ಅವೈಜ್ಞಾನಿಕ ಕೆಳ ಸೇತುವೆಯಿಂದ ಜನತೆಗೆ ಸಂಕಷ್ಟ

Team Udayavani, Sep 25, 2019, 3:00 AM IST

avygnanika

ದೇವನಹಳ್ಳಿ: ರೈಲ್ವೆ ಇಲಾಖೆ ನಿರ್ಮಿಸಿದ ಅವೈಜ್ಞಾನಿಕ ರೈಲ್ವೆ ಕೆಳ ಸೇತುವೆ (ಅಂಡರ್‌ಪಾಸ್‌)ಗೆ ಸೋಮವಾರ ರಾತ್ರಿ ಮಳೆ ನೀರು ನುಗ್ಗಿದ್ದರಿಂದ ಅಂಡರ್‌ಪಾಸ್‌ನಲ್ಲಿ ಸಂಚರಿಸಲು ತೊಂದರೆಯಾದ ಹಿನ್ನಲೆಯಲ್ಲಿ ಕೂಡಲೇ ಮೇಲ್ಸೇತುವೆ ನಿರ್ಮಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕು ಎಂದು ಯರ್ತಿಗಾನ ಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗ್ರಹಿಸಿದರು.

ರಾಷ್ಟ್ರೀಯ ಹೆದ್ದಾರಿ-7 ರಿಂದ ಕನ್ನಮಂಗಲ ಗೇಟ್‌ನಿಂದ ಯರ್ತಿಗಾನ ಹಳ್ಳಿಗೆ ಹೋಗುವ ರಸ್ತೆಯಲ್ಲಿ ರೈಲ್ವೆ ಇಲಾಖೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ಈ ರಸ್ತೆಯಿಂದ ಯರ್ತಿಗಾನ ಹಳ್ಳಿ ಮಾರ್ಗವಾಗಿ ಮಲ್ಲೇನ ಹಳ್ಳಿ, ಮುತ್ತಕದ‌ ಹಳ್ಳಿ, ಚಿಕ್ಕನ ಹಳ್ಳಿ, ಮೈಲನ ಹಳ್ಳಿ, ಬಾಗಲೂರು ಮಾರ್ಗವಾಗಿ ಬೆಂಗಳೂರು ಸಂಪರ್ಕದ ರಸ್ತೆಯಾಗಿದೆ. ಭಾರಿ ಮಳೆಯಿಂದ ಅಂಡರ್‌ಪಾಸಿನಲ್ಲಿ ಹೆಚ್ಚು ನೀರು ತುಂಬುವುದರಿಂದ ಜನ ಓಡಾಡಲು ಪರದಾಡುವಂತಾಗಿದೆ. ಕೂಡಲೇ ರೈಲ್ವೆ ಇಲಾಖೆ ಅಂಡರ್‌ಪಾಸ್‌ ಬದಲು ಮೇಲ್ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಹಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ರಸ್ತೆಯಾಗಿರುವುದರಿಂದ ದೇವನಹಳ್ಳಿ , ಯಲಹಂಕ ಹಾಗೂ ಶಾಲಾ ವಾಹನಗಳು, ಖಾಸಗಿ ವಾಹನಗಳು, ದ್ವಿಚಕ್ರ ವಾಹನ ಸವಾರರು, ಕೂಲಿ ಕಾರ್ಮಿಕರು ಗ್ರಾಮೀಣ ಪ್ರದೇಶದ ರೈತಾಪಿ ಜನ ಸಂಚರಿಸಲು ಇದೇ ಬಳಸುತ್ತಿದ್ದು, ಅಂಡರ್‌ಪಾಸ್‌ನಲ್ಲಿ ನೀರು ತುಂಬಿರುವುದರಿಂದ ಸಂಚರಿಸಲಾಗದ ಸ್ಥಿತಿ ನಿರ್ಮಾಣವಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪಕ್ಕದಲ್ಲೇ ಇರುವುದರಿಂದ ದಿನ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ದೇವನಹಳ್ಳಿ ಹಾಗೂ ಇನ್ನಿತರೆ ಕಡೆಗೆ ಹೋಗಬೇಕಾದರೆ ದೊಡ್ಡಜಾಲವನ್ನು ಸುತ್ತುವರೆದು ಹೆಚ್ಚುವರಿಯಾಗಿ 7 ರಿಂದ 8 ಕಿ.ಲೋ ಮೀಟರ್‌ ಸುತ್ತು ಹಾಕಿಕೊಂಡು ಬರಬೇಕಾಗುವುದು ಎಂದು ಗ್ರಾಮಸ್ಥರು ಹೇಳುತ್ತಾರೆ.

ಗ್ರಾಪಂ ಉಪಾಧ್ಯಕ್ಷರ ಹೇಳಿಕೆ: ರೈಲ್ವೆ ಇಲಾಖೆ ಅವೈಜ್ಞಾನಿಕವಾಗಿ ಅಂಡರ್‌ ಪಾಸ್‌ ನಿರ್ಮಿದ್ದು, ಒಂದು ವಾಹನ ಬಂದರೆ ಇನ್ನೊಂದು ವಾಹನ ಬರುವುದಕ್ಕೆ ಕಷ್ಟವಾಗಿದೆ. ಕಾಮಗಾರಿ ಬಗ್ಗೆ ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಯಾವುದೇ ಪ್ರಯೋಜನ ವಾಗಲಿಲ್ಲ. ಶಾಲಾ ವಾಹನಗಳು ಗ್ರಾಮಕ್ಕೆ ಬಂದರು 1.5 ಕಿ.ಲೋ ಮೀಟರ್‌ ವರೆಗೆ ಮಕ್ಕಳು ನಡೆಯುವಂತಾಗಿದೆ. ಹಾಲು ಡೇರಿ ವಾಹನಕ್ಕೂ ತೊಂದರೆಯಾಗಿದೆ. 12 ಅಡಿಗಳಷ್ಟು ನೀರು ನಿಂತಿದ್ದು, ಅಧಿಕಾರಿಗಳ ಬೇಜವಾಬ್ದಾರಿಯಿಂದ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಇದೇ ರೀತಿ ಮುಂದುವರಿದರೆ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಅಣೇಶ್ವರ ಗ್ರಾಪಂ ಉಪಾಧ್ಯಕ್ಷ ಯರ್ತಿಗಾನ ಹಳ್ಳಿ ಶಿವಣ್ಣ ಎಚ್ಚರಿಸಿದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.