ಸಮಸ್ಯೆ ಪರಿಹರಿಸದಿದ್ದರೆ ಹೋರಾಟ

Team Udayavani, Jun 23, 2020, 6:50 AM IST

samasye-horata

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ನೇಕಾರರ ಸಂಕಷ್ಟ ಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿದ್ದರೂ ಇದುವರೆಗೂ ಸ್ಪಂದಿ ಸಿಲ್ಲ. ಸರ್ಕಾರದ ಮೇಲೆ ಒತ್ತಡ  ಹೇರಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಈ ಕುರಿತು ರಾಜ್ಯಾದ್ಯಂತ ಸಭೆ ನಡೆಸಲಾಗುತ್ತಿದೆ ಎಂದು ನೇಕಾರರ ಸಂಘಗಳ ಒಕ್ಕೂಟದ ರಾಜ್ಯಾ ಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್‌ ಹೇಳಿದರು.

ನಗರದ ಗುರುಕುಲ ಶಾಲೆಯ  ಆವರಣದಲ್ಲಿ ನಡೆದ ನೇಕಾರರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ 13.5 ಲಕ್ಷ ನೇಕಾರರ ಕುಟುಂಬಗಳಿದ್ದು, 60 ಲಕ್ಷ ನೇಕಾರರು ಇದ್ದಾರೆ. ಆದರೆ ರಾಜ್ಯ ಸರ್ಕಾರ 2 ಸಾವಿರ ಪರಿಹಾರ ಘೋಷಣೆ ಮಾಡಿದೆ. ಸರ್ಕಾರದ ಅವೈಜ್ಞಾನಿಕ  ನಿರ್ಧಾರದಿಂದಾಗಿ ನೇಕಾರರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ರಾಜ್ಯ ಸರ್ಕಾರ ಜವಳಿ ಇಲಾಖೆಗೆ ನೀಡುತ್ತಿರುವ ಶೇ.96 ರಷ್ಟು ಅನುದಾನ ಗಾರ್ಮೆಂಟ್ಸ್ ಮಾಲಿಕರಿಗೆ ಹೋಗುತ್ತಿದೆ ವಿನಾ ನೇಕಾರರಿಗೆ ಸಿಗುತ್ತಿಲ್ಲ.

ನೇಕಾ ರರ ಸಂಕಷ್ಟ  ಅರಿಯದ ಶಾಸಕರು, ಐಎಎಸ್‌ ಅಧಿಕಾರಿಗಳ ಮಾತಿನಿಂದ ನೇಕಾರರಿಗೆ ಅನ್ಯಾಯವಾಗು ತ್ತಿದೆ. ನೇಕಾರರಿಗೆ ಅವಮಾನ ಮಾಡಿದರೆ ಸಹಿಸು ವುದಿಲ್ಲ. ಈ ದಿಸೆಯಲ್ಲಿ ಮುಖ್ಯಮಂತ್ರಿ, ಜವಳಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು  ನೇಕಾರರ ಸಂಕಷ್ಟ ಅರಿಯಲು ಸಭೆ ನಡೆಸಬೇಕು. ನೇಕಾರರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಗಮನ ಸೆಳೆಯಲು ಬೆಳ ಗಾವಿಯಿಂದ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಸಲು ಈಗಾಗಲೇ 9 ಜಿಲ್ಲೆಗಳಲ್ಲಿ ನೇಕಾರರ ಪೂರ್ವಭಾವಿ ಸಭೆ ನಡೆಸಲಾಗಿದೆ.

ಮೊದಲ ಹಂತ ವಾಗಿ ಜಿಲ್ಲಾ ಕೇಂದ್ರಗಳಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನಂತರ ಪಾದಯಾತ್ರೆ ನಡೆಸಲು ದಿನಾಂಕ ನಿಗದಿಪಡಿಸಲಾಗುವುದು ಎಂದರು. ಶಾಸಕ  ಟಿ.ವೆಂಕಟರಮಣಯ್ಯ ಮಾತನಾಡಿ, ಸಿಎಂಗೆ ನಮ್ಮ ತಾಲೂಕಿನ ನೇಕಾರರ ಸಮಸ್ಯೆ ಕೇಳುವ ವ್ಯವಧಾನವಿಲ್ಲ. ತಾಲೂಕಿನ ಸಮಸ್ಯೆಗಳ ಬಗ್ಗೆ ಕೇಳಲು ಸಿಎಂ ಕಚೇ ರಿಗೆ ಹೋದರೆ ಸೌಜನ್ಯಕ್ಕಾದರೂ ಮನವಿ ಸ್ವೀಕರಿ ಸುವ ಸೌಜನ್ಯ ಹೊಂದಿಲ್ಲ.

ನೇಕಾರರ ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದರು.  ಕೋವಿಡ್‌ 19ದಿಂದಾಗಿ ನೇಯ್ಗೆ ಉದ್ಯಮ ಅವನತಿ ಹಾದಿಯಲ್ಲಿದೆ. ಹೀಗಾಗಿ ಆಳುವ ಸರ್ಕಾರಗಳು, ನೇಕಾರರ ಹಿತ ಕಾಪಾಡಬೇಕಿದೆ. ನೇಕಾರರ ಬೇಡಿಕೆ ಈಡೇರಿಸಬೇಕು. ಅದಕ್ಕೆ ಪಕ್ಷಾತೀತ,  ಸಂಘಟನಾತೀತ ಹೋರಾಟ ನಡೆಸಲೇಬೇಕಿದ್ದು, ಹೋರಾಟಕ್ಕೆ ತಮ್ಮ ಬೆಂಬಲವಿದೆ ಎಂದು ವಿವಿಧ ಪಕ್ಷಗಳ ಮುಖಂಡರು ಅಭಿಪ್ರಾಯಪಟ್ಟರು.

ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್‌.ಪ್ರಭುದೇವ್‌, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್‌,  ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್‌.ಚಂದ್ರತೇಜಸ್ವಿ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್‌ ನಾಯಕ್‌, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣೆ ಸಮಿತಿ ಅಧ್ಯಕ್ಷ ಪಿ.ಎ . ವೆಂಕಟೇಶ್‌, ಕಾರ್ಯದರ್ಶಿ ಅಶೋಕ್‌, ಸಹ ಕಾರ್ಯ ದರ್ಶಿ ಎಂ.ಮುನಿರಾಜು, ಖಜಾಂಚಿ ಕೆ.ಮಲ್ಲೇಶ್‌ ಸೇರಿ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೇಕಾರ ಮುಖಂಡರು
ಭಾಗವಹಿಸಿದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.