“ಅಂಗವಿಕಲರಿಗೆ ಅನುದಾನ ತಲುಪಲಿ

Team Udayavani, Dec 24, 2017, 1:49 PM IST

blore-g-4.jpg

ದೇವನಹಳ್ಳಿ: ಸರ್ಕಾರ ಗ್ರಾಪಂ ಮತ್ತು ಪುರಸಭೆಗಳಲ್ಲಿ ಶೇ.3ರ ಅನುದಾನ ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ್ದು, ಅದರಂತೆ ಅಂಗವಿಕಲರಿಗೆ ನೇರವಾಗಿ ಅನುದಾನ ಹೋಗುವಂತೆ ಆಗಬೇಕು ಎಂದು ಶಾಸಕ ಪಿಳ್ಳಮುನಿಶಾಮಪ್ಪ ಹೇಳಿದರು.

ನಗರದ ಗುರುಭವನದಲ್ಲಿ ಅಭಿವೃದ್ಧಿ ಫೌಂಡೇಷನ್‌ ವತಿಯಿಂದ ಹಮ್ಮಿಕೊಂಡಿದ್ದ 5ನೇ ವಿಶ್ವಅಂಗವಿಕಲರ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಅಂಗವಿಕಲರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕೌಶಲ್ಯ ತರಬೇತಿ ಪಡೆದ ಅಂಗವಿಕಲರಿಗೆ ಪ್ರಮಾಣ ಪತ್ರ ವಿತರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಾನೂನು ಪಾಲಿಸಿ: ಹಲವಾರು ನ್ಯೂನ್ಯತೆ ಯಿಂದ ಇದ್ದರವರು ಅಂಗವಿಕಲರಾಗಿರುತ್ತಾರೆ. ಸರ್ಕಾರ ಶೇ.3ರ ಅನುದಾನವನ್ನು ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಸರಿಯಾದ ರೀತಿ ಸದ್ಭಳಕೆ ಮಾಡುವಂತೆ ಕಡ್ಡಾಯ ಮಾಡಬೇಕು. ಕಾನೂನು ಪಾಲನೆ ಸರಿಯಾದ ರೀತಿ ಮಾಡಬೇಕು ಎಂದು ಹೇಳಿದರು. 

ಅಂಗವಿಲಕರು ಸಾಧನೆ ಗಣನೀಯ: ಶಾಸಕರ ಅನುದಾನದಲ್ಲಿ ಅಂಗವಿಕಲರಿಗೆ ಮೀಸಲಿಟ್ಟಿರುವ 30 ಲಕ್ಷ ರೂ. ಅನುದಾನವಿದ್ದು, ಅಂಗವಿಕಲರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಕ್ರಿಯಾಯೋಜನೆ ರೂಪಿಸಲಾಗುವುದು. ದೇಶದಲ್ಲಿ ಬಹಳಷ್ಟು ವಿಕಲಾಂಗರು ಇದ್ದು, ಅವರಲ್ಲಿ ಸಾಧನೆ ಮಾಡುವ ಛಲವಿದೆ. ಹಾಗೇಯೇ ಸಾಧನೆ ಮಾಡಿ ತೋರಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಗಳನ್ನು ಹೊರ ಹಾಕುವ ಮೂಲಕ ಸಾಧನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಅವಕಾಶಗಳು ಹೆಚ್ಚು ನೀಡಿನ ಸಾಕು: ಕರ್ನಾಟಕ ಅಂಗವಿಕಲರ ಅಧಿನಿಯಮ 1995ರ ಸಹಾಯಕ ಆಯುಕ್ತ ಎಸ್‌.ಕೆ. ಪದ್ಮನಾಭ್‌ ಮಾತನಾಡಿ, ರಾಜ್ಯದಲ್ಲಿ ಹದಿನಾಲ್ಕೂವರೆ ಲಕ್ಷ ಅಂಗವಿಕಲರು ಇದ್ದಾರೆ. ಸರ್ಕಾರಗಳು ಅಂಗವಿಕಲರಿಗಾಗಿ ಅನೇಕ ಸೌಲಭ್ಯಗಳನ್ನು ಕಲ್ಪಿಸಿವೆ. ಅಂಗವಿಕಲರಿಗೆ ಅನುಕಂಪ ಬೇಡ ಅವಕಾಶಗಳು ಹೆಚ್ಚು ನೀಡಬೇಕು. 

ಸಾಮಾಜಿಕ ಭದ್ರತೆಯ ಅಡಿಯಲ್ಲಿ ಪಿಂಚಣಿಯನ್ನು 9 ಲಕ್ಷ ಜನರಿಗೆ ನೀಡಲಾಗುತ್ತಿದೆ. 12ವರ್ಷ ಒಳಗಿನವರು ಪಿಂಚಣಿಗೆ ನಾಡ ಕಚೇರಿಗಳಲ್ಲಿ ಎಲ್ಲಾ ಮಾಹಿತಿ ದಾಖಲಾತಿಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು. ಅಂಗವಿಕಲರಿಗೆ ಸರ್ಕಾರ ಹಲವಾರು ಸೌಲಭ್ಯ ನೀಡುತ್ತಿದ್ದು ಇದರ ಸದ್ಭಳಕೆಯಾಗಬೇಕು ಎಂದು ಕಿವಿಮಾತು ಹೇಳಿದರು.

ಆತ್ಮಸ್ಥೈರ್ಯ ತುಂಬಿ: ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌ ಮಾತನಾಡಿ, ಅಂಗವಿಕಲರು ಸಮಾಜದ ಎಲ್ಲ ರಂಗದ
ಲ್ಲಿಯೂ ಮುಂದಿದ್ದಾರೆ. ಅವರಿಗೆ ಯಾವುದೇ ರೀತಿಯ ಅನುಕಂಪದ ಅವಶ್ಯಕತೆ ಇಲ್ಲ. ಆತ್ಮಸ್ಥೈರ್ಯ ತುಂಬಿ ಮಾನವೀಯತೆ ಮೆರೆಯಬೇಕಾಗಿದೆ. ಅಂಗವಿಕಲತೆ ಪೋಲಿಯೋ ಇತರೆ ನ್ಯೂನ್ಯತೆಯಿಂದ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಫೌಂಡೇಶನ್‌ ಮ್ಯಾನೇಜಿಂಗ್‌ ಟ್ರಸ್ಟಿ ಜಿ.ಭಾಗ್ಯ, ಬಿಇಒ ಗಾಯತ್ರಿದೇವಿ, ಜಿಲ್ಲಾ ಕಾಂಗ್ರೆಸ್‌
ಹಿಂದುಳಿದ ವರ್ಗದ ಅಧ್ಯಕ್ಷ ಅಪ್ಪಣ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ. ನಾರಾಯಣಸ್ವಾಮಿ, ಪುರಸಭೆ ಸದಸ್ಯರಾದ ಎನ್‌. ಶಶಿಕುಮಾರ್‌, ಎಂ.ಕುಮಾರ್‌, ಜಿಲ್ಲಾ ಜೆಡಿಎಸ್‌ ಸಂಘಟನಾ ಕಾರ್ಯದರ್ಶಿ ನಲ್ಲೂರು ವೆಂಕಟೇಗೌಡ, ಜೆಡಿಎಸ್‌ ತಾಲೂಕು ಮಾಹಿತಿ ಮತ್ತು ತಂತ್ರಜ್ಞಾನ ಘಟಕದ ಅಧ್ಯಕ್ಷ ಅನಿಲ್‌ ಯಾದವ್‌, ರಾಷ್ಟ್ರಪ್ರಶಸ್ತಿ ಪುರಸ್ಕೃತ ಅಂಗವಿಕಲರ ಸಮಾಜ ಕ್ಷೇತ್ರದ ಡಾರ್ವಿನ್‌ ಮೊಸಿಸ್‌, ಜಿ. ರಾಮಚಂದ್ರ, ವಿಜಯಕಾಂತ್‌ ತಿವಾರಿ, ಮೋಹನ್‌ ಮತ್ತಿತತರಿದ್ದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.