Farmers: ರಾಗಿಗೆ ಬೆಂಬಲ ಬೆಲೆಗಿಂತ ಮಾರುಕಟ್ಟೆ ದರ ಹೆಚ್ಚಳ

Team Udayavani, Feb 18, 2024, 3:21 PM IST

Farmers: ರಾಗಿಗೆ ಬೆಂಬಲ ಬೆಲೆಗಿಂತ ಮಾರುಕಟ್ಟೆ ದರ ಹೆಚ್ಚಳ

ದೇವನಹಳ್ಳಿ: ರಾಗಿಗೆ ಸರ್ಕಾರ 3,846 ರೂ. ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ, ಸರ್ಕಾರ ನೀಡುವ ಬೆಂಬಲ ಬೆಲೆಗಿಂತ ಮಾರುಕಟ್ಟೆಯಲ್ಲಿ 4 ಸಾವಿರದಿಂದ 4,200 ರೂ.ವರೆಗೆ ರಾಗಿ ಮಾರಾಟವಾಗುತ್ತಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಬಯಲು ಸೀಮೆ ಪ್ರದೇಶವಾಗಿರುವುದರಿಂದ ಯಾವುದೇ ನದಿ ಮೂಲಗಳಿಲ್ಲದೆ ಮಳೆ ಆಶ್ರೀತವಾಗಿಯೇ ರೈತರು ಜಿಲ್ಲೆಯ ಪ್ರಮುಖ ಬೆಳೆಯಾದ ರಾಗಿ ಬೆಳೆಯುತ್ತಿದ್ದಾರೆ. ಈ ಬಾರಿ ಮಳೆ ಕೊರತೆಯಿಂದ ರಾಗಿ ಇಳುವರಿ ಕುಸಿತವಾಗಿದ್ದು, ರೈತರು ಕೈ ಸುಟ್ಟಿಕೊಳ್ಳುವಂತಾಗಿದೆ.

ಜಿಲ್ಲೆಯ ಆಹಾರ ಇಲಾಖೆ ಅಂದಾಜಿನ ಪ್ರಕಾರ ಸುಮಾರು 4 ಲಕ್ಷ ಕ್ವಿಂಟಲ್‌ ರಾಗಿಗೆ ರೈತರು ನೋಂದಣಿ ಮಾಡುವ ನಿರೀಕ್ಷೆಯಿತ್ತು. ಆದರೆ, ರಾಗಿ ಖರೀದಿ ಕೇಂದ್ರದಲ್ಲಿ 3,846 ರೂ. ಬೆಂಬಲ ಬೆಲೆಯಡಿ 3,20,000 ಕ್ವಿಂಟಲ್‌ ರಾಗಿ ಖರೀದಿಗೆ ಮಾತ್ರ ನೋಂದಣಿ ಮಾಡಲಾಗಿದೆ. ರೈತರು ರಾಗಿಯನ್ನು ತಮ್ಮ ದಿನ ಬಳಕೆಗೆ ಇಟ್ಟುಕೊಂಡು ಉಳಿದ ರಾಗಿಯನ್ನು ಸಾಮಾನ್ಯವಾಗಿ ಮಾರಾಟ ಮಾಡುತ್ತಿದ್ದಾರೆ.

ರಾಗಿ ಬಿತ್ತನೆ ವೇಳೆ ಮಳೆ ಬರಲಿಲ್ಲ: ಬೆಂ.ಗ್ರಾ ಜಿಲ್ಲೆಯಲ್ಲಿ ಯಾವುದೇ ಬೆಳೆಗಳಿಗಿಂತ ರಾಗಿ ಪ್ರಮುಖ ಬೆಳೆಯಾಗಿದೆ. ರಾಗಿ ಬೆಳೆಗೆ ಹೆಚ್ಚಿನ ಪ್ರಾಮುಖ್ಯತೆಯನ್ನು ರೈತರು ನೀಡುತ್ತಾರೆ. ಬೆಂ.ಗ್ರಾ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರೈತರು ಹೆಚ್ಚು ರಾಗಿ ಬೆಳೆಯುತ್ತಾರೆ. ಮಳೆ ಕೈಕೊಟ್ಟಿರುವುದರಿಂದ ರಾಗಿ ಇಳುವರಿ ಈ ವರ್ಷ ಕುಸಿತವಾಗಿದೆ. ರಾಗಿ ಬಿತ್ತನೆ ಸಂದರ್ಭದಲ್ಲೂ ಸಹ ಮಳೆ ಹೆಚ್ಚಿನ ಪ್ರಮಾಣದಲ್ಲಿ ಬಂದಿಲ್ಲ.

ಜಿಲ್ಲೆಯಲ್ಲಿ ಆರು ಖರೀದಿ ಕೇಂದ್ರ: ಬೆಂ.ಗ್ರಾ ಜಿಲ್ಲೆಯಲ್ಲಿ ಆರು ರಾಗಿ ಖರೀದಿ ಕೇಂದ್ರ ತೆರೆಯಲಾಗಿದೆ. ದೇವನಹಳ್ಳಿ ಮತ್ತು ಹೊಸಕೋಟೆ ತಾಲೂಕಿನಲ್ಲಿ ತಲಾ ಒಂದು ಕೇಂದ್ರ, ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ತಲಾ ಎರಡು ಕೇಂದ್ರಗಳನ್ನು ತೆರೆಯಲಾಗಿದೆ. ಕೇಂದ್ರಕ್ಕೆ ಬರುವ ರೈತರಿಗೆ ಶೌಚಾಲಯ, ಕುಡಿಯುವ ನೀರು, ದೀಪಗಳ ವ್ಯವಸ್ಥೆ ಮಾಡಲಾಗಿದೆ. ಟೆಂಡರ್‌ ಪ್ರಕ್ರಿಯೆ ತಡವಾಗಿರುವುದರಿಂದ ಖರೀದಿ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ನೋಂದಣಿ ಮಾಡಿಕೊಂಡಿರುವ ರೈತರು ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯಕ್ಕೆ ಏನು ಸಮಸ್ಯೆ ಕಂಡು ಬರದಿದ್ದರೂ, ಮುಂದಿನ ದಿನಗಳಲ್ಲಿ ಮಳೆಯಾದರೆ ರಾಗಿ ಸಂಗ್ರಹಿಸಿ, ಇಟ್ಟುಕೊಳ್ಳುವುದು ರೈತರಿಗೆ ಸಮಸ್ಯೆಯಾಗುತ್ತದೆ.

ರಾಗಿ ಬೆಳೆ ಹಾನಿ: ಜಿಲ್ಲೆಯ ನಾಲ್ಕು ತಾಲೂಕಿನಲ್ಲೂ ವ್ಯಾಪಕವಾಗಿ ರಾಗಿ ಬೆಳೆಯುತ್ತಾರೆ. ಪ್ರತಿ ವರ್ಷ ಸುಮಾರು 60,000 ಹೆಕ್ಟರ್‌ ಪ್ರದೇಶದಲ್ಲಿ ರಾಗಿ ಬೆಳೆಯುತ್ತಾರೆ. ಈ ಬಾರಿ ಮಳೆ ಇಲ್ಲದೆ ಬರ ವ್ಯಾಪಕವಾಗಿರುವುದರಿಂದ ಸುಮಾರು 40 ಸಾವಿರಕ್ಕೂ ಹೆಚ್ಚು ಹೆಕ್ಟರ್‌ ಪ್ರದೇಶದಲ್ಲಿ ರಾಗಿ ಬೆಳೆ ಹಾನಿಯಾಗಿದೆ. ಸರ್ಕಾರ ಕೂಡ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ನೋಂದಣಿ ಪ್ರಾರಂಭಿಸಿತು. ಕಳೆದ ಬಾರಿಗಿಂತ ಈ ಬಾರಿ ಬೆಂಬಲ ಬೆಲೆಯನ್ನು ಹೆಚ್ಚಿಸಲಾಗಿತ್ತು. ಈ ಬಾರಿ ನಿರೀಕ್ಷೆಗೆ ಹೋಲಿಸಿದರೆ, ನೋಂದಣಿಯೂ ಕೂಡ ಇಳಿಕೆಯಾಗಿದೆ. ಬೆಂ.ಗ್ರಾ ಜಿಲ್ಲೆಯಲ್ಲಿ ಈ ಬಾರಿ 4 ಲಕ್ಷ ಕ್ವಿಂಟಲ್‌ ರಾಗಿ ಖರೀದಿಸುವ ಗುರಿ ಇಟ್ಟುಕೊಳ್ಳಲಾಗಿತ್ತು. ಈ ಬಾರಿ ಕೇವಲ 3,20,000 ಕ್ವಿಂಟಲ್‌ ರಾಗಿ ಖರೀದಿಗೆ ಜಿಲ್ಲೆಯ 16 ಸಾವಿರ ರೈತರು ನೋಂದಣಿ ಮಾಡಿದ್ದಾರೆ. ರಾಗಿ ಖರೀದಿ ಕೂಡ ತಡವಾಗುತ್ತಿದೆ.

ಬೆಂ.ಗ್ರಾ ಜಿಲ್ಲೆಯಲ್ಲಿ ಈ ಬಾರಿ 4 ಲಕ್ಷ ಕ್ವಿಂಟಲ್‌ ರಾಗಿಗೆ ನೋಂದಣಿಯ ನಿರೀಕ್ಷೆ ಇತ್ತು. 3,20,000 ಕ್ವಿಂಟಲ್‌ ರಾಗಿಗೆ ಮಾತ್ರ ನೋಂದಣಿಯಾಗಿದೆ. ಈ ಪ್ರಮಾಣ ಖರೀದಿಗೆ ಬೆಳೆ ಎಷ್ಟಾಗಲಿದೆ ಎಂಬುದನ್ನು ನಿರೀಕ್ಷೆಯಲ್ಲಿದ್ದೇವೆ. ಮಳೆ ಇಲ್ಲದಿರುವುದರಿಂದ ರಾಗಿ ಇಳುವರಿ ಕಡಿಮೆಯಾಗಿದೆ. ಮುಂದಿನ ವಾರದಲ್ಲಿ ಖರೀದಿ ಪ್ರಾರಂಭಿ ಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.-ಪ್ರವೀಣ್‌, ಉಪ ನಿರ್ದೇಶಕ, ಆಹಾರ ಹಾಗೂ ನಾಗರಿಕ ಸರಬರಾಜು ಇಲಾಖೆ, ಬೆಂ.ಗ್ರಾ ಜಿಲ್ಲೆ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.