ಶತಮಾನದ ಸರ್ಕಾರಿ ಶಾಲೆ ಶೌಚಾಲಯ ಶಿಥಿಲ: ಪರದಾಟ

Team Udayavani, Jan 26, 2019, 7:22 AM IST

tio.jpg

ನೆಲಮಂಗಲ: ಪಟ್ಟಣದ ಹೃದಯ ಭಾಗದಲ್ಲಿರುವ ಶತಮಾನದ ಸರ್ಕಾರಿ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯಗಳು ಶಿಥಿಲ ಗೊಂಡಿದ್ದರಿಂದ ಮಕ್ಕಳು ಪರದಾಡುವಂತಾಗಿದೆ.

ಶಾಲೆಯಲ್ಲಿ 1ನೇ ತರಗತಿಯಿಂದ 7ನೇ ತರಗತಿ ವರೆಗೆ ಪ್ರಸ್ತುತ 125 ಮಕ್ಕಳು ಶಿಕ್ಷಣ ಪಡೆಯು ತ್ತಿದ್ದಾರೆ. ಸರ್ಕಾರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ, ಮನೆಗೊಂದು ಶೌಚಾಲಯವೆಂದು ಕೋಟ್ಯಂತರ ರೂ. ಪ್ರಚಾರಕ್ಕಾಗಿ ಖರ್ಚು ಮಾಡುತ್ತಿದೆ. ಆದರೆ, ಭವಿಷ್ಯದ ಪ್ರಜೆಗಳನ್ನು ನಿರ್ಮಾಣ ಮಾಡುವ ಸರ್ಕಾರಿ ಶಾಲೆಯಲ್ಲಿ ಸರ್ಕಾರದ ಉತ್ತಮ ಶೌಚಾಲ ಯ ನಿರ್ಮಾಣ ಮಾಡುವಲ್ಲಿ ವಿಫ‌ಲವಾಗಿರುವುದು ದುರಂತ ಎಂಬ ಆರೋಪಗಳು ಕೇಳಿಬರುತ್ತಿವೆ.

ಕರ್ತವ್ಯ ಪ್ರಜ್ಞೆಗೆ ಹಿಡಿದ ಕೈಗನ್ನಡಿ: ಪಟ್ಟಣದ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ತಾಲೂಕಿಗೆ ಮಾದರಿ ಶಾಲೆಯಾಗಿ, ಮೂಲಭೂತ ಸೌಕರ್ಯಗಳ ಲಭ್ಯತೆಯ ಬಗ್ಗೆ ಸರ್ಕಾರಿ ಶಾಲಾ ಮಕ್ಕಳಿಗೆ ಮನವ ರಿಕೆ ಮಾಡಿಕೊಡುವಂತೆ ಇರಬೇಕಿತ್ತು. ಆದರೆ, ಮಾದರಿ ಶಾಲೆಯಲ್ಲಿ ಕನಿಷ್ಠ ಶೌಚಾಲಯವೇ ಸರಿ ಯಾಗಿಲ್ಲದಿರುವುದು ತಾಲೂಕಿನ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕರ್ತವ್ಯ ಪ್ರಜ್ಞೆಗೆ ಹಿಡಿದ ಕೈಗನ್ನಡಿ ಎನ್ನಬಹುದಾಗಿದೆ.

ಶೌಚವಿಲ್ಲದ ಶಾಲೆ: ಹಳ್ಳಿಗಳ ಶಾಲೆಗಳಲ್ಲಿ ಶೌಚಾಲಯವಿಲ್ಲ ಎಂದರೆ ಬಯಲನ್ನಾದರೂ ಉಪಯೋಗಿ ಸುತ್ತಾರೆ. ಪಟ್ಟಣದ ಶಾಲೆಗಳಲ್ಲಿ ಶೌಚಾಲಯದ ಸೌಲಭ್ಯ ಸರಿಯಿಲ್ಲದಿದ್ದರೆ ಮಕ್ಕಳ ಸ್ಥಿತಿ ಏನಾಗಬೇಕು. ಶೌಚಾಲಯದ ಬಾಗಿಲು ಮುರಿದು, ಪೈಪುಗಳು ಕಿತ್ತು ಹೋಗಿರುವ ಶೌಚಾಲಯದ ಒಳಗೆ ಮಕ್ಕಳು ಹೋಗುವುದಾದರೂ ಹೇಗೆ? ಅದನ್ನು ಬಳಕೆ ಮಾಡುವುದಾದರೂ ಹೇಗೆ? ಇಂತಹ ಪರಿಸ್ಥಿತಿ ಪಟ್ಟಣದ ಸರ್ಕಾರಿ ಶಾಲೆಯಲ್ಲಿದೆ ಎಂದರೆ ಸರ್ಕಾರ ಕ್ಕೆ ಇದಕ್ಕಿಂತ ಅವಮಾನದ ಸಂಗತಿ ಬೇರೊಂದಿಲ್ಲ.

ಶಾಲೆಗೆ ಅನುದಾನವಿಲ್ಲವೇ?: ಪಟ್ಟಣದ ಶಾಲೆ ಯಲ್ಲಿ ಉತ್ತಮ ಶೌಚಾಲಯ ನಿರ್ಮಿಸಲು ಸರ್ಕಾ ರದ ಅನುದಾನವಿಲ್ಲವೇ ಅಥವಾ ಸರ್ಕಾರಿ ಶಾಲೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಯೇ. ಬಡ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದುತ್ತಿರು ವುದೇ ತಪ್ಪಾ ? ಬಡಮಕ್ಕಳು ಉತ್ತಮ ಶೌಚ ಬಳಸಬಾರದೇ?ಎಂಬ ಪ್ರಶ್ನೆ ಪೋಷಕರದ್ದಾಗಿದೆ.

ಶತಮಾನದ ಶಾಲೆ: ಪಟ್ಟಣದ ಬಡಮಕ್ಕಳಿಗೆ ಶಿಕ್ಷಣ ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳನ್ನು ಸಾಧಕ ರನ್ನಾಗಿ ಮಾಡಿದ ಈ ಶಾಲೆ 1904ರಲ್ಲಿ ಪ್ರಾರಂಭ ವಾಗಿ 2004ರಲ್ಲಿ ಶತಮಾನೋತ್ಸವವನ್ನು ಆಚರಿಸಿ ಕೊಂಡಿದೆ. ಈ ಶಾಲೆಯಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿ ಗಳು ತಾಲೂಕಿನಲ್ಲಿ ಗ್ರಾಪಂ ಸದಸ್ಯರು, ಪುರಸಭೆ ಸದಸ್ಯರು, ತಾಪಂ, ಜಿಪಂ ಸದಸ್ಯರು ಹಾಗೂ ಶಾಸಕರು, ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಆದರೆ, ಈ ಶಾಲೆಯಲ್ಲಿ ಇಂದು ಉತ್ತಮ ಶೌಚವಿಲ್ಲ.

ಶಾಸಕರೇ ಸ್ಪಂದಿಸಿ: ಪಟ್ಟಣದ ಈ ಶಾಲೆ ಬಗ್ಗೆ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಅವರು ಗಮನ ಹರಿಸಿ, ಶಾಸಕರ ಅನುದಾನ ಅಥವಾ ಯಾವುದಾದರೂ ರೂಪದಲ್ಲಿ ನೆರವು ನೀಡಿ ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಬೇಕೆಂಬುದು ಪೋಷಕರ ಆಗ್ರಹ.

ಕ್ರಮದ ಭರವಸೆ: ಸರ್ಕಾರಿ ಕ್ಷೇತ್ರ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಲೋಕೇಶ್‌ ಪ್ರತಿಕ್ರಿಯಿಸಿ ಶೌಚಾಲಯ ತೀರಾ ಶಿಥಿಲಾವಸ್ಥೆ ಯಲ್ಲಿದ್ದು, ದುರಸ್ತಿ ಮಾಡಿಸಲಾಗುತ್ತಿದೆ ಎಂದು ತಿಳಿಸಿದರು. ಪುರಸಭೆ ಮುಖ್ಯಾಧಿಕಾರಿ ಶಿವಪ್ರಕಾಶ್‌ ಪ್ರತಿಕ್ರಿಯಿಸಿ, ತಕ್ಷಣ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಇನ್ನೆರಡು ದಿನಗಳಲ್ಲಿ ಸಮಸ್ಯೆ ಬಗೆಹರಿ ಸುತ್ತೇವೆ ಎಂದು ಭರವಸೆ ನೀಡಿದರು.

ಆರ್‌.ಕೊಟ್ರೇಶ್‌

ಟಾಪ್ ನ್ಯೂಸ್

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.