24ರಿಂದ ಬೃಹತ್‌ ಡೇರಿ ಮೇಳ: ಆನಂದ್‌


Team Udayavani, Jun 21, 2022, 2:18 PM IST

24ರಿಂದ ಬೃಹತ್‌ ಡೇರಿ ಮೇಳ: ಆನಂದ್‌

ದೊಡ್ಡಬಳ್ಳಾಪುರ: ಕೃಷಿ ಮತ್ತು ಹೈನುಗಾರಿಕೆಯಲ್ಲಿ ರೈತರು ಆಧುನಿಕ ತಂತ್ರಜ್ಞಾನ ಹಾಗೂ ಪರಿಕರಗಳನ್ನು ಬಳಸಿಕೊಳ್ಳುವ ಅಗತ್ಯವಿದೆ. ರೈತರಿಗೆ ಈ ಬಗ್ಗೆ ಮಾಹಿತಿ ನೀಡಲು ಕೆ.ಎಂ.ಎಫ್‌ ವತಿಯಿಂದ ಜೂ.24ರಿಂದ 26ರವರೆಗೆ 3 ದಿನಗಳ ಕಾಲ ಬೃಹತ್‌ ಡೇರಿ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಂ.ಎಫ್‌ ಹಾಗೂ ಬಮೂಲ್‌ ನಿರ್ದೇಶಕ ಬಿ.ಸಿ.ಆನಂದ್‌ ಕುಮಾರ್‌ ತಿಳಿಸಿದ್ದಾರೆ.

ಬಮೂಲ್‌ ಶಿಬಿರ ಕಚೇರಿಯಲ್ಲಿ  ಬೃಹತ್‌ ಡೇರಿ ಮೇಳ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಬಮೂಲ್‌ ಬೃಹತ್‌ ಡೇರಿ ಮೇಳವನ್ನು ಬಮೂಲ್‌ ಶಿಬಿರ ಕಚೇರಿ ಮುಂಭಾಗ ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಆಧುನಿಕ ತಂತ್ರಜ್ಞಾನದ ಮಾಹಿತಿ, ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಕೃಷಿ ಸಾಲ ಸೌಲಭ್ಯದ ಮಾಹಿತಿ, ಪಶು ವೈದ್ಯಕೀಯ ಔಷಧಗಳ ಪ್ರದರ್ಶನ, ಪ್ರಸಿದ್ಧ ಕಂಪನಿಗಳ ವಸ್ತು ಪ್ರದರ್ಶನ ಸೇರಿ 100ಕ್ಕೂ ಹೆಚ್ಚು ಮಳಿಗೆಗಳು ತೆರೆಯಲಿವೆ. ಮೇಳದಲ್ಲಿ ಜಿಲ್ಲೆಯ ಎಲ್ಲಾ ಡೇರಿಗಳ ಕಾರ್ಯದರ್ಶಿಗಳು, ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಜೂ.24ರ ಬೆಳಗ್ಗೆ 11.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕೆ.ಎಂ.ಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಕೃಷ್ಣಬೈರೇಗೌಡ, ಟಿ.ವೆಂಕಟರಮಣಯ್ಯ, ಬಮೂಲ್‌ ಅಧ್ಯಕ್ಷ ನರಸಿಂಹಮೂರ್ತಿ ಭಾಗವಹಿಸಲಿದ್ದಾರೆ ಎಂದರು.

ರೈತರಿಗೆ ಅನುಕೂಲವಾಗಲಿ: ಬೃಹತ್‌ ಡೇರಿ ಮೇಳದ ಪ್ರಚಾರ ವಾಹನಕ್ಕೆ ಚಾಲನೆ ನೀಡಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ರೈತರು ತಮ್ಮ ಕೃಷಿ ಮತ್ತು ಹೈನುಗಾರಿಕೆ ಅಭಿವೃದ್ಧಿಗೆ ಮೇಳ ಸಹಕಾರಿಯಾಗಲಿದೆ. ರೈತರಿಗೆ ಅನುಕೂಲವಾಗಲಿ ಎಂದು ಬೆಂಗಳೂರಿಗೆ ಬದಲಾಗಿ ದೊಡ್ಡಬಳ್ಳಾಪುರದಲ್ಲಿ ಮೇಳ ಆಯೋಜಿಸಲಾಗುತ್ತಿದೆ. ಪ್ರಚಾರ ವಾಹನದ ಮೂಲಕ ಗ್ರಾಮಗಳಲ್ಲಿ ಪ್ರಚಾರ ಕೈಗೊಳ್ಳಲಾಗುತ್ತಿದೆ. ಒಂದೇ ಸೂರಿನಲ್ಲಿ ಎಲ್ಲಾ ಪರಿಕರಗಳು, ಮಾಹಿತಿ ಸಿಗುವುದರಿಂದ ರೈತರಿಗೆ ಅನುಕೂಲವಾಗಲಿದ್ದು, ಜಿಲ್ಲೆಯ ರೈತರು ಮೇಳದ ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದರು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.