ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ


Team Udayavani, Feb 15, 2022, 12:47 PM IST

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗೆ ಖಂಡನೆ

ದೇವನಹಳ್ಳಿ: ರಾಗಿ ಖರೀದಿ, ಹಾಲಿನ ದರ ಏರಿಕೆ, ಕೃಷಿ ಕಾಯ್ದೆ ವಾಪಸಾತಿ ಮಾಡದ ರಾಜ್ಯ ಸರ್ಕಾರದ ವಿರೋಧಿ ನೀತಿ ಖಂಡಿಸಿ ತಾಲೂಕು ರೈತಸಂಘದವತಿಯಿಂದ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ನಡೆಯಿತು.

ರೈತರ ವಿರೋಧಿ: ರಾಜ್ಯ ರೈತಸಂಘದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ, ರೈತರಿಗೆ ಮಾರಕವಾದ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಈಗಾಗಲೇ ವಾಪಸ್‌ ಪಡೆದಿದೆ. ಕೃಷಿ ಕಾಯ್ದೆಹಿಂಪಡೆಯುವಂತೆ ಒತ್ತಾಯಿಸಿ ದೇಶಾದ್ಯಂತ ರೈತರುಒಂದೂವರೆ ವರ್ಷ ಪ್ರತಿಭಟನೆ ನಡೆಸಿದ ಪರಿಣಾಮಕೇಂದ್ರ ಸರ್ಕಾರ ಕಾಯ್ದೆಗಳನ್ನುಬೇಷರತ್ತಾಗಿಹಿಂಪಡೆಯಿತು. ಆದರೆ, ರಾಜ್ಯಸರ್ಕಾರ ಈಕಾಯ್ದೆಗಳನ್ನು ವಾಪಸ್‌ ಪಡೆಯದೆ ರೈತವಿರೋಧಿಧೋರಣೆ ಮುಂದುವರಿಸುತ್ತಿದೆ ಎಂದು ಹೇಳಿದರು.

ರಾಜ್ಯದ ಕೃಷಿ ಭೂಮಿಗೆ ತಿದ್ದುಪಡಿ ತಂದು ಬಂಡವಾಳ ಶಾಹಿಗಳ ಕೈಗೊಪ್ಪಿಸುವ, ಕೃಷಿ ಕಾಯ್ದೆತಿದ್ದುಪಡಿ ಮತ್ತು ಇಡೀ ದೇಶದ ಮಾರುಕಟ್ಟೆಯನ್ನುಖಾಸಗಿ ಕಂಪನಿಗಳ ಕೈವಶ ಮಾಡಲು ಹೊರಟಿರುವಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡುವ ಹುನ್ನಾರ ಅಡಗಿದೆ ಎಂದು ದೂರಿದರು.

ಸಂಕಷ್ಟದ ಸ್ಥಿತಿ: ರಾಗಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿಯಲ್ಲಿ ತಾರತಮ್ಯ ಅನುಸರಿಸಿ ದೊಡ್ಡರೈತ, ಸಣ್ಣರೈತ ತಾಂತ್ರಿಕ ದೋಷಮುಂದಿಟ್ಟು ಈ ಯೋಜನೆಯಿಂದ ರೈತರನ್ನು ತಪ್ಪಿಸುವ ಹುನ್ನಾರ ನಡೆದಿದೆ. ಅಲ್ಲದೇ, ಹಾಲಿನಬೆಲೆಗೆ ಕಡಿವಾಣ ಹಾಕಿ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾನೂನಾಗಿ ಜಾರಿಗೊಳಿಸಿ: ತಾಲೂಕು ರೈತಸಂಘದ ಅಧ್ಯಕ್ಷ ಗಾರೆ ರವಿಕುಮಾರ್‌ ಮಾತನಾಡಿ, ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ, ಬೆಂಬಲ ಬೆಲೆಯಿಲ್ಲದೆ ಪರಿತಪಿಸುತ್ತಿದ್ದಾರೆ. ರೈತವಿರೋಧಿ ಸರ್ಕಾರಗಳಿಂದ ರೈತರು ತಮ್ಮ ಭೂಮಿ ಕಳೆದುಕೊಂಡುಬೀದಿಪಾಲಾಗುವ ಸ್ಥಿತಿ ಬಂದೊದಗಿದೆ. ರೈತರು ರಾಗಿಸೇರಿ ಎಲ್ಲಾ ಉತ್ಪನ್ನಗಳನ್ನು ಮಿತಿಯಿಲ್ಲದೆ ರೈತರಿಂದಖರೀದಿ ಮಾಡಲು, ಹಾಗೂ ಬೆಂಬಲ ಬೆಲೆ ಯೋಜನೆಯನ್ನು ಕಾನೂನಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಕಸಬಾ ಹೋಬಳಿ ರೈತಸಂಘದ ಅಧ್ಯಕ್ಷ ಮುನಿನಾರಾಯಣಪ್ಪ, ಹಸಿರು ಸೇನೆ ತಾಲೂಕು ಅಧ್ಯಕ್ಷ ಶಶಿಧರ್‌, ಸೋಲೂರು ರೈತ ಮುಖಂಡಚಿಕ್ಕೇಗೌಡ, ನವೀನ್‌, ಕಾನೂನು ಸಲಹೆಗಾರ ವಕೀಲಸಿದ್ಧಾರ್ಥ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷನಾರಾಯಣಸ್ವಾಮಿ, ಅಪ್ಪಯ್ಯಣ್ಣ, ಹಸಿರು ಸೇನೆಜಿಲ್ಲಾಧ್ಯಕ್ಷ ಪ್ರಕಾಶ್‌, ತಾಲೂಕು ಗೌರವಾಧ್ಯಕ್ಷಹನುಮಂತರಾಯಪ್ಪ, ಸಂಚಾಲಕ ಕೋಡಗುರ್ಕಿಕೃಷ್ಣಪ್ಪ, ಕುಂದಾಣ ಹೋಬಳಿ ಅಧ್ಯಕ್ಷ ರಾಮಾಂಜಿನಪ್ಪ,ಉಪಾಧ್ಯಕ್ಷ ಕೃಷ್ಣಪ್ಪ, ಕಸಬಾ ಹೋಬಳಿ ಕಾರ್ಯದರ್ಶಿ ಅಪ್ಪಾಜಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.