ಮಕ್ಕಳಿಗೆ ಜಂತು ಹುಳು ಮಾತ್ರೆ ಕಡ್ಡಾಯವಾಗಿ ನೀಡಿ

Team Udayavani, Sep 29, 2019, 3:00 AM IST

makkalige

ದೇವನಹಳ್ಳಿ: ದೈಹಿಕ ಬೆಳವಣಿಗೆಯ ಮೇಲೆ ದುಷ್ಪಪರಿಣಾಮ ಬೀರುವ ಜಂತು ಹುಳು ಸಮಸ್ಯೆಯನ್ನು ನಿರ್ಲಕ್ಷಿಸಬಾರದು ಎಂದು ಜಿಪಂ ಸದಸ್ಯ ಕೆ.ಸಿ ಮಂಜುನಾಥ್‌ ತಿಳಿದರು. ತಾಲೂಕಿನ ಕನ್ನಮಂಗಲ ಗ್ರಾಮದ ಮಾರುತಿ ವಿದ್ಯಾ ಮಂದಿರ ಶಾಲೆಯಲ್ಲಿ ಆರೋಗ್ಯ ಇಲಾಖೆ ಹಮ್ಮಿ ಕೊಂಡಿದ್ದ ಶಾಲಾ ಮಕ್ಕಳಿಗೆ ಜಂತುಹುಳು ಮಾತ್ರೆ ವಿತರಿಸುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಾತ್ರೆ ನುಂಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.

ಜಂತುಹುಳುವಿನಿಂದ ಮಕ್ಕಳಲ್ಲಿ ರಕ್ತ ಹೀನತೆ ಹಾಗೂ ಅಪೌಷ್ಟಿಕತೆ ಉಂಟಾಗಿ ಬೆಳವಣಿಗೆ ಕುಂಠಿತವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ಆರೋಗ್ಯ ಹದಗೆಟ್ಟರೆ ವಿದ್ಯಾವಂತರಾಗಲು ಸಾಧ್ಯವಿಲ್ಲ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ ಎಂದರು.

ಹೀಗಾಗಿ ಜಂತುಹುಳು ಮಾತ್ರೆ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು. ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುವುದಕ್ಕೆ ಜಂತುಹುಳು ಕಾರಣವಾಗುವುದು. ಬಹಿರ್ದೆಸೆ ಹಾಗೂ ಕಲುಷಿತ ಪ್ರದೇಶದಿಂದ ಉತ್ಪತ್ತಿಯಾ ಗುವ ಜಂತು ಹುಳು ಮಕ್ಕಳ ದೇಹ ಸೇರಿದಾಗ ಶೇ.40-50 ರಕ್ತ ಹೀನತೆಯ ಜೊತೆಗೆ ಮಾರಣಾಂತಿಕ ಸ್ಥಿತಿಗೆ ತಲುಪುವ ಸಾಧ್ಯತೆಯೂ ಇರುತ್ತದೆ.

ಶ‌ುಚಿತ್ವ ಹಾಗೂ ಬಯಲು ಮಲ ವಿಸರ್ಜನೆಯಿಂದ ಮಗುವಿಗೆ ಬೇಗ ರೋಗ ತಗುಲುವ ಸಾಧ್ಯತೆ ಹೆಚ್ಚಿದ್ದು, ಮಕ್ಕಳು ಶುಚಿತ್ವದ ಬಗ್ಗೆ ಗಮನ ಹರಿಸಬೇಕು. ಬೆರಳುಗಳ ಉಗುರುಗಳನ್ನು ಸ್ವತ್ಛವಾಗಿಟ್ಟು ಕೊಳ್ಳಬೇಕು. ಕೈ ತೊಳೆದು ಆಹಾರ ಸೇವಿಸಬೇಕು ಎಂದು ಸಲಹೆ ನೀಡಿದರು.

ಮಾರುತಿ ವಿದ್ಯಾ ಮಂದಿರ ಶಾಲೆ ಸಂಸ್ಥಾಪಕ ಅಧ್ಯಕ್ಷ ಶ್ರೀನಿವಾಸ್‌ ಮಾತನಾಡಿ, ಜೀವನದಲ್ಲಿ ಎಲ್ಲಾ ಐಶ್ವರ್ಯಕ್ಕಿಂತ ಮನುಷ್ಯನಿಗೆ ಆರೋಗ್ಯವೇ ಉನ್ನತವಾಗಿದ್ದು, ಆರೋಗ್ಯವಂತ ಮಕ್ಕಳೆ ದೇಶದ ಆಸ್ತಿ. ಜಂತು ಹುಳು ಆರೋಗ್ಯಕ್ಕೆ ಮಾರಕವಾಗಿದ್ದು, ಕಲುಷಿತ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣು ಮಕ್ಕಳಲ್ಲಿ ಬೇಗನೆ ಆವರಿಸಿಕೊಂಡು ರಕ್ತದ ಕೊರತೆ ಮಾಡುವುದಲ್ಲದೆ ಅಶಕ್ತರನ್ನಾಗಿಸುತ್ತದೆ.

ಜಂತು ಹುಳು ಚಿಕ್ಕ ಮಕ್ಕಳನ್ನು ಹೆಚ್ಚು ಭಾದಿಸುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆಯೂ ಗಂಭೀರ ದುಷ್ಪಪರಿಣಾಮ ಬೀರುತ್ತದೆ ಎಂದರು. ಈ ವೇಳೆ ಮಾರುತಿ ವಿದ್ಯಾ ಮಂದಿರ ಶಾಲೆಯ ಕಾರ್ಯದರ್ಶಿ ರಾಧಾ ಶ್ರೀನಿವಾಸ್‌, ಮುಖ್ಯ ಶಿಕ್ಷಕ ರಾಮ ಚಂದ್ರಪ್ಪ, ದೈಹಿಕ ಶಿಕ್ಷಕ ಚಂದ್ರಪ್ಪ, ಕುಂದಾಣ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಕಿ ಅಂಜಲಿ ಇದ್ದರು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.