ಸಭೆ ರದ್ದು: ರೈತರ ಆಕ್ರೋಶ

Team Udayavani, Sep 30, 2020, 12:58 PM IST

ಸಭೆ ರದ್ದು: ರೈತರ ಆಕ್ರೋಶ

ನೆಲಮಂಗಲ: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ಸೋಮ ವಾರ 11ಗಂಟೆಗೆ ರೈತರು ಹಾಗೂ ರೈತ ಸಂಘಟನೆ ಮುಖಂಡರಿಗೆ ರೈತರ ಕುಂದುಕೊರತೆ ಸಭೆಗೆ ಹಾಜರಾಗುವಂತೆ ಆಹ್ವಾನಿಸಲಾಗಿತ್ತು. ಆದರೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಸಭೆಯಿದೆ ಎಂಬ ಕಾರಣಹೇಳಿ ತಹಶೀಲ್ದಾರ್‌ ರೈತರ ಸಭೆ ರದ್ದು ಮಾಡಿದ್ದು, ಈ ವಿಚಾರ ರೈತರಿಗೆ ಹಾಗೂ ರೈತ ಪರ ಸಂಘಟನೆಗಳ ಮುಖಂಡರಿಗೆ ತಿಳಿಸದಿರುವ ಕಾರಣ ಸಭೆಗೆ ಹಾಜರಾಗಿದ್ದ ರೈತ ಮುಖಂಡರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ಅರುಣ್‌ಕುಮಾರ್‌ ಮಾತನಾಡಿ,ಅನೇಕ ತಿಂಗಳ ನಂತರ ರೈತರನ್ನು ಕುಂದುಕೊರತೆ ಸಭೆಗೆ ಕರೆದಿದ್ದಾರೆ ಎಂಬ ಸಂತೋಷವಾಗಿತ್ತು. ಆದರೆ ಸಭೆ ರದ್ದು ಮಾಡಿರುವ ಬಗ್ಗೆ ರೈತರಿಗೆ ಮಾಹಿತಿ ನೀಡದೇ ಅಧಿಕಾರಿಗಳು ಗೈರಾದರೆ ನಾವು ಸಭೆಗೆ ಬಂದು ಏನು ಮಾಡುವುದು. ರೈತರನ್ನು ಸಂಪೂರ್ಣವಾಗಿ ಕಡೆಗಣಿಸುತಿದ್ದು, ಗ್ರಾಮಲೆಕ್ಕಾಧಿ ಕಾರಿಗಳು, ರಾಜಸ್ವನಿರೀಕ್ಷಕರು ಮಾಹಿತಿ ನೀಡಲು ಮುಂದಾಗುತಿಲ್ಲ ಎಂದು ಆರೋಪಿಸಿದರು.

ಹೊಲದ ಕೆಲಸ ಬಿಟ್ಟು ಸಭೆಗೆ ಬಂದಿದ್ದೇವೆ. ಇದೇ ರೀತಿ ಮಾಡಿದರೆ ನಮ್ಮ ದನಕರುಗಳನ್ನು ತಂದು ತಾಲೂಕು ಕಚೇರಿ ಮುಂದೆ ಧರಣಿ ಮಾಡುತ್ತೇವೆ. ತಾಲೂಕು ಕಚೇರಿಯಲ್ಲಿ ರೈತರನ್ನು ಸುಲಿಗೆ ಮಾಡುವ ಅಧಿಕಾರಿಗಳು ಹುಟ್ಟುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಿಸಾನ್‌ ಕಾಂಗ್ರೆಸ್‌ ರಾಜ್ಯ ಕಾರ್ಯದರ್ಶಿ ಪ್ರದೀಪ್‌ ಮಾತನಾಡಿ, ರೈತರು ತಾಲೂಕು ಕಚೇರಿಯಲ್ಲಿ ಕೆಲಸಕ್ಕೆ ಬಂದರೆ ಅಧಿಕಾರಿಗಳು ಕಡೆಗಣಿಸುತ್ತಾರೆ. ಇದೇ ರೀತಿ ಅಧಿಕಾರಿಗಳು ವರ್ತನೆ ತೋರಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾರತೀಯ ಕಿಸಾನ್‌ ಸಂಘದ ಜಿಲ್ಲಾ ಕಾರ್ಯದರ್ಶಿ ಜಯರಾ ಮಯ್ಯ, ತಾಲೂಕು ಅಧ್ಯಕ್ಷ ನಾಗೇಶ್‌, ಪ್ರಧಾನ ಕಾರ್ಯದರ್ಶಿ ಹರೀಶ್‌, ಪರಿಸರ ಪ್ರೇಮಿ ಗಂಗಣ್ಣ, ಮಾಜಿ ಸೈನಿಕ ಮಿಲ್ಟ್ರಿಮೂರ್ತಿ, ರೈತರಾದ ಲಕ್ಷಣಪ್ಪ, ಶಿವಗಂಗಯ್ಯ, ಜಗದೀಶ್‌, ಲಕ್ಷ್ಮೀ ಕಾಂತ್‌, ಪಾಪೇಗೌಡ, ಉಮೇಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Miracle: ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

14-hospete

Hospete: ಸ್ಮಾರಕಗಳ ಮಹತ್ವ, ಸಂರಕ್ಷಣೆ ಮುಂದಿನ ಪೀಳಿಗೆಗೆ ತಿಳಿಸೋದು ಅಗತ್ಯ: ಡಿಸಿ ದಿವಾಕರ್

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Renukaswamy case: ನಮ್ಮ ಸಿಎಂ ಯಾರ ಒತ್ತಡಕ್ಕೂ ಮಣಿಯುವವರು ಅಲ್ಲ; ಚಲುವರಾಯಸ್ವಾಮಿ

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.