ಜನರಿಗೆ ಸೌಲಭ್ಯ ತಲುಪಿಸುವ ಜವಾಬ್ದಾರಿ ನೌಕರರದ್ದು


Team Udayavani, Jul 16, 2019, 3:00 AM IST

janara

ಆನೇಕಲ್‌: ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಗುರುತರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ ಎಂದು ಜಿಪಂ ಅಧ್ಯಕ್ಷ ಸಿ.ಮುನಿರಾಜು ತಿಳಿಸಿದರು.

ಪಟ್ಟಣದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘದ ಕಾರ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನವಾಗಿ ಚುನಾಯಿತರಾದ ಪದಾಧಿಕಾರಿಗಳ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಆನೇಕಲ್‌ ನೌಕರರ ಸಂಘ ಕಳೆದ ಅವಧಿಯಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳ ಮೂಲಕ ನೌಕರ ಸ್ನೇಹಿಯಾಗಿ ಕೆಲಸ ಮಾಡಿತ್ತು. ನೂತನ ಸಂಘವೂ ಹೊಸ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಉತ್ತಮ ಕಾರ್ಯಗಳನ್ನು ಮಾಡಬೇಕು ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ ಮಾತನಾಡಿ, ಸರ್ಕಾರಿ ನೌಕರರ ಸಂಘವನ್ನು ಮಾದರಿ ಸಂಘವನ್ನಾಗಿ ಮಾಡುವ ದಿಸೆಯಲ್ಲಿ ಎಲ್ಲಾ ನಿರ್ದೇಶಕರ ಸಲಹೆ ಪಡೆಯಲಾಗಿದೆ.

ಸರ್ಕಾರಿ ನೌಕರರಿಗೆ ವಾರ್ಷಿಕವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲು ಚಿಂತನೆ ಮಾಡಲಾಗಿದೆ. ಅಲ್ಲದೇ, ವೃತ್ತಿ ಕೌಶಲ್ಯ ಕಾರ್ಯಾಗಾರ, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ವಿವಿಧ ಅಂಶಗಳ ಬಗ್ಗೆ ತಜ್ಞರಿಂದ ಉಪನ್ಯಾಸ ಹಾಗೂ ಸಂವಾದ ಏರ್ಪಡಿಸಲಾಗುವುದು ಎಂದರು.

ಆನೇಕಲ್‌ ತಾಲೂಕು ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಬೆಂಗಳೂರು ನಗರದ ಮಾದರಿಯ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಭತ್ಯೆ ಪಡೆಯಲು ಸರ್ಕಾರಿ ನೌಕರರ ಸಂಘವು ಪ್ರಯತ್ನ ನಡೆಸಲಿದೆ ಎಂದರು.

ಕಾರ್ಯಕ್ರಮದಲ್ಲಿ ಆನೇಕಲ್‌ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೊಡ್ಡಹಾಗಡೆ ಹರೀಶ್‌, ತಾಪಂ ಅಧ್ಯಕ್ಷೆ ಕವಿತಾ, ಉಪಾಧ್ಯಕ್ಷೆ ಚಂದ್ರಕಲಾ, ಟಿ.ವಿ.ಬಾಬು, ಮರಸೂರು ಗ್ರಾಪಂ ಅಧ್ಯಕ್ಷ ಪ್ರಭಾಕರ್‌ರೆಡ್ಡಿ, ಮುಖಂಡರಾದ ಪುರುಷೋತ್ತಮ್‌, ಡಿ.ಮಹದೇಶ್‌, ಶ್ರೀನಿವಾಸ್‌, ಬಿಇಒ ಕೆ.ಸಿ.ರಮೇಶ್‌, ನಾಗರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.