Udayavni Special

ದಾಸ್ತಾನು ಖಾಲಿ: ಪಡಿತರಕ್ಕೆ ತಪ್ಪದ ಅಲೆದಾಟ

ಪೋರ್ಟಬಿಲಿಟಿ ಜಾರಿಯಿಂದ ದಾಸ್ತಾನು ಖಾಲಿ, ನ್ಯಾಯಬೆಲೆ ಅಂಗಡಿ ಮುಂದೆ ನಾಗರಿಕರ ಸಾಲು

Team Udayavani, Oct 24, 2020, 2:25 PM IST

ದಾಸ್ತಾನು ಖಾಲಿ: ಪಡಿತರಕ್ಕೆ ತಪ್ಪದ ಅಲೆದಾಟ

ದೊಡ್ಡಬಳ್ಳಾಪುರ: ಅಕ್ಟೋಬರ್‌ ತಿಂಗಳ ಪಡಿತರ ಆಹಾರಧಾನ್ಯ ಬಿಡುಗಡೆಯಾಗಿದೆ. ಹಲವು ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ದಾಸ್ತಾನು ಖಾಲಿಯಾಗಿದ್ದು, ಪಡಿತರದಾರರು ನ್ಯಾಯಬೆಲೆ ಅಂಗಡಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಡಿತರ ವಿವರ: ಅಂತ್ಯೋದಯ ಪಡಿತರ ಚೀಟಿ ಕಾರ್ಡ್‌ದಾರರಿಗೆ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪ್ರತಿ ಕಾರ್ಡ್‌ಗೆ ಉಚಿತವಾಗಿ 35 ಕೆ.ಜಿ. ಅಕ್ಕಿ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನಯೋಜನೆಯಡಿ ಉಚಿತವಾಗಿ ಪ್ರತಿ ಸದಸ್ಯರಿಗೆ5 ಕೆ.ಜಿಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2 ಕೆ.ಜಿ. ಕಡಲೆ ಕಾಳು ವಿತರಿಸಲಾಗುವುದು. ಬಿಪಿಎಲ್‌ ಪಡಿತರ ಚೀಟಿ ಹೊಂದಿರುವವರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪ್ರತಿ ಸದಸ್ಯರಿಗೆ 5 ಕೆ.ಜಿ.ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುವುದು. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯಡಿ ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2ಕೆ.ಜಿಕಡಲೆಕಾಳು ಉಚಿತವಾಗಿ ವಿತರಿಸಲಾಗುವುದು. ಎಪಿಎಲ್‌ ಪಡಿತರ ಚೀಟಿ ಹೊಂದಿರುವ, ಒಪ್ಪಿಗೆ ನೀಡಿದ ಪಡಿತರ ಚೀಟಿಗೆ ಪ್ರತಿ ಕೆ.ಜಿ ಗೆ ರೂ.15 ರಂತೆ ಏಕ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ 2 ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆ.ಜಿ. ಅಕ್ಕಿ ವಿತರಿಸಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ.

ಪಡಿತರದಾರರ ಅಲೆದಾಟ: ಅ.16ರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಟೋಬರ್‌ ತಿಂಗಳ ಪಡಿತರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಆದರೆ ಹಲವಾರು ನ್ಯಾಯಬೆಲೆ ಅಂಗಡಿಗಳು, ಹೆಚ್ಚವರಿ ಸಿಬ್ಬಂದಿ ನೇಮಿಸಿಕೊಂಡು ಪಡಿತರ ವಿತರಿಸಿ, ಬಾಗಿಲು ಮುಚ್ಚಿವೆ. ಅಂತರಾಜ್ಯ ಹಾಗೂ ಅಂತರ ಜಿಲ್ಲೆ ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಯಾರಿಗೂ ಸಹ ರೇಷನ್‌ ನಿರಾಕರಿಸುವಂತಿಲ್ಲ. ಕೆಲವು ಅಂಗಡಿಗಳಲ್ಲಿ ಪೋರ್ಟಬಿಲಿಟಿ ಪಡಿತರದಾರರು ರೇಷನ್‌ ಪಡೆಯುವುದರಿಂದ, ಅಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿನ ಖಾಯಂ ಪಡಿತರದಾರರು ಬೇರೆ ಅಂಗಡಿಗಳಿಗೆ ಅಲೆಯಬೇಕಿದೆ. ಅಂತೆಯೇ, ಮಾಲೀಕರು ನ್ಯಾಯಬೆಲೆ ಅಂಗಡಿಗಳಲ್ಲಿನ ಪಡಿತರದಾರರಿಗೆ ಮೊದಲ ಆದ್ಯತೆ ಎಂದು ಹೇಳುತ್ತಿರುವುದರಿಂದ ಪೋರ್ಟಬಿಲಿಟಿ ಪಡಿತರದಾರರು ಬೇರೆಡೆ ಅಲೆದಾಡುವ ಸ್ಥಿತಿ ಉಂಟಾಗಿದೆ.

ಹೆಚ್ಚಿನ ಪಡಿತರ ನೀಡಲಿ: ಪಡಿತರ ವಿತರಣೆ ಆರಂಭಗೊಂಡ ದಿನಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಹೆಚ್ಚಿನ ಜನಸಂದಣಿಯಾಗಿತ್ತು. ಈಗ ನಮ್ಮ ಅಂಗಡಿಯ ಪಡಿತರದಾರರಿಗೆ ರೇಷನ್‌ ನೀಡದಿದ್ದರೆ, ಜಗಳ ಮಾಡುತ್ತಾರೆ. ಅನಿವಾರ್ಯವಾಗಿ ಪೋರ್ಟಬಿಲಿಟಿ ಪಡಿತರದಾರರಿಗೆ ಮಾರನೇ ದಿನಬರುವಂತೆ ಹೇಳಲಾಗುತ್ತಿದೆ. ಸರ್ಕಾರ ಹೆಚ್ಚಿನ ದಾಸ್ತಾನು ನೀಡುವುದು ಹಾಗು ಎಲ್ಲಾ ಪಡಿತರಅಂಗಡಿಗಳು ಒಂದೇ ಸಮಯ ಪಾಲನೆ ಮಾಡುವುದನ್ನು ಜಾರಿ ಮಾಡಿದರೆ, ಸಮಸ್ಯೆ ಬಗೆ ಹರಿಸಬಹುದಾಗಿದೆ ಎನ್ನುತ್ತಾರೆ ಕುಚ್ಚಪ್ಪನ ಪೇಟೆಯ ನ್ಯಾಯಬೆಲೆ ಅಂಗಡಿ ಮಾಲೀಕ ಗಂಗಾಪ್ರಸಾದ್‌.

ಪ‌ಡಿತರ ಧಾನ್ಯಗಳನ್ನು ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ ಕಾರ್ಡ್‌ಗಳ ಆಧಾರದ ಮೇಲೆ ನೀಡಲಾಗುತ್ತಿದ್ದು, ಲಭ್ಯತೆ ಇದ್ದರೆ ಶೇ.10ರವರೆಗೆ ಹೆಚ್ಚಿಸಬಹುದಾಗಿದೆ. ಈಗಾಗಲೇ ಬಾಗಿಲು ಹಾಕಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಖಾಲಿಯಾಗಿದ್ದು, ಇದರಲ್ಲಿ ಪೋರ್ಟಬಿಲಿಟಿ ಪಡಿತರದಾರರು ಸಹ ರೇಷನ್‌ ಪಡೆದಿದ್ದಾರೆ. ದಾಸ್ತಾನು ಇದ್ದರೂ ಸರಿಯಾಗಿ ವಿತರಣೆ ಮಾಡದ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ರಮೇಶ್‌, ಆಹಾರ ಶಿರಸ್ತೇದಾರ್‌.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

sweeden

28 ವರ್ಷಗಳಿಂದ ಮಗನನ್ನು ಕೋಣೆಯಲ್ಲಿ ಕೂಡಿಹಾಕಿದ ಮಹಿಳೆ: ಕಾರಣ ಭಯಾನಕ !

ಅಂತಿಮ ಏಕದಿನ: ಟಾಸ್ ಗೆದ್ದ ಭಾರತ, ಇಬ್ಬರು ಆಟಗಾರರು ಪದಾರ್ಪಣೆ

ಅಂತಿಮ ಏಕದಿನ: ಟಾಸ್ ಗೆದ್ದ ಭಾರತ, ಇಬ್ಬರು ಆಟಗಾರರು ಪದಾರ್ಪಣೆ

ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

burevi

ಡಿ.4ರಂದು ತಮಿಳುನಾಡಿಗೆ ಅಪ್ಪಳಿಸಲಿದೆ ‘ಬುರೆವಿ’ ಚಂಡಮಾರುತ: ಧಾರಾಕಾರ ಮಳೆಯಾಗುವ ಸಾಧ್ಯತೆ !

Yogiswar

ಯೋಗಿಗೆ ಸಚಿವ ಸ್ಥಾನ? ಬಿಜೆಪಿಯೊಳಗೆ ಹೆಚ್ಚಿದ ಮುಸುಕಿನ ಗುದ್ದಾಟ

River

ಚೀನದ ವಿರುದ್ಧ ಈಗ ಜಲ ಸಮರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಗ್ರಾಪಂ ಚುನಾವಣೆ : ರಾಜಕೀಯ ಪಕ್ಷಗಳಲ್ಲಿ ಗರಿಗೆದರಿದ ಚಟುವಟಿಕೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಅಯ್ಯಪ್ಪ ಭಕ್ತರಿಗೆಕೇರಳ ಕಿರುಕುಳ: ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆ : 2007ರಿಂದ ಈವರೆಗೆ 3,628 ಎಚ್‌ಐವಿ ಪ್ರಕರಣ

ನಿವಾರ್‌ನಿಂದ ನೆಲಕಚ್ಚಿದ ರಾಗಿ ಬೆಳೆ

ನಿವಾರ್‌ನಿಂದ ನೆಲಕಚ್ಚಿದ ರಾಗಿ ಬೆಳೆ

2024ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ

2024ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ: ಸಂಸದ

MUST WATCH

udayavani youtube

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ದೋಣಿ ದುರಂತ – ಇಬ್ಬರ ಮೃತದೇಹ ಪತ್ತೆ

udayavani youtube

ಮಂಗಳೂರು: ಮೀನುಗಾರಿಕೆಗೆ ತೆರಳಿ ವಾಪಾಸಾಗುವ ವೇಳೆ ಮಗುಚಿಬಿದ್ದ ಬೋಟ್: 6 ಮಂದಿ ನಾಪತ್ತೆ

udayavani youtube

ರೋಗ ನಿರ್ಮೂಲನೆಯಲ್ಲಿ ಆಯುರ್ವೇದ ವೈದ್ಯ ಪದ್ಧತಿಯ ಮಹತ್ವವೇನು?

udayavani youtube

Success story of a couple In Agriculture | Integrated Farming | Udayavani

udayavani youtube

ಮೂರೂವರೆ ಸಾವಿರದಷ್ಟು ವಿವಿಧ ಪತ್ರಿಕೆಗಳನ್ನು ಸಂಗ್ರಹಿಸಿರುವ ಎಕ್ಕಾರು ಉಮೇಶ ರಾಯರು

ಹೊಸ ಸೇರ್ಪಡೆ

sweeden

28 ವರ್ಷಗಳಿಂದ ಮಗನನ್ನು ಕೋಣೆಯಲ್ಲಿ ಕೂಡಿಹಾಕಿದ ಮಹಿಳೆ: ಕಾರಣ ಭಯಾನಕ !

ಅಂತಿಮ ಏಕದಿನ: ಟಾಸ್ ಗೆದ್ದ ಭಾರತ, ಇಬ್ಬರು ಆಟಗಾರರು ಪದಾರ್ಪಣೆ

ಅಂತಿಮ ಏಕದಿನ: ಟಾಸ್ ಗೆದ್ದ ಭಾರತ, ಇಬ್ಬರು ಆಟಗಾರರು ಪದಾರ್ಪಣೆ

ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಬಹು ದಿನಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ ‘ಸುಪ್ರೀಂ ಹೀರೋ’ ಶಶಿಕುಮಾರ್

ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

ಮ್ಯಾಚ್‌ ಫಿಕ್ಸಿಂಗ್‌: ಸ್ಪೇನ್‌ ಟೆನಿಸಿಗ ಎನ್ರಿಕ್‌ ಲೋಪೆಝ್ ಪೆರೆಝ್ ಗೆ 8 ವರ್ಷ ನಿಷೇಧ

burevi

ಡಿ.4ರಂದು ತಮಿಳುನಾಡಿಗೆ ಅಪ್ಪಳಿಸಲಿದೆ ‘ಬುರೆವಿ’ ಚಂಡಮಾರುತ: ಧಾರಾಕಾರ ಮಳೆಯಾಗುವ ಸಾಧ್ಯತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.