ದಿಶಾ ಕಾರ್ಯಕ್ರಮದಿಂದ ಸೌಲಭ್ಯಗಳ ಮಾಹಿತಿ


Team Udayavani, Jun 9, 2019, 3:00 AM IST

disha

ದೇವನಹಳ್ಳಿ: ಸರ್ಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಲು ರಾಜ್ಯ ಸರ್ಕಾರ ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ ಸ್ಥಾಪಿಸಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕ ಮಧು ತಿಳಿಸಿದರು.

ಕಾರಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಧಾರವಾಡ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ದಿಶಾ ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರದಿಂದ ನಡೆದ ಉದ್ಯಮಶೀಲತೆ ಪ್ರೇರಣಾ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸರಕಾರದ ಸೌಲಭ್ಯಗಳ ಬಗ್ಗೆ ತಿಳಿದುಕೊಳ್ಳುವುದು. ಕೌಶಲ್ಯಾಭಿವೃದ್ಧಿಯಡಿ ಸರ್ಕಾರ ನೀಡುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಲು, ಗ್ರಾಮೀಣ ಯುವಕ-ಯುವತಿಯರು, ಪುರುಷ-ಮಹಿಳೆಯರಿಗೆ ಸ್ವಉದ್ಯೋಗ ಸೃಜಿಸುವ ಮಾಹಿತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ವಿವರಿಸಿದರು.

ಸ‌ರ್ಕಾರದ 37 ಇಲಾಖೆಗಳ ಯೋಜನೆ ಮಾಹಿತಿ ಹೆಚ್ಚಿನವರಿಗೆ ಇರುವುದಿಲ್ಲ. ಈ ನಿಟ್ಟಿನಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅರಿವು ಮೂಡಿಸಿಕೊಳ್ಳಬೇಕು. ವಿಧ್ಯಾಭ್ಯಾಸ, ತಾಂತ್ರಿಕತೆ, ಕೈಗಾರಿಕೆ, ಸಣ್ಣ ಉದ್ದಿಮೆ ಸ್ಥಾಪನೆ, ಯೋಜನಾ ವರದಿ ತಯಾರಿಕೆಗೆ ಸರಕಾರದ ಸವಲತ್ತು, ರಿಯಾಯಿತಿ, ಸಹಾಯಧನ, ಲೆಕ್ಕಪತ್ರ ನಿರ್ವಹಣೆ ಹಾಗೂ ಸ್ವಯಂ ಉದ್ಯೋಗಕ್ಕೆ ಬೇಕಾದ ಎಲ್ಲಾ ಮಾಹಿತಿ ನೀಡಲಾಗುತ್ತದೆ. ಕಾರ್ಯಕ್ರಮದ ಸದುಪಯೋಗವನ್ನು ಪ್ರತಿ ಗ್ರಾಮಸ್ಥರು ಪಡೆದುಕೊಂಡು ಜೀವನ ಉತ್ತಮ ಪಡಿಸಿಕೊಳ್ಳುವಂತೆ ತಿಳಿಸಿದರು.

ತಾಪಂ ಸದಸ್ಯ ಶ್ರೀನಿವಾಸ್‌ ಮಾತನಾಡಿ, ಗ್ರಾಮಗಳು ಅಭಿವೃದ್ಧಿಯಾದರೆ ದೇಶ ಏಳಿಗೆ ಕಾಣುತ್ತದೆ. ಉತ್ಪಾದನೆ ಮಾಡುವ ಸಂಪತ್ತು ಹಳ್ಳಿಯಲ್ಲಿ ಉಳಿಯಬೇಕು. ಉದ್ಯಮಿಯಾಗಬೇಕು ಎಂದು ಆಸೆ ಇಟ್ಟುಕೊಂಡಿರುವ ಯುವಕರು/ಮಹಿಳೆಯರು ಸ‌ರ್ಕಾರದ ಸೌಲಭ್ಯಗಳ ಬಗ್ಗೆ ಅರಿವು ಇರುವುದಿಲ್ಲ. ಅದರ ಬಗ್ಗೆ ತಿಳಿದುಕೊಳ್ಳಲು ಇಂತಹ ಕಾರ್ಯಕ್ರಮ ಸಹಕಾರಿಯಾಗುತ್ತದೆ. ರೈತರು ಬರಗಾಲಕ್ಕೆ ಅಂಜದೇ ಧೈರ್ಯಯುತರಾಗಿ ಬದುಕಬೇಕು ಎಂದು ಸಲಹೆ ಮಾಡಿದರು.

ಗ್ರಾಪಂ ಅಧ್ಯಕ್ಷ ದೇವರಾಜ್‌ ಮಾತನಾಡಿ, ನುರಿತರಿಂದ ತರಬೇತಿ ನೀಡಿ ಜನರನ್ನು ಆರ್ಥಿಕವಾಗಿ ಸದೃಢಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಗ್ರಾಮೀಣ ಭಾಗದಲ್ಲಿರುವ ಪ್ರತಿಯೊಬ್ಬರೂ ತಮ್ಮದೇ ಆದ ಉದ್ಯೋಗ ಸೃಜಿಸಿಕೊಳ್ಳಲು ಸರಕಾರ ಹಲವಾರು ಯೋಜನೆಗಳ ಮೂಲಕ ಸಾಲ ಸೌಲಭ್ಯ, ಮಾರುಕಟ್ಟೆ, ವ್ಯಾಪಾರ ಹಣಕಾಸು ನಿರ್ವಹಣೆ, ಬ್ಯಾಂಕಿಂಗ್‌ ಹೀಗೆ ಹತ್ತು ಹಲವಾರು ಯೋಜನೆಗಳ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.

ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಮಂಜುನಾಥ್‌, ಗ್ರಾಪಂ ಉಪಾಧ್ಯಕ್ಷೆ ಆನಂದಮ್ಮ, ದಿಶಾ ಜಿಲ್ಲಾ ವ್ಯವಸ್ಥಾಪಕಿ ರತ್ನಾ, ಉದ್ದಿಮೆ ಯಶಸ್ವಿ ಮಹಿಳೆ ವಿಜಯ, ಮುಖಂಡ ಕೆ.ಸಿ.ಮುನಿಕೃಷ್ಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.