ನೀಲಗಿರಿ ತೋಪಿನಲಿ ಬೆಂಕಿ

10 ಎಕರೆ ತೋಪು ಬೆಂಕಿಗೆ ಆಹುತಿ

Team Udayavani, Mar 18, 2022, 3:55 PM IST

4

ದೇವನಹಳ್ಳಿ: ನೀಲಗಿರಿ ತೋಪಿನಲ್ಲಿ ಬೆಂಕಿ ಬಿದ್ದಿದ್ದರಿಂದ ಸುಮಾರು 10 ಎಕರೆ ತೋಪು ಆಹುತಿಯಾಗಿರುವ ಘಟನೆ ತಾಲೂಕಿನ ಕುಂದಾಣ ಮತ್ತು ಚಿನ್ನಕೆಂಪನಹಳ್ಳಿ ಗ್ರಾಮದ ಸಮೀಪದಲ್ಲಿ ನಡೆದಿದೆ.

ಕುಂದಾಣ ನಾಡಕಚೇರಿ ಹತ್ತಿರುವಿರುವ ರಾಜಣ್ಣ ಎಂಬುವರಿಗೆ ಸೇರಿರುವ ಸರ್ವೆ ನಂಬರ್‌ 154/1 ಮತ್ತು ಚಿನ್ನ ಕೆಂಪನಹಳ್ಳಿಯ ಪ್ರೇಮ ಎಂಬುವವರಿಗೆ ಸರ್ವೆ ನಂಬರ್‌ 79ರಲ್ಲಿ ಈ ಅವಘಡ ನಡೆದಿದೆ. ನೀಲಗಿರಿ ಮರಗಳ ತೆರವಿಗೆ ನಿರ್ದೇಶನ ನೀಡಲಾಗಿದೆ. ರೈತರು ಪರ್ಯಾಯ ಬೆಳೆ ಬೆಳೆಯಬೇಕು, ನೀಲಗಿರಿಯಿಂದ ಅಂತರ್ಜಲಕ್ಕೂ ತೊಂದರೆ ಯಾಗಲಿದ್ದು, ಬೇಸಿಗೆ ಸಮಯದಲ್ಲಿ ಬೆಂಕಿ ಅವಘಡ ಹೆಚ್ಚಾಗುತ್ತಿವೆ. ಇದರಿಂದ ಪಕ್ಕದ ಜಮೀನಿನ ಕೃಷಿಕರಿಗೂ ತೊಂದರೆ ಯಾಗಲಿದೆ. ಅದನ್ನು ಅರಿತು ಏಲ್ಲರೂ ಶೀಘ್ರವೇ ನೀಲಗಿರಿ ತೆರವಿಗೆ ಮುಂದಾಗಿ ಎಂದು ಕಂದಾಯ ಇಲಾಖೆ ಸಿಬ್ಬಂದಿ ಹೇಳಿದರು.

ಬಿದಿರು ಮತ್ತು ಇತರ ಮರಗಳಲ್ಲಿ ಗೂಡು ಕಟ್ಟಿಕೊಂಡಿದ್ದ ನೂರಾರು ಪಕ್ಷಿಗಳು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಕರಕಲಾದವು. ಮೊಟ್ಟೆಗಳನ್ನು ರಕ್ಷಿಸಲು ಜೋರು ಧ್ವನಿಯಲ್ಲಿ ಕೂಗಿದವು. ಅಕ್ಕಪಕ್ಕದ ರೈತರು ಬೆಳೆದಿದ್ದ ಬೆಳೆಗಳಿಗೆ ವ್ಯಾಪಿಸಿದ ಬೆಂಕಿ ಅಲ್ಪ ಪ್ರಮಾಣದ ಹಾನಿ ಮಾಡಿತು.

ಹೊಸ ಪದ್ಧತಿ ಅಳವಡಿಸಿ: ವಿದೇಶ ಮತ್ತು ಇತರೆ ಕಡೆಗಳಲ್ಲಿ ಬೆಂಕಿಯನ್ನು ನಂದಿಸಲು ಹೊಸ ಪದ್ಧತಿ ಅಳವಡಿಸಿಕೊಂಡಿದ್ದಾರೆ. ಆದರೆ, ಅಗ್ನಿಶಾಮಕ ದಳ ಬರುವ ತನಕ ಕಾಯುವ ಪರಿಸ್ಥಿತಿಯಿದೆ. ಬೆಂಕಿ ಅವಘಡ ಸ್ಥಳದಿಂದ ತುರ್ತು ನಂಬರ್‌ಗೆ ಕರೆ ಮಾಡಿದ ಒಂದು ತಾಸಿನ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದಾರೆ. ವಿದೇಶಗಳಲ್ಲಿ ಹೆಲಿಕಾಪ್ಟರ್‌ ಮೂಲಕ ನೀರನ್ನು ಹಾಕಿ ಬೆಂಕಿಯನ್ನು ನಂದಿಸುತ್ತಾರೆ. ಇನ್ನಾದರೂ ಸರ್ಕಾರ ಹೊಸ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಸಾವಿರಾರು ಎಕರೆ ತೋಪು ಬೆಂಕಿಗಾಹುತಿ: ಸ್ಥಳೀಯರು ಸಹಕಾರದಿಂದ ಮಣ್ಣು ಸುರಿದು ಬೆಂಕಿ ನಂದಿಸುವ ಪ್ರಯತ್ನ ಮಾಡಲಾಯಿತು. ಕೃಷಿಕರು ಬಿಂದಿಗೆಗಳಲ್ಲಿ ನೀರು ತಂದು ಪಕ್ಕ ಜಮೀನಿಗೆ ಬೆಂಕಿ ಆವರಿಸದಂತೆ ತಡೆಯಲು ಪ್ರಯತ್ನಿಸಿದರು. ಮರದ ಇದ್ದಿಲಿಗೆ ಬೇಡಿಕೆ ಹೆಚ್ಚಾಗಿದ್ದು, ಬೇಸಿಗೆಯಲ್ಲಿ ನೀಲಗಿರಿ ತೋಪುಗಳಿಗೆ ಬೆಂಕಿ ಇಡುತ್ತಾರೆ. ಪ್ರತಿ ವರ್ಷವೂ ಸಾವಿರಾರು ಎಕರೆ ತೋಪು ಬೆಂಕಿಗಾಹುತಿಯಾಗುತ್ತಿವೆ ಎಂದು ಸ್ಥಳೀಯ ರೈತರು ಆರೋಪಿಸಿದರು.

ಸಾಮಾನ್ಯವಾಗಿ ನೀಲಗಿರಿ ತೋಪುಗಳ ಮರಗಳನ್ನು ಖರೀದಿಸಲು ದಲ್ಲಾಳಿಗಳು ಬರುತ್ತಾರೆ. ವ್ಯವಹಾರ ಕುದುರದಿದ್ದರೆ ಬೆಂಕಿ ಹಚ್ಚಿ ಹೋಗುತ್ತಾರೆ ಎಂದು ಮಂಜುನಾಥ್‌ ಎಂಬ ರೈತ ಆರೋಪಿಸಿದರು. ಕಂದಾಯ ಇಲಾಖೆಯ ವಿಶ್ವನಾಥಪುರ ವೃತ್ತ ಗ್ರಾಮಲೆಕ್ಕಾಧಿಕಾರಿ ಸಂತೋಷ್‌, ಕುಂದಾಣ ಗ್ರಾಮ ಲೆಕ್ಕಾಧಿಕಾರಿ ಲಾವಣ್ಯ, ಅರಣ್ಯ ರಕ್ಷಕ ನಿಖೀಲ್, ಅರಣ್ಯ ವೀಕ್ಷಕ ರಂಜಿತ್‌, ಸ್ಥಳೀಯರು ಇದ್ದರು.

ಎಚ್ಚರಿಕೆಯಿಂದ ಇರಿ:

ಸಾಕಷ್ಟು ಸುಧಾರಿತ ಬೆಳೆ ಬೆಳೆಯಲು ಅವಕಾಶವಿದೆ. ರೈತರು ನೀಲಗಿರಿ ಬದಲು ಹೆಬ್ಬೆವು ಬೆಳೆಯಬೇಕು. ತಾಲೂಕಿನಲ್ಲಿ ಸಾಕಷ್ಟು ಕಡೆ ಬೇಸಿಗೆ ಸಮಯದಲ್ಲಿ ಇಂತಹ ಕೃತ್ಯ ಹೆಚ್ಚಾಗುತ್ತಿವೆ. ರೈತರು ಎಚ್ಚರಿಕೆಯಿಂದರಬೇಕು ಎಂದು ಅರಣ್ಯ ಇಲಾಖೆಯ ಉಪ ಅರಣ್ಯಧಿಕಾರಿ ಶಿವಶಂಕರ್‌ ಹೇಳಿದರು.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.