ಮಣ್ಣೆಯ ಇತಿಹಾಸ ಮಣ್ಣು ಮಾಡಬೇಡಿ: ಇತಿಹಾಸ ತಜ್ಞ ಗೋಪಾಲ್‌ ರಾವ್‌

Team Udayavani, Sep 26, 2019, 3:00 AM IST

manneya

ನೆಲಮಂಗಲ: ಐತಿಹಾಸಿಕ ಹಿನ್ನಲೆ ಹೊಂದಿರುವ ಐತಿಹಾಸಿಕ ಸ್ಥಳ ಮಣ್ಣೆಯ ಇತಿಹಾಸ ಮಣ್ಣು ಮಾಡಬೇಡಿ ಎಂದು ಇತಿಹಾಸ ತಜ್ಞ ಡಾ.ಹೆಚ್‌.ಎಸ್‌ ಗೋಪಾಲ್‌ ರಾವ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 6ನೇ ಶತಮಾನದಲ್ಲಿ ಗಂಗರ ರಾಜಧಾನಿಯಾಗಿದ್ದ ಮಣ್ಣೆಯಲ್ಲಿ ಈವರೆಗೂ 54 ಶಾಸನಗಳು, ನೂರಾರು ದೇವಾಲಯಗಳು, ಜೈನ ಬಸದಿಗಳ ಜೊತೆ ಹುಡುಕಿದೊಷ್ಟು ಪುರಾವೆ ಸಿಗುತಿವೆ.

ಹೀಗಿದ್ದರೂ ಸರ್ಕಾರ ಹಾಗೂ ಸಂಬಂಧ ಪಟ್ಟ ಇಲಾಖೆಗಳು ಮಣ್ಣೆಯನ್ನು ನಿರ್ಲಕ್ಷಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು. ಪಟ್ಟಣದ ಬಸವಣ್ಣ ದೇವರಮಠದ ಸಭಾಂಗಣದಲ್ಲಿ ಸ್ವಾಮಿವಿವೇಕಾನಂದ ಯುವ ಪ್ರತಿಷ್ಠಾನದ ವತಿಯಿಂದ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿದರು. ದೇಶದ ಹಲವು ಇತಿಹಾಸ ತಜ್ಞರು ಮಣ್ಣೆಯ ಐತಿಹಾಸಿಕ ಹಿನ್ನೆಲೆ ಕಂಡು ಬೆರಗಾಗಿದ್ದಾರೆ.

ಮಣ್ಣೆಯ ಸಿಕ್ಕ ಇತಿಹಾಸದ ಕುರುಹುಗಳು ಆರನೇ ಶತಮಾನದ ಕಾರ್ಯವೈಖರಿಯನ್ನು ಸಾಕ್ಷಿ ಸಮೇತ ಪ್ರಸ್ತುತ ಪಡಿಸಿದೆ. ಮಣ್ಣೆಯಲ್ಲಿ ಪತ್ತೆಯಾದ ಶಾಸನಗಳು, ಸ್ಮಾರಕಗಳು ಸಂರಕ್ಷಣೆ ಮಾಡಿ ಎಂದು ಪುರಾತತ್ವ ಇಲಾಖೆ ಹಾಗೂ ಸ್ಥಳೀಯ ಸರ್ಕಾರಕ್ಕೆ ಮನವಿ ಮಾಡಿದರೂ, ಆರ್ಥಿಕ ಕಾರಣ ನೀಡಿ ಮಣ್ಣೆಯನ್ನು ಸಂಪೂರ್ಣ ನಿರ್ಲಕ್ಷಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಸಿದರು.

ಮಣ್ಣೆ ಗಂಗರ ರಾಜಧಾನಿ, ಸೂರ್ಯದೇವಾಲಯ ಹೊಂದಿದ ಸ್ಥಳ, ಶಾಸನಗಳ ದಾಖಲೆಯ ನೆಲ ಎಂಬ ನೆನಪು ಮುಂದಿನ ಪೀಳಿಗೆಗೆ ತಿಳಿಯಲು ಮಣ್ಣೆಯನ್ನು ಸಂರಕ್ಷಿಸಲು ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಮುಂದಾಗಬೇಕೆಂದು ಮನವಿ ಮಾಡಿದರು.

ವಿಗ್ರಹದ ಕಳವು: ಭಾರತೀಯ ಸೇನೆಯ ಯೋಧ ಶಿವಕುಮಾರ್‌ ಮಾತನಾಡಿ , ತಾಲೂಕಿನ ಮಣ್ಣೆಯಲ್ಲಿ ಪತ್ತೆಯಾದ ಗಂಗರಕಾಲದ ರಾಜಧಾನಿ ಹಾಗೂ 6 ನೇ ಶತಮಾನದ ಪುರಾವೆ ನೀಡಿದ್ದ ಸೂರ್ಯನ ವಿಗ್ರಹ 2009ರಲ್ಲಿ ಕಳ್ಳತನವಾಗಿದೆ. ಅಲ್ಲದೇ ಇನ್ನು ಹಲವು ವಿಗ್ರಹಗಳು, ಪುರಾವೆಯ ಕುರುಹುಗಳು, ಕಳ್ಳತನವಾಗಿರುವ ಶಂಕೆಯಿದ್ದು, ದೇವಾಲಯಗಳು ಕುಸಿಯುವ ಹಂತ ತಲುಪಿದ್ದು, ಮುಂದಿನ ದಿನಗಳಲ್ಲಿ ರಕ್ಷಣೆ ಮಾಡದಿದ್ದರೆ, ಮತ್ತಷ್ಟು ವಿಗ್ರಹಗಳು ಕಳವಾಗುವ ಆತಂಕ ಎದುರಾಗಿದೆ ಎಂದ ಆತಂಕ ವ್ಯಕ್ತಪಡಿಸಿದರು. ತಿಳಿಸಿದರು.

ವಸ್ತು ಸಂಗ್ರಹಾಲಯ ಮಾಡಿ: ಮಣ್ಣೆ ಗ್ರಾಮದ ಸುತ್ತಮುತ್ತಲ ಪ್ರದೇಶದಲ್ಲಿ ಗುಂಡಿ ತೆಗೆಯುವ ಸಂದರ್ಭ, ಗದ್ದೆಗಳಲ್ಲಿ, ಚರಂಡಿ ಕಾಮಗಾರಿ ವೇಳೆ ದೊರೆತ ವಿಗ್ರಹಗಳು, ಶತಮಾನಗಳ ಕಲಾಕೃತಿಗಳು, ಶಾಸನಗಳನ್ನು ಸಂಗ್ರಹಣೆ ಮಾಡಿ ವಸ್ತು ಸಂಗ್ರಹಾಲಯ ನಿರ್ಮಿಸಬೇಕೆಂದು ಆಗ್ರಹಿಸಿದರು. ಸ್ವಾಮಿವಿವೇಕಾನಂದ ಯುವ ಪ್ರತಿಷ್ಠಾನದ ನಿರ್ದೇಶಕ ವಿಜಯಕುಮಾರ್‌, ಸದಸ್ಯ ನವೀನ್‌ಕುಮಾರ್‌ ಹಾಗೂ ಪ್ರತಿಷ್ಟಾನದ ಪದಾಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.