ಕೆರೆಗಳ ಪುನಃಶ್ಚೇತನಕ್ಕೆ ಮುಂದಾಗಿ

ಕಾರ್ಖಾನೆ ಮಾಲಿಕರಿಗೆ ಬೆಂ.ಗ್ರಾ. ಜಿಲ್ಲಾ ಅಧಿಕಾರಿ ಸಿ.ಎಸ್‌.ಕರೀಗೌಡ ಸೂಚನೆ

Team Udayavani, May 25, 2019, 1:16 PM IST

br-tdy-2

ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದ ಕಾರ್ಖಾನೆಗಳು ಸುತ್ತಮುತ್ತಲ ಕೆರೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸಿದರೆ ಹೆಚ್ಚಿನಪ್ರಮಾಣದಲ್ಲಿ ಕೆರೆಗಳ ಪುನಃಶ್ಚೇತನ ಸಾಧ್ಯ ಎಂದು ಜಿಲ್ಲಾ ಅಧಿಕಾರಿ ಸಿ.ಎಸ್‌.ಕರೀಗೌಡ ಅವರು ಹೇಳಿದರು.ತಾಲೂಕಿನ ಮಜರಾಹೊಸಹಳ್ಳಿ, ದೊಡ್ಡ ತುಮಕೂರು ಕೆರೆಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕೆರೆಗಳ ಪುನಃಶ್ಚೇತನ: ಜಿಲ್ಲೆಯಲ್ಲಿ 25ಕೆರೆಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಸಾರ್ವಜನಿಕರ ಹಾಗೂ ಜಿಲ್ಲೆಯಲ್ಲಿ ನ ವಿವಿಧ ಕೈಗಾರಿಕೆಗಳ ವತಿಯಿಂದ ಕೆರೆಗಳ ಅಭಿವೃದ್ದಿಗೆ ಉತ್ತಮ ಸಹಕಾರ ದೆರೆಯುತ್ತಿದೆ. ಕೆರೆಗಳ ಪುನಃಶ್ಚೇತನದಿಂದ ಅಂತರ್ಜಲವೃದ್ಧಿಗೆ ಸಹಕಾರಿಯಗುತ್ತದೆ. ಈ ಬಗ್ಗೆ ಕಾರ್ಖಾನೆ ಮಾಲಿಕರಿಗೆ ಮನವರಿಕೆ ಮಾಡಿಕೊಡ ಬೇಕಿದೆ ಎಂದ ಡೀಸಿ,ಸ್ಥಳದಲ್ಲಿ ಹಾಜರಿದ್ದ ರಿಟ್ಟಲ್‌ ಕಾರ್ಖಾನೆ ಸಿಬ್ಬಂದಿಗೆ ಕಂಪನಿಯಿಂದ  ಕೆರೆಗಳ ಪುನಃಶ್ಚೇತನನಕ್ಕೆ ನೆರವು ನೀಡುವಂತೆ ಮನವಿ ಮಾಡಿದರು.

ಹಣ ಕೊಟ್ಟರೂ ನೀರು ಸಿಗಲ್ಲ: ಸರ್ಕಾರವೇ ಎಲ್ಲಾ ಕೆಲಸ ಮಾಡಿಸಲಿ ಎಂದು ಕಾದು ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ದಶಕಗಳ ಹಿಂದೆ ನಮ್ಮ ಹಿರಿಯರು ಕೆರೆ, ಕುಂಟೆಗಳನ್ನು ನಿರ್ಮಿಸಿಕೊಂಡು ಸೂ ಕ್ತ ವಾಗಿ ನಿ ರ್ವ ಹಣೆ ಮಾಡು ತ್ತಿ ದ್ದ ರು. ಹಾಗಾಗಿ, ಅವರು ನೆಮ್ಮದಿಯ ಬದುಕು ನಡೆಸಲು ಸಾಧ್ಯವಾಗಿತ್ತು. ಕೆರೆಯಲ್ಲಿ ನೀರು ನಿಂತು ಅಂತರ್ಜಲ ಸೇರುತ್ತಿದ್ದ ಮಳೆ ನೀರು ಇಷ್ಟು ದಿನ ಕೃಷಿ ಮತ್ತು ಕುಡಿಯುವ ನೀರಿಗಾಗಿ ಮಾತ್ರ ಬಳಕೆಯಾಗುತ್ತಿತ್ತು. ಆದರೆ, ಈಗ ಜಿಲ್ಲೆಯಲ್ಲಿ ಸ್ಥಾಪನೆಯಾಗಿರುವ ಕಂಪನಿಗಳು, ಕೈಗಾರಿಕೆಗಳು ಸಹ ಎಲ್ಲಾ ರೀತಿಯ ಬಳಕೆಗೆ ಅಂತರ್ಜಲವನ್ನೇ ಅವಲಂಬಿಸಿವೆ. ಹೀಗಾಗಿ, ಕೆರೆಗಳ ಅಭಿವೃದ್ಧಿಗೆ ಕೈಗಾರಿಕೆ

ಗಳು ಉದಾರವಾಗಿ ಆರ್ಥಿಕ ನೆರವು ನೀಡುವ ಮೂಲಕ ಮಳೆ ನೀರು ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಬೇಕು. ಇಲ್ಲವಾದರೆ ಹಣ ನೀಡಿದರೂ ನೀರು ದೊರೆಯದಂತಹ ಭೀಕರ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಮಳೆ ನೀರು ಸಂಗ್ರಹ ಅಗತ್ಯ: ಅಂತರ್ಜಲದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಜಿಲ್ಲೆಯಲ್ಲಿನ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಕಟ್ಟಡಗಳು ಸೇರಿದಂತೆ ಮನೆಗಳಲ್ಲಿ ಮಳೆ ನೀರು ಸಂಗ್ರಹ ಮಾಡಿಕೊಳ್ಳುವಂತೆ ಈ ಗಾಗಲೇ ನೋಟಿಸ್‌ ನೀಡಲಾಗಿದ್ದು, ಈ ಕುರಿತು ಕೈಗಾರಿಕೆಗಳ ವ್ಯವಸ್ಥಾಪಕರ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.

ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹೊಂದಿಕೊಂಡಿರುವ ಚಿಕ್ಕ ತುಮಕೂರು ಬಳಿ ನಿರ್ಮಿಸಲಾಗಿರುವ ನಗರ ಸಭೆ ಒಳಚರಂಡಿ ನೀರು ಶುದ್ಧೀಕ ರಣ ಘಟ ಕದಲ್ಲಿ ನೀರು ಶುದ್ಧೀಕರಿಸದ ಕಾರಣ ಸುತ್ತಮುತ್ತಲ ಗ್ರಾಮಸ್ಥ ರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳ ಬೇಕೆಂದು ಗ್ರಾಮಸ್ಥರು ಮನವಿ ಮಾಡಿದರು.

ಉಪ ವಿಭಾಗಾಧಿಕಾರಿ ಸಿ. ಮಂಜುನಾಥ್‌,ಮಜರಾಹೊಸ ಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷೆ ಚಂದ್ರ ಕಲಾಚಂದ್ರೇ ಗೌಡ, ಗ್ರಾಮದ ಹಿರಿಯ ಮುಖಂಡರಾದ ತಿರಂಗ ರಾಜು, ರಾಮಣ್ಣ, ಆದಿತ್ಯ ನಾಗೇಶ್‌, ಶಿವ ಕುಮಾರ್‌, ಮಜರಾಹೊಸ ಹಳ್ಳಿ ಗ್ರಾಪಂ ವ್ಯಾಪ್ತಿಯ ಕೆರೆ ಳ ಅಭಿವೃದ್ಧಿ ಸಂಘದ ಸದಸ್ಯರು, ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.