ಫಿಸ್ ಕಟ್ಟದ್ದಕ್ಕೆ 4 ತಾಸುಬಿಸಿಲಲ್ಲಿ ನಿಲ್ಲಿಸಿದರು
Team Udayavani, Dec 16, 2017, 12:05 PM IST
ವಿಜಯಪುರ (ಬೆಂ.ಗ್ರಾಮಾಂತರ): ಪಟ್ಟಣದ ನಂದಿನಿ ಪಬ್ಲಿಕ್ ಶಾಲೆಯಲ್ಲಿ ಶುಲ್ಕ ಕಟ್ಟಿಲ್ಲವೆಂದು ವಿದ್ಯಾರ್ಥಿನಿಯೊಬ್ಬಳನ್ನು ಬಿಸಿಲಿನಲ್ಲಿ 4 ತಾಸು ನಿಲ್ಲಿಸಿದ ಘಟನೆ ವರದಿ ಯಾಗಿದೆ. ಇದರಿಂದ ಕೋಪಗೊಂಡ ಪೋಷಕರು ಶಾಲೆಯಲ್ಲಿ ಆಡಳಿತ ಮಂಡಳಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.
ಶಾಲೆಯಲ್ಲಿ ಫಿಸ್ ಕಟ್ಟಲು ತಡವಾಗಿದ್ದರಿಂದ ಮಗಳು ಮೋನಿಕಾಳನ್ನು ಗುರುವಾರ 4 ಗಂಟೆಗಳ ಕಾಲ ಬಿಸಿಲಿನಲ್ಲಿ ನಿಲ್ಲಿಸಿದ್ದರು. ಇದರಿಂದಾಗಿ ಆಕೆಗೆ ಜ್ವರ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ. ಶುಕ್ರವಾರ ಊರೊಳಗೆ ಶಾಲಾ ವಾಹನ ಬಂದಾಗ ವಾಹನಕ್ಕೆ ಮಕ್ಕಳನ್ನು ಹತ್ತಿಸಿಕೊಳ್ಳದೆ ಹಾಗೇ ಬಂದಿದ್ದಾರೆ ಎಂದು ರೆಡ್ಡಿಹಳ್ಳಿಯ ವಿದ್ಯಾರ್ಥಿನಿಯ ಪೋಷ ಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತ ಮಂಡಳಿ ಅಧ್ಯಕ್ಷ ಚೇತನ್ಗೌಡ, 400 ವಿದ್ಯಾರ್ಥಿ ಗಳು ಶುಲ್ಕ ಬಾಕಿ ಉಳಿಸಿಕೊಂಡಿದ್ದಾರೆ.
ಸರ್ಕಾರದಿಂದ ಆರ್ಟಿಇ ಯೋಜನೆಯಲ್ಲಿ ಮಕ್ಕಳ ಹಣ ಬಂದಿಲ್ಲ. ಸಂಸ್ಥೆಯಲ್ಲಿ ಶಿಕ್ಷಕರಿಗೆ ಮತ್ತು ಕೆಲಸ ಮಾಡುತ್ತಿರುವವರಿಗೆ ಸಂಬಳ ಹೇಗೆ ಕೊಡಬೇಕು. ಇವೆಲ್ಲವನ್ನು ಪೋಷಕರು ಅರ್ಥ ಮಾಡಿಕೊಂಡು ವಿದ್ಯಾರ್ಥಿಗಳ ಶುಲ್ಕ ಪಾವತಿಸಿ ಎಂದು ತಿಳಿಸಿದರು. ಸ್ಥಳಕ್ಕೆ ಧಾವಿಸಿದ ಬಿಇಒ ಗಾಯತ್ರಿದೇವಿ, ಈ ಬಗ್ಗೆ ವರದಿ ನೀಡುವಂತೆ ಆಡಳಿತ ಮಂಡಳಿಗೆ ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ