ಘಾಟಿ ದನಗಳ ಜಾತ್ರೆ ನಿಲ್ಲಿಸಿದರೆ ವಿಷ ಕುಡಿಯುತ್ತೇವೆ!


Team Udayavani, Jan 18, 2023, 3:27 PM IST

ಘಾಟಿ ದನಗಳ ಜಾತ್ರೆ ನಿಲ್ಲಿಸಿದರೆ ವಿಷ ಕುಡಿಯುತ್ತೇವೆ!

ದೊಡ್ಡಬಳ್ಳಾಪುರ: “ಚರ್ಮಗಂಟು ರೋಗ ಹಿನ್ನೆಲೆಯಲ್ಲಿ ಜಾನುವಾರುಗಳ ಸಾಗಾಣಿಕೆ ಮತ್ತು ಜಾನುವಾರುಗಳ ಜಾತ್ರೆ, ಸಂತೆ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದ್ದರೂ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ದನಗಳ ಜಾತ್ರೆ ಪ್ರಾರಂಭವಾಗಿದ್ದು ಸ್ವಯಂಪ್ರೇರಿತರಾಗಿ ರೈತರು ದನಗಳ ವ್ಯಾಪಾರಕ್ಕೆ ಸಜ್ಜು ಮಾಡಿ ಕೊಳ್ಳುತ್ತಿದ್ದಾರೆ. ಒಂದು ವೇಳೆ ಪೊಲೀಸರ ಮೂಲಕ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿ ಗಳು ಕಠಿಣ ಕ್ರಮಕ್ಕೆ ಮುಂದಾದರೆ, ವಿಷ ಕುಡಿಯುತ್ತೇವೆ’ ಎಂದು ರೈತರು ಹೇಳುತ್ತಿದ್ದಾರೆ.

ಜ.23ರವರೆಗೆ ಜಾತ್ರೆ: ತಾಲೂಕಿನ ಘಾಟಿ ಕ್ಷೇತ್ರದಲ್ಲಿ ಪ್ರತಿವರ್ಷ ಭಾರೀ ದನಗಳ ಜಾತ್ರೆ ನಡೆಯುತ್ತದೆ. ಕಳೆದ ಡಿ.18ರಿಂದಲೇ ಜಾತ್ರೆ ಆರಂಭವಾಗಬೇಕಿತ್ತು. ಆದರೆ, ಈ ಬಾರಿ ಪಶುಗಳ ಆರೋಗ್ಯ ದೃಷ್ಟಿಯಿಂದ ಹಾಗೂ ಚರ್ಮಗಂಟು ರೋಗ ತಡೆಯುವ ಉದ್ದೇಶ ದಿಂದ ಜಿÇÉಾಡಳಿತದಿಂದ ಜ.30ರವರೆಗೆ ನಿಷೇಧಿಸಿ ಆದೇಶ ಹೊರಡಿಸಿತ್ತು. ಕಳೆದೊಂದು ತಿಂಗಳಿಂದ ಆದೇಶಕ್ಕೆ ಬೆಲೆ ಕೊಟ್ಟು ಸುಮ್ಮ ನಾಗಿದ್ದ ರೈತರು ಸ್ವಯಂ ಪ್ರೇರಿತರಾಗಿ ಜ.16 ರಿಂದ ಜ.23ರವರೆಗೂ ದನಗಳ ಜಾತ್ರೆಯನ್ನು ನಡೆಸಲು ಮುಂದಾಗಿದ್ದಾರೆ.

ತಾಲೂಕು ಆಡಳಿತಕ್ಕೆ ತಲೆ ಬಿಸಿ ಆರಂಭ: ದನಗಳ ಜಾತ್ರೆಗೆ ರೈತರ ಒತ್ತಡ ಹೆಚ್ಚಾದ ಹಿನ್ನೆಲೆ ನಿಷೇಧದ ನಡುವೆಯೂ ದನಗಳ ಜಾತ್ರೆ ಘಾಟಿ ಸುಬ್ರಹ್ಮಣ್ಯದಲ್ಲಿ ಪ್ರಾರಂಭವಾಗಿದೆ. ಜಾತ್ರೆ ನಿಷೇಧ ಕುರಿತಾದ ಜಿಲ್ಲಾಧಿಕಾರಿಗಳ ಆದೇಶದ ಅವಧಿ ಇನ್ನೂ 13 ದಿನ ಇದೆ. ದನಗಳ ಜಾತ್ರೆಯನ್ನು ಮುಂದು ವರಿಸುವುದು ಅಥವಾ ಬಿಡುವ ಬಗ್ಗೆ ಇನ್ನೂ ಯಾವುದೇ ತೀರ್ಮಾನವಾಗಿಲ್ಲ. ಈಗ ರೈತರು ರಾಸುಗಳ ಜಾತ್ರೆಗೆ ಸಿದ್ಧರಾಗುತ್ತಿರುವುದು ತಾಲೂಕು ಆಡಳಿತದ ಅಧಿಕಾರಿಗಳಿಗೆ ತಲೆ ಬಿಸಿಯಾಗಿದೆ.

ಹಲವು ರಾಜ್ಯ, ಜಿಲ್ಲೆಗಳಿಂದ ಆಗಮನ : ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆಯುವ ದನಗಳ ಜಾತ್ರೆ ದಕ್ಷಿಣ ಭಾರತದಲ್ಲೇ ಪ್ರಸಿದ್ಧಿ ಪಡೆದಿದೆ. ಘಾಟಿ ದನಗಳ ಜಾತ್ರೆ ತಮಿಳುನಾಡು, ಆಂಧ್ರಪ್ರದೇಶ ರೈತರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ದನಗಳ ವ್ಯಾಪಾರಕ್ಕೆ ರೈತರು ಬರುತ್ತಾರೆ. ವರ್ಷಕ್ಕೊಮ್ಮೆ ರೈತರು ತಮಗೆ ಬೇಕಾದ ದನಗಳನ್ನು ಖರೀದಿ ಮಾಡುತ್ತಾರೆ. ಜತೆಗೆ ತಾವು ಜೋಡಿ ಮಾಡಿದ ದನಗಳನ್ನು ಮಾರುವ ಮೂಲಕ ಲಾಭವನ್ನೂ ಗಳಿಸುತ್ತಾರೆ.

ಇಲಾಖೆ ಅಧಿಕಾರಿಗಳ ಮನವಿಗೂ ಜಗ್ಗದ ವಿವಿಧೆಡೆಯ ರೈತರು! : ಘಾಟಿಯಲ್ಲಿ ಪೆಂಡಾಲ್‌ಗ‌ಳನ್ನು ಹಾಕಿರುವ ರೈತರು, ದನಗಳ ವ್ಯಾಪಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಜಾತ್ರೆಯಿಂದ ವಾಪಸ್‌ ತೆರಳುವಂತೆ ಪಶು ಆರೋಗ್ಯಾಧಿಕಾರಿಗಳು ರೈತರಲ್ಲಿ ಮನವಿ ಮಾಡಿದ್ದಾರೆ. ಅಧಿಕಾರಿಗಳ ಮಾತಿಗೆ ಬಗ್ಗದ ರೈತರು, ದನಗಳ ಜಾತ್ರೆ ನಡೆಸುವುದಾಗಿ ಹಠ ತೊಟ್ಟಿದ್ದಾರೆ. ನಮಗೆ ಸರ್ಕಾರ ನೀಡುವ ನೀರು, ವಿದ್ಯುತ್‌ ಮೊದಲಾದ ಯಾವುದೇ ಸೌಕರ್ಯ ಬೇಡ. ನಮಗೆ ಜಾತ್ರೆ ನಡೆಸಲು ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದೇವೆ. ಒಂದು ವೇಳೆ ಪೊಲೀಸರ ಮೂಲಕ ದನಗಳ ಜಾತ್ರೆ ನಿಲ್ಲಿಸಲು ಅಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾದರೆ, ವಿಷ ಕುಡಿಯುತ್ತೇವೆ ಎಂದು ರೈತರು ಹೇಳುತ್ತಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

drowned

Devanahalli ಕೆರೆಯಲ್ಲಿ ಮುಳುಗಿ ನಾಲ್ವರು ಯುವಕರು ಮೃತ್ಯು

ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು

ಸರ್ಕಾರಿ ಶಾಲೆಗಳತ್ತ ಇಲ್ಲ ಒಲವು

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ