Udayavni Special

ನಮಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ


Team Udayavani, Mar 5, 2019, 7:45 AM IST

namage.jpg

ದೇವನಹಳ್ಳಿ: ನಗರದ ವಿಜಯಪುರ ರಸ್ತೆಯಲ್ಲಿರುವ ಸರ್ವೆ ನಂ.134ರಲ್ಲಿ ಕಳೆದ 50 ವರ್ಷಗಳಿಂದ ಉಳುಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರೈತರ ಜಮೀನನ್ನು ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ನೀಡಿರುವುದರಿಂದ ನಮಗೆ ಜಾಗವಿಲ್ಲದಂತಾಗಿದೆ. ಕೂಡಲೇ ನಮಗೆ ಪರ್ಯಾಯ ಜಾಗ ಮತ್ತು ಪರಿಹಾರ ನೀಡಬೇಕೆಂದು ರೈತರು ಕಪ್ಪು ಪಟ್ಟಿ ಧರಿಸಿ ಶಂಕುಸ್ಥಾಪನಾ ಸ್ಥಳದ ಬಳಿ ಪ್ರತಿಭಟನೆ ನಡೆಸಿದರು.

ಕೃಷಿ ಜಮೀನು ಕಳೆದುಕೊಂಡ ನಾವು ಸುಮಾರು 50 ವರ್ಷಗಳಿಂದ ವ್ಯವಸಾಯ ಮಾಡಿಕೊಂಡು ಬಂದಿದ್ದೇವೆ. ಆದರೆ, ಇಂದು ನಮಗೆ ಮೋಸ ಮಾಡಿ ಕೋರ್ಟ್‌ ಕಟ್ಟಲು ಹೊರಟಿದ್ದಾರೆ. ನಾವು ಎಲ್ಲಿಗೆ ಹೋಗಬೇಕು. ನಮ್ಮ ಜಾಗವನ್ನು ಈ ರೀತಿ ಮಾಡಿದರೆ ನಮ್ಮ ಮಕ್ಕಳ ಗತಿಯೇನು ಎಂದು ಕಣ್ಣಿರಿಟ್ಟು ಗೋಳಾಡುತ್ತಿದ್ದ ದೃಶ್ಯಗಳು ಜನಸಾಮಾನ್ಯರ ಕಣ್ಣಲ್ಲಿ ನೀರು ಬರುವಂತೆ ಮಾಡಿದವು. ಇನ್ನಾದರೂ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನೊಂದ ರೈತರಿಗೆ ಪರಿಹಾರ ನೀಡುವಂತಾಗಬೇಕೆಂದು ರೈತರು ಆಗ್ರಹಿಸಿದರು.

ರೈತ ನಾಯಕಿ ಪ್ರಭಾವತಿ ಮಾತನಾಡಿ, ಕಳೆದ 50 ವರ್ಷಗಳಿಂದ ಈ ಜಾಗದಲ್ಲಿ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡು ವ್ಯವಸಾಯ ಮಾಡುತ್ತ ಜೀವನ ಸಾಗಿಸುತ್ತಿದ್ದೇವೆ. ಇದೀಗ ದಿಢೀರ್‌ ಎಂದು ತರಾತುರಿಯಲ್ಲಿ ನ್ಯಾಯಾಲಯಕ್ಕಾಗಿ ಜಾಗವನ್ನು ವಶಪಡಿಸಿಕೊಂಡಿರುವುದು ನಮಗೆ ತುಂಬಲಾರದ ನಷ್ಟ ಉಂಟಾಗಿದೆ. ಸರ್ವೆ ನಂ.134ರಲ್ಲಿ 120 ಎಕರೆಯಲ್ಲಿ ಈಗ 82 ಎಕರೆ ಜಾಗವಿದ್ದು, ಅದರಲ್ಲಿ 64 ಜನರು ರೈತದ್ದಾಗಿದೆ. ಅವರ ಮಂಜೂರಾತಿ ಜಮೀನುಗಳನ್ನು ವಜಾಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಮಹಿಳೆ ಪಿಳ್ಳಮ್ಮ ಮಾತನಾಡಿ, 1964ರಿಂದ ಅನುಭೋಗದಲ್ಲಿದ್ದೇವೆ. 1983ರಲ್ಲಿ ಹಕ್ಕುಪತ್ರವನ್ನು ನೀಡಿದ್ದಾರೆ. ಏಕಾಏಕಿ ವಜಾಗೊಳಿಸಿರುವುದರಿಂದ ನಮ್ಮ ಪರಿಸ್ಥಿತಿ ಸಂಕಷ್ಟದಲ್ಲಿದೆ ಎಂದು ಅಳಲು ತೋಡಿಕೊಂಡರು. ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ ಪೊಲೀಸರು, ನೀವು ಪ್ರವಾಸಿ ಮಂದಿರಕ್ಕೆ ಬನ್ನಿ. ನಿಮ್ಮ ಸಮಸ್ಯೆ ಬಗ್ಗೆ ಉಪವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಹೇಳಿ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಸರ್ವೆ ನಂಬರ್‌ 134ರ ಜಮೀನು ಕಳೆದುಕೊಂಡ ರೈತರು ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

Championd

ಸೂಪರ್‌ ಚೆನ್ನೈಗೆ 4ನೇ ಐಪಿಎಲ್‌ ಕಿರೀಟ

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

“ಸರ್ದಾರ್‌ ಪಟೇಲ್‌ರ ಹಾದಿಯಲ್ಲೇ ನಡೆಯಿರಿ’

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಜೆಇಇ- ಅಡ್ವಾನ್ಸ್ಡ್ ಫ‌ಲಿತಾಂಶ ಪ್ರಕಟ: ಮೃದುಲ್‌ ಟಾಪರ್‌

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಉನ್ನತ ಶಿಕ್ಷಣ ಸಚಿವರಿಗೆ ಸನ್ಮಾನ ಸಲ್ಲಿಸಿದ ದುಬೈ ಕನ್ನಡಿಗರು

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಭೀತಿ ಹುಟ್ಟಿಸಲು ನಾಗರಿಕರ ಹತ್ಯೆ: ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಮಾಜಿ ಪಿಎಂ ಮನಮೋಹನ್‌ ಸಿಂಗ್‌ ಆರೋಗ್ಯ ಸ್ಥಿರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ

ವಿಮಾನ ನಿಲ್ದಾಣಗಳಲ್ಲಿ ಮೈಸೂರು ಸಿಲ್ಕ್ ಮಳಿಗೆ

ವಿಮಾನ ನಿಲ್ದಾಣಗಳಲ್ಲಿ ಮೈಸೂರು ಸಿಲ್ಕ್ ಮಳಿಗೆ

ಆನೆ ಮರಿ ಸಾವು

ನಾಪತ್ತೆಯಾಗಿದ್ದ ಮರಿಯಾನೆ ಶವವಾಗಿ ಪತ್ತೆ

street play

ಸೌಲಭ್ಯ ಪಡೆಯಲು ಬೀದಿನಾಟಕದಿಂದ ಜಾಗೃತಿ ಅಭಿಯಾನ

ಕೊರೊನಾದಿಂದ ಮೃತಪಟ ಕುಟುಂಬಕ್ಕೆ ಪರಿಹಾರ ವಿತರಣೆ

ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ವಿತರಣೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಜಡ್ಕಲ್‌ನಲ್ಲಿ ಇಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

Uber Cup badminton:

ಉಬೆರ್‌ ಕಪ್‌ ಬ್ಯಾಡ್ಮಿಂಟನ್‌ : ಕ್ವಾರ್ಟರ್‌ ಫೈನಲ್‌ನಲ್ಲಿ ಎಡವಿದ ಭಾರತ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಶಿಕ್ಷಕ ಸಣ್ಣ ತಿಮ್ಮಯ್ಯರ ದೊಡ್ಡತನ- ಶಿಕ್ಷಣ ಸಚಿವರ “ಪ್ರೌಢ’ ಸರಳತನ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

ಸ್ಯಾಫ್ ಫುಟ್‌ಬಾಲ್ ಫೈನಲ್‌: ಇಂದು ಭಾರತ-ನೇಪಾಲ ಕಾಳಗ

ಕೀನ್ಯಾದ ಖ್ಯಾತ ಓಟಗಾರ್ತಿ ಟಿರೊಪ್‌ ಕೊಲೆ

ಕೀನ್ಯಾದ ಖ್ಯಾತ ಓಟಗಾರ್ತಿ ಟಿರೊಪ್‌ ಕೊಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.