ಸಂಘಟನೆ ರಥವನ್ನು ಒಗ್ಗೂಡಿ ಎಳೆಯೋಣ; ಚನ್ನಕೃಷ್ಣಪ್ಪ

ಅಂಬೇಡ್ಕರ್‌ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು

Team Udayavani, Oct 28, 2022, 6:12 PM IST

ಸಂಘಟನೆ ರಥವನ್ನು ಒಗ್ಗೂಡಿ ಎಳೆಯೋಣ; ಚನ್ನಕೃಷ್ಣಪ್ಪ

ದೇವನಹಳ್ಳಿ: ಯಾವುದೇ ಸಂಘಟನೆ ಬಲಿಷ್ಠ ಮತ್ತು ಶಕ್ತಿಯುತವಾಗಿ ಬೆಳೆಯಬೇಕಾದರೆ ಒಗ್ಗಟ್ಟು ಮತ್ತು ಸಿದ್ಧಾಂತಗಳು ಹೆಚ್ಚು ಪರಿಣಾಮಕಾರಿ ಆಗಿರುತ್ತದೆ. 1924ರಲ್ಲಿ ಬಾಬಾ ಸಾಹೇಬ್‌ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಹುಟ್ಟು ಹಾಕಿದ ಸಂಘಟನೆ ಇದಾಗಿದ್ದು, ಸಂಘಟನೆಯನ್ನು ಪ್ರತಿಯೊಬ್ಬರೂ ಉತ್ತಮವಾಗಿ ನಡೆಸಿಕೊಂಡು ಹೋಗಬೇಕು ಎಂದು ಕರ್ನಾಟಕ ಸಮತಾ ಸೈನಿಕದಳ ಸಂಘಟನೆಯ ರಾಜ್ಯಾಧ್ಯಕ್ಷ ಬಿ. ಚನ್ನಕೃಷ್ಣಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ಸಮತಾ ಸೈನಿಕ ದಳ ಸಂಘಟನೆಯಿಂದ ಆಯೋಜಿಸಿದ್ದ ದೇವನಹಳ್ಳಿ ತಾಲೂಕು ಸಂಘದ ನೂತನ ಶಾಖೆಯ ಪದಾಧಿಕಾರಿಗಳ ಆಯ್ಕೆ ಮತ್ತು ಸಮಾಲೋಚನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ದೇಶದ ಪ್ರಗತಿ ಬಾಬಾ ಸಾಹೇಬರು ರಚಿಸಿರುವ ಸಂವಿಧಾನದ
ಅಡಿಯಲ್ಲಿ ಸಾಗುತ್ತಿದೆ ಎಂದರು.

ಪ್ರತಿಯೊಬ್ಬರೂ ಸಂಘಟಿತರಾಗಿ: ಸಂವಿಧಾನವನ್ನು ರಚಿಸುವ ಸಂದರ್ಭದಲ್ಲಿ ಅವರಿಗಾದ ಹಲವು ಅನುಭವ, ಸಾಕಷ್ಟು ಯುವ ಪೀಳಿಗೆಗೆ ಮಾರ್ಗದರ್ಶನ ಆಗಿ ದೆ. ಪ್ರತಿಯೊಬ್ಬರೂ ಸಂಘಟಿತರಾಗಬೇಕು. ಸಂವಿಧಾನದ ಆಶಯಗಳನ್ನು ಜೀವಂತಗೊಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ತಪ್ಪದೇ ಒಂದೇ ಕುಟುಂಬದ ಸದಸ್ಯರಂತೆ ನಡೆಸಿಕೊಂಡು ಹೋಗಬೇಕು ಎಂದರು.

ಅನ್ಯಾಯವನ್ನು ಖಂಡಿಸಿ: ಅಂಬೇಡ್ಕರ್‌ ಅವರು ಹೇಳಿರುವ ಹಾಗೆ ರಥವನ್ನು ಎಳೆಯಬೇಕೆ ವಿನಃ ಹಿಂದೆ ಹೋಗಲು ಬಿಡಬಾರದು. ಸಂವಿಧಾನವನ್ನು ಗಟ್ಟಿಯಾಗಿ ಹಿಡಿದುಕೊಂಡು ಮುನ್ನುಗ್ಗಬೇಕು. ಅನ್ಯಾಯವನ್ನು ಖಂಡಿಸಿ ನ್ಯಾಯವನ್ನು ಎತ್ತಿಹಿಡಿಯುವ ಕೆಲಸ ಈಗಿನಿಂದಲೇ ಮಾಡುವಂತೆ  ಆಗಬೇಕು. ಸಂಘಟನೆಯ ರಥವನ್ನು ಒಗ್ಗೂಡಿ ಎಳೆಯುವಂತಾಗಬೇಕು ಎಂದರು. ತಾಲೂಕು ಅಧ್ಯಕ್ಷ ಕೆಂಪಣ್ಣ, ಜಿಲ್ಲಾ ಮಹಿಳಾ ಅಧ್ಯಕ್ಷೆ ರವಿಕಲಾ, ಅಧ್ಯಕ್ಷ ಲಗುಮಯ್ಯ, ಗೌರವಾಧ್ಯಕ್ಷ
ವೆಂಕಟಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿ ಡಿ.ಯು. ಮುನಿಕೃಷ್ಣಪ್ಪ, ಸದಸ್ಯ ಮುನಿಕೃಷ್ಣ, ವೆಂಕಟೇಶ್‌, ಶ್ರೀನಿವಾಸ್‌, ಸುಬ್ರಮಣಿ, ಶಿವರಾಜ್‌, ನೇತ್ರಾವತಿ ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.