ಘಾಟಿಯಲ್ಲಿ ಸಾಮೂಹಿಕ ವಿವಾಹ


Team Udayavani, Mar 18, 2023, 2:26 PM IST

tdy-11

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ ತಾಲೂಕಿನ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಶುಕ್ರವಾರ ಶಾಸ್ತೋಕ್ತವಾಗಿ ನೆರವೇರಿತು.

32 ಜೋಡಿ ವಿವಾಹ : ಶುಕ್ರವಾರ ಮಧ್ಯಾಹ್ನ 12.15ರಿಂದ 1 ಗಂಟೆಯೊಳಗೆ ಸಲ್ಲುವ ಶುಭ ಅಭಿಜಿನ್‌ ಲಗ್ನದಲ್ಲಿ ನಡೆದ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಈ ಮೊದಲೇ ನೋಂದಣಿಯಾಗಿದ್ದ 32 ಜೋಡಿಗಳು, ಹಿಂದು ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷ ದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಕಾಲಿರಿಸಿದರು.

ವಿವಾಹದಲ್ಲಿ ಪಾಲ್ಗೊಂಡಿದ್ದ ವರನಿಗೆ 5ಸಾವಿರ ರೂ ಹಾಗೂ ವಧುವಿಗೆ 10 ಸಾವಿರ ರೂ ಮತ್ತು ಚಿನ್ನದ ತಾಳಿ ಹಾಗೂ ಎರಡು ಚಿನ್ನದ ಗುಂಡು (ಒಟ್ಟು 40 ಸಾವಿರ ರೂ ಮೌಲ್ಯ) ಒಟ್ಟು 55 ಸಾವಿರ ರೂ ಗಳನ್ನು ನೀಡಲಾಯಿತು. ಹಾಗೂ ಸಾಮೂಹಿಕ ವಿವಾಹಕ್ಕೆ ಆಗಮಿಸುವ ವಧು-ವರ ಮತ್ತು ಅವರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ದೇವಾಲಯದ ವತಿಯಿಂದ ಆಯೋಜಿಸಲಾಗಿತ್ತು.

32 ಜೋಡಿಗಳಲ್ಲಿ ಅಂಧ ಜೋಡಿಯೂ ದಾಂಪತ್ಯಕ್ಕೆ ಕಾಲಿರಿಸಿದ್ದು ಗಮನ ಸೆಳೆಯಿತು. ಆಂಧ್ರಪ್ರದೇಶದ ಮಡಕಶಿರಾ, ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಸೇರಿದಂತೆ ಹಲವೆಡೆಯಿಂದ ನೋಂದಣಿ ಮಾಡಿಕೊಂಡಿದ್ದ ವಧು-ವರರು ದಾಂಪತ್ಯಕ್ಕೆ ಕಾಲಿರಿಸಿದರು. ದೇವಾಲಯದ ಪ್ರಧಾನ ಅರ್ಚಕ ಸುಬ್ಬುಕೃಷ್ಣ ಶಾಸ್ತ್ರಿ ನೇತೃತ್ವದ ಆಗಮಿಕರ ತಂಡ ಶಾಸ್ತ್ರೋಕ್ತವಾಗಿ ವಿವಾಹ ಕಾರ್ಯಕ್ರಮ ನಡೆಸಿಕೊಟ್ಟರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಮಾತನಾಡಿ, ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಅರ್ಥಪೂರ್ಣವಾಗಿವೆ. ನವ ದಂಪತಿಗಳು ಸುಖ, ಶಾಂತಿ, ನೆಮ್ಮದಿ ಹಾಗೂ ಒಗ್ಗಟ್ಟಿನಿಂದ ಬಾಳ್ವೆ ನಡೆಸಬೇಕು ಎಂದು ಸಲಹೆ ನೀಡಿದರು.

ದೇವನಹಳ್ಳಿ ಮಾಜಿ ಶಾಸಕ ಚಂದ್ರಣ್ಣ ಜಿಪಂ ಮಾಜಿ ಸದಸ್ಯ ಎಚ್‌.ಅಪ್ಪಯ್ಯಣ್ಣ, ಕರ್ನಾಟಕ ರಾಜ್ಯ ತೆಂಗಿನ ನಾರಿನ ಸಹಕಾರ ಮಹಾಮಂಡಲಿ ಅಧ್ಯಕ್ಷ ವೆಂಕಟೇಶಬಾಬು, ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಬಿ.ಸಿ.ನಾರಾಯಣಸ್ವಾಮಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಕೃಷ್ಣಪ್ಪ, ಮಹರ್ಷಿ ಆನಂದ ಗುರೂಜಿ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ನವ ಜೋಡಿಗಳಿಗೆ ಅಕ್ಷತೆ ಹಾಕಿ ಶುಭ ಹಾರೈಸಿದರು.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-11

ಮಾರಕ ಪ್ಲಾಸ್ಟಿಕ್‌ ವಿರುದ್ಧ ಹೋರಾಟ

ತಬ್ಬಲಿ ಮರಿಗಳಿಗೆ ಸಿಬ್ಬಂದಿಯೇ ಆಸರೆ  

ತಬ್ಬಲಿ ಮರಿಗಳಿಗೆ ಸಿಬ್ಬಂದಿಯೇ ಆಸರೆ  

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಖಾಸಗಿ ಆಸ್ಪತ್ರೆ ಬಾಗಿಲಿಗೆ ಸರ್ಕಾರಿ ಆ್ಯಂಬುಲೆನ್ಸ್‌ಗಳು!

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಮಾದರಿ ಕ್ಷೇತ್ರಕ್ಕಾಗಿ ಅಭಿವೃದ್ಧಿ ಕೈಗೊಳ್ಳಿ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

ಅತ್ತಿಬೆಲೆಯಲ್ಲಿ ನಿವೇಶನ ಕಲ್ಪಿಸಲು ಅನುದಾನದ ಕೊರತೆ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!

Perampalli: ಡಿವೈಡರ್‌ ಮೇಲೇರಿದ ಕಾರು!

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ