎಲ್ಲಾ ಪ್ರಯಾಣಿಕರನ್ನು ಸಾಂಸ್ಥಿಕವಾಗಿ ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು 177ಜನ ಬಂದಿಳಿ ದಿದ್ದಾರೆ. 18 ಡೊಮೆಸ್ಟಿಕ್‌ ವಿಮಾನ, 10  ವಿಮಾನ ರೆಡ್‌ ಝೋನ್‌ ರಾಜ್ಯಗಳಿಂದ ಬಂದಿವೆ. ಇದರಿಂದ ಸುಮಾರು 750 ಪ್ರಯಾಣಿಕರು ಆಗಮಿಸಿದ್ದಾರೆ. ಸರ್ಕಾರದ ಆದೇಶದಂತೆ ಮುಂದಿನ ಪ್ರಕ್ರಿಯೆ ನಡೆ ಯುತ್ತಿದೆ ಎಂದು ಡಿಸಿಪಿ ಭೀಮಶಂಕರ್‌ ಗುಳೇದ್‌ ತಿಳಿಸಿದರು.

6 ತಿಂಗಳ ನಂತರ ಮಗನ ದರ್ಶನ: ಕಳೆದ 6 ತಿಂಗಳಿನಿಂದ ಮೆಡಿಕಲ್‌ ವ್ಯಾಸಂಗಕ್ಕೆ ಫಿಲಿಫೈನ್ಸ್‌ಗೆ ಹೋಗಿದ್ದ ಮಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ, ಮಗನನ್ನು ಕಂಡ ತಾಯಿ ಆನಂದ ಭಾಷ್ಪ ಸುರಿಸಿದರು.  ಲಾಕ್‌ಡೌನ್‌ ಜಾರಿಗೆ ಬಂದ ದಿನದಿಂದಲೂ ಮಗನನ್ನು ಕರೆಸಿಕೊಳ್ಳಲು ತಂದೆ-ಚಿಕ್ಕಪ್ಪ ತಿರುಪತಿಗೆ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮಗನನ್ನು ಕಂಡು ಪೋಷಕರು  ಕಣ್ಣೀರು ಹಾಕಿದರು. ಇನ್ನು ಮಗನನ್ನು ನೋಡಿದರೂ ಮಾತನಾಡಲು ಆಗುತ್ತಿಲ್ಲ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.