ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ

Team Udayavani, Oct 7, 2020, 1:54 PM IST

ಏರುತ್ತಲೇ ಇದೆ ಕೋವಿಡ್ ಸೋಂಕಿತರ ಸಂಖ್ಯೆ

ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ತಪಾಸಣೆಗೆ ನೋಂದಣಿ ಮಾಡಿಸಲು ಸರದಿ ಸಾಲಿನಲ್ಲಿ ನಿಂತಿರುವ ಸಾರ್ವಜನಿಕರು.

ಹೊಸಕೋಟೆ: ತಾಲೂಕಿನಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತಿದಿನ ಅಂದಾಜು 50ಜನರ ತಪಾಸಣೆಕೈಗೊಳ್ಳಲಾಗುತ್ತಿದೆ. ಇವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರಲ್ಲಿ ಸೋಂಕು ದೃಢಪಡುತ್ತಿದ್ದು, ಕೆಲವರು ಆಸ್ಪತ್ರೆಗೆ ದಾಖ ಲಾದರೆ ಉಳಿದವರು ಹೋಂ ಕ್ವಾರಂಟೈನ್‌ಗೆಒಳಪಡುತ್ತಿದ್ದಾರೆ.

739 ಪಾಸಿಟಿವ್‌: ಸರ್ಕಾರಿ ಆಸ್ಪತ್ರೆಯಲ್ಲಿ ಅ.3ರ ವರೆಗೂ 4,667 ಜನರ ಗಂಟಲು, ಮೂಗಿನ ದ್ರಾವಣ ಸಂಗ್ರಹಿಸಿದ್ದು 3,923 ಜನರಿಗೆ ನೆಗೆಟಿವ್‌, 739 ಪಾಸಿಟಿವ್‌ ಕಂಡುಬಂದಿದ್ದು 267 ತಪಾಸಣಾ ವರದಿಗಳು ಬಾಕಿಯಿವೆ. ಸರಕಾರಿ ಆಸ್ಪತ್ರೆಯ ಐಸೊಲೇಷನ್‌ ವಾರ್ಡ್‌ನಲ್ಲಿ ಪ್ರಸ್ತುತ 27 ಸೋಂಕಿತರಿದ್ದು, ಇದುವರೆ ದಾಖಲಾಗಿದ್ದ 142 ಸೋಂಕಿತರಲ್ಲಿ 103 ಮಂದಿ ಬಿಡುಗಡೆ ಹೊಂದಿದ್ದು, 12 ಸೋಂಕಿತರನ್ನು ಇತರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಹೋಂ ಕ್ವಾರಂಟೈನ್‌ಗೆ ಒಳಪಡುವವರಿಗೆ 14 ದಿನಗಳಿಗೆ ರೋಗ ನಿರೋಧಕ ಮಾತ್ರೆ17 ದಿನಗಳ ವರೆಗೆ ಹೊರಗಡೆ ಓಡಾಡದಂತೆ ಸೂಚಿಸಲಾಗುತ್ತಿದೆ.  14 ದಿನಗಳ ನಂತರ ಸ್ವತ: ತಪಾಸಣೆ ಕೈಗೊಂಡು ಯಾವುದೇ ರೀತಿಯ ಸಮಸ್ಯೆಗಳು ಕಂಡುಬಂದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಲು ತಿಳಿಸಲಾಗಿದೆ. ತಾಂತ್ರಿಕ ಕಾರಣಗಳಿಂದಾಗಿ ತಪಾಸಣೆ ವರದಿ ವಿಳಂಬವಾಗುತ್ತಿದ್ದು, ತಪಾಸಣೆಗೆ ಒಳಗಾದವರು ಸುಮಾರು 5ರಿಂದ 6 ದಿನ ಕಾಯ ಬೇಕಾಗಿದ್ದು,ಇವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದವರಿಗೂ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿವೆ.

10ಕ್ಕೂ ಹೆಚ್ಚು ಮಂದಿ ಮೃತ: ಜನರು ಮಾಸ್ಕ್ ಧರಿಸದೆ ಅನವಶ್ಯಕವಾಗಿ ಓಡಾಡುವುದು,ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು, ಮುಂಜಾಗ್ರತಾ ಕ್ರಮ ಕೈಗೊಳ್ಳುವುದರಲ್ಲಿ ತೀವ್ರ ನಿರ್ಲಕ್ಷ್ಯ ತೋರುತ್ತಿರುವುದು ಸಹ ಸೋಂಕಿನ ಪ್ರಮಾಣ ಹೆಚ್ಚಳಕ್ಕೆ ಕಾರಣ ವಾಗುತ್ತಿದೆ. ಮತ್ತೂಂದೆಡೆ ರೋಗ ಲಕ್ಷಣಗಳು ಕಂಡುಬಂದ ಕೂಡಲೇ ತಪಾಸಣೆ ಮಾಡಿಸಿ ಕೊಳ್ಳದಿರುವುದು ಅನಾಹುತಗಳಿಗೆ ಕಾರಣವಾಗುತ್ತಿದೆ ಎಂದು ಬಹುತೇಕ ವೈದ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಕಳೆದ15 ದಿನಗಳಲ್ಲಿ10ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಈಗಲಾದರೂ ಎಚ್ಚೆತ್ತು ಸರಕಾರ ವಿಧಿಸಿರುವ ನಿರ್ಬಂಧಗಳನ್ನು ಪಾಲಿಸಲು ಗಮನಹರಿಸಬೇಕಾಗಿದೆ.

ಎಂವಿಜೆ ಆಸ್ಪತ್ರೆಯಲ್ಲಿ 14 ಐಸಿಯು, 14 ವೆಂಟಿಲೇಟರ್‌ ವಾರ್ಡ್‌ಗಳೊಂದಿಗೆಕ್ವಾರಂಟೈನ್‌ಗೆ ಒಳಪಟ್ಟ 400 ಸೋಂಕಿತರಿಗೆ ಚಿಕಿತ್ಸೆ ನೀಡುವ ಸೌಲಭ್ಯಕಲ್ಪಿಸಲಾಗಿದೆ. ಇದರೊಂದಿಗೆ ತಪಾಸಣೆಗೆ ಒಳಗಾಗಿ ವರದಿಗೆಕಾಯುತ್ತಿರುವ ಜನರಿಗೆ 20 ವಾರ್ಡ್‌ಗಳಿವೆ.ಕನಿಷ್ಠ 10 ದಿನಗಳ ವರೆಗೂ ಸೋಂಕಿತರು ದಾಖಲಾಗಬೇಕಾಗಿದ್ದು, ಆಸ್ಪತ್ರೆ ವತಿಯಿಂದ ಉಚಿತವಾಗಿ ಪೌಷ್ಟಿಕ ಆಹಾರ ನೀಡಲಾಗುತ್ತಿದೆ. ಡಾ.ಧರಣಿ, ಇಒ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.