ಪುರಸಭೆ ಚುನಾವಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

Team Udayavani, May 6, 2019, 3:00 AM IST

ದೇವನಹಳ್ಳಿ: ಲೋಕಸಭಾ ಚುನಾವಣೆ ಮುಗಿದು ಫ‌ಲಿತಾಂಶಕ್ಕೆ ಕಾಯುತ್ತಿರುವಾಗಲೇ ಪುರಸಭೆ ಚುನಾವಣೆ ಘೋಷಣೆಯಾಗಿದ್ದರಿಂದ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ.

ಲೋಕಸಭಾ ಚುನಾವಣೆ ಫ‌ಲಿತಾಂಶದ ನಂತರ ಜೂನ್‌, ಜುಲೈನಲ್ಲಿ ಪುರಸಭೆ ಚುನಾವಣೆ ನಿಗದಿಯಾಗುತ್ತದೆ ಎಂದು ನಿರಾಳರಾಗಿದ್ದ ಮುಖಂಡರು, ದಿಢೀರ್‌ ಚುನಾವಣೆ ಘೋಷಣೆಯಾಗಿದ್ದರಿಂದ ಮೈಗೊಡವಿಕೊಂಡು ಎದ್ದೇಳುವಂತೆ ಮಾಡಿದೆ.

ಖಾತೆ ತೆರೆಯಲು ಸಜ್ಜಾದ ಬಿಜೆಪಿ: ಇತ್ತೀಚೆಗಷ್ಟೇ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಜ್ಜಾಗಬೇಕಾದ ಪರಿಸ್ಥಿತಿ ಎದುರಾಗಿದೆ. ಕಾಂಗ್ರೆಸ್‌, ಜೆಡಿಎಸ್‌ ಮಧ್ಯೆ ಪೈಪೋಟಿ ಇದ್ದು, ಈ ಬಾರಿ ಬಿಜೆಪಿ ಖಾತೆ ತೆರೆಯಲು ಸಜ್ಜಾಗಿದೆ.

ಕಾಂಗ್ರೆಸ್‌, ಜೆಡಿಎಸ್‌ ಹಣಾಹಣಿ ಸಾಧ್ಯತೆ: ತಾಲೂಕಿನಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಸಾಂಪ್ರದಾಯಿಕ ಎದುರಾಳಿಗಳು ಲೋಕಸಭಾ ಚುನಾವಣೆಯಲ್ಲಿ ಪರಸ್ಪರ ಕೈ ಕುಲುಕಿಕೊಂಡು, ಹಾರ, ತುರಾಯಿ ಹಾಕಿಕೊಂಡವರ ನಡುವೆ ಹಣಾಹಣಿ ಜೋರಾಗಿ ನಡೆಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಆಕಾಂಕ್ಷಿಗಳ ಸಂಖ್ಯೆ ಹೆಚ್ಚಳ: ಈಗಾಗಲೇ ದೇವನಹಳ್ಳಿಯ 23ವಾರ್ಡ್‌ಗಳಲ್ಲಿ ಆಕಾಂಕ್ಷಿಗಳು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಒಂದೊಂದು ವಾರ್ಡ್‌ನಲ್ಲಿ 2ರಿಂದ 3, 4ಮಂದಿ ಆಕಾಂಕ್ಷಿಗಳು ಇದ್ದಾರೆ ಎನ್ನಲಾಗುತ್ತಿದೆ. ಕಳೆದ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 10, ಜೆಡಿಎಸ್‌ 9, 4 ಮಂದಿ ಪಕ್ಷೇತರರು ಗೆದಿದ್ದರು. ಹಾಲಿ ಪುರಸಭಾ ಕೆಲವು ಸದಸ್ಯರಿಗೆ ವಾರ್ಡ್‌ಗಳ ಮೀಸಲಾತಿ ಬದಲಾಗಿರುವುದರಿಂದ ಕ್ಷೇತ್ರವನ್ನು ಹುಡುಕುವಂತಾಗಿದೆ.

ಆಕಾಂಕ್ಷಿಗಳು ಚುನಾವಣೆ ಘೋಷಣೆ ಆದ ಬೆನ್ನಲ್ಲೇ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಟಿಕೆಟ್‌ಗೆ ದುಂಬಾಲು ಬೀಳುವಂತಾಗಿದೆ. ಬಿಜೆಪಿಯಿಂದಲೂ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಅದಕ್ಕಾಗಿ, ಮುಖಂಡರು ಸೋಮವಾರ ಸಭೆ ಸೇರಲಿದ್ದಾರೆ ಎನ್ನಲಾಗಿದೆ. ಅಮಾವಾಸ್ಯೆ ಮತ್ತು ಪಾಡ್ಯಮಿ ಇರುವುದರಿಂದ ಸೋಮವಾರದಿಂದ ಸಭೆಗಳನ್ನು ಮಾಡಿ ಪುರಸಭೆ ಚುನಾವಣೆಗೆ ತಯಾರಿ ನಡೆಸಲಾಗುವುದು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.

ಜೆಡಿಎಸ್‌ ಕಚೇರಿಯಲ್ಲಿ ಆಕಾಂಕ್ಷಿಗಳು ಮತ್ತು ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಶಾಸಕರ ನೇತೃತ್ವದಲ್ಲಿ ಕರೆಯಲಾಗಿದೆ ಎಂದು ತಾಲೂಕು ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ ಹೇಳಿದ್ದಾರೆ. ಸೋಮವಾರ ಕಾಂಗ್ರೆಸ್‌ನ ಸಭೆ ಕರೆಯಲಾಗಿದೆ. ದೇವನಹಳ್ಳಿ ನಗರದಲ್ಲಿ ಮಾಡಿರುವ ಅಭಿವೃದ್ಧಿ ಕೆಲಸ ಹಾಗೂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಾಡಿರುವ ಅಭಿವೃದ್ಧಿ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತೇವೆ ಎಂದು ಪುರಸಭಾ ಮಾಜಿ ಅಧ್ಯಕ್ಷ ಎಂ.ಮೂರ್ತಿ ಹೇಳುತ್ತಾರೆ.

ಕದನ ಕುತೂಹಲ: ಮಾರ್ಚ್‌ 14ರಂದು ಪುರಸಭೆ ಅಧಿಕಾರವಧಿ ಮುಗಿದಿತ್ತು. ದಿಢೀರ್‌ ಚುನಾವಣೆ ಘೋಷಣೆ ಆಗಿರುವುದರಿಂದ ಮುಖಂಡರು ಹಾಗೂ ಕಾರ್ಯಕರ್ತರು ಅನಿವಾರ್ಯವಾಗಿ ಚುನಾವಣೆ ಎದುರಿಸುವಂತಾಗಿದೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ ಕೆಲವೆಡೆ ಸಾರ್ವಜನಿಕರು ಯಾವ ಯಾವ ಪಕ್ಷದಲ್ಲಿ ಆಕಾಂಕ್ಷಿಗಳು ಇದ್ದಾರೆ ಎಂಬುದರ ಬಗ್ಗೆ ಗಹನ ಚರ್ಚೆಯಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಹಾಗಾಗಿ, ಚುನಾವಣೆ ಘೋಷಣೆ ಆದ ಕೂಡಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದಂತಾಗಿವೆ.

ಕಳೆದ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 10, ಜೆಡಿಎಸ್‌ 9 ಹಾಗೂ 4ಮಂದಿ ಪಕ್ಷೇತರರು ಗೆಲವು ಸಾಧಿಸಿದ್ದರಿಂದ ಯಾವುದೇ ಪಕ್ಷಕ್ಕೂ ಬಹುಮತ ಸಿಗದ ಕಾರಣ 2ಪಕ್ಷಗಳು ಸೇರಿ ಅಧಿಕಾರ ನಡೆಸಿದ್ದವು. ಈ ಬಾರಿಯ ಕದನ ಕುತೂಹಲಕ್ಕೆ ಮೇ 31ರಂದು ಹೊರಬೀಳುವ ಪುರಸಭಾ ಚುನಾವಣಾ ಫ‌ಲಿತಾಂಶದೊಂದಿಗೆ ತೆರೆಬೀಳಲಿದೆ.

* ಎಸ್‌.ಮಹೇಶ್‌

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ನೆಲಮಂಗಲ: ರಾಷ್ಟ್ರದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿ, ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವ ಪ್ರತಿಯೊಬ್ಬರಿಗೂ ದೇಶದ ಅನ್ನ, ನೀರು ನೀಡದೆ ಗಡಿಪಾರು ಮಾಡಬೇಕು ಎಂದು...

  • ದೇವನಹಳ್ಳಿ: ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಾಗ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದುಇಂಡಿಯನ್‌ ಆಯಿಲ್‌...

  • ನೆಲಮಂಗಲ : ರೈತರಿಗೆ ಎದುರಾಗುವ ಬೆಲೆ ಕುಸಿತ, ಬೆಳೆಹಾನಿಯ ಸಂಕಷ್ಟಗಳ ನಡುವೆ ಸರ್ವರ್‌ ಸಮಸ್ಯೆಯಿಂದಾಗಿ, ಸಾಲ ಸೌಲಭ್ಯಕ್ಕಾಗಿ ಬೆಳೆ ಆಧಾರ್‌ ಪತ್ರ ಪಡೆಯಲು ಅಲೆದಾಡುವ...

  • ನೆಲಮಂಗಲ : ತರಕಾರಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು, ಬೆಳೆದ ಬೆಳೆಯನ್ನು ರಸ್ತೆಗೆ ಸುರಿಯದೇ ಮಠಗಳು ಹಾಗೂ ದಾಸೋಹ ಕೇಂದ್ರಗಳಿಗೆ ರವಾನೆ ಮಾಡುವ ಮೂಲಕ ಸಂಕಷ್ಟದಲ್ಲೂ...

  • ಹೊಸಕೋಟೆ: ಶಿವಾಜಿ ಮಹಾರಾಜರು ಹೊಂದಿದ್ದ ಹೋರಾಟ ಮನೋಭಾವ, ತೋರಿದ ದೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿಯಾಗಿದೆ ಎಂದು ತಹಶೀಲ್ದಾರ್‌ ವಿ. ಗೀತಾ ಹೇಳಿದರು. ಅವರು...

ಹೊಸ ಸೇರ್ಪಡೆ

  • ಅಮೆರಿಕ ವಿಶ್ವದ ಶ್ರೀಮಂತ, ಬಲಿಷ್ಠ, ಭವ್ಯ ರಾಷ್ಟ್ರ. ಇದೀಗ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೆ. 24 ಮತ್ತು 25 ರಂದು ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ....

  • ಕುಂಬಳೆ: ಕಾಸರಗೋಡು ಜಿಲ್ಲೆಯ ಪುತ್ತಿಗೆ ಗ್ರಾಮ ಪಂಚಾಯತಿನ ಬಾಡೂರು ಹೊಸಗದ್ದೆ ಮನೆಯ ದೀಲಿಪ್‌ ಕುಮಾರ್‌ ವತ್ಸಲಾ ದಂಪತಿ ಪುತ್ರ ಹೃದಯ್‌ ಹುಟ್ಟಿನಿಂದಲೇ ತೀವ್ರತರವಾದ...

  • ಮಂಗಳೂರು/ಉಡುಪಿ: ರಾಜ್ಯಾದ್ಯಂತ ಎ. 26ರಂದು ನಡೆಯಲಿರುವ "ಸಪ್ತಪದಿ' ಸಾಮೂಹಿಕ ಸರಳ ವಿವಾಹ ಯೋಜನೆಯನ್ನು ಬಡವರಿಗಾಗಿ ರೂಪಿಸಿದ್ದರೂ ಶ್ರೀಮಂತರು ಕೂಡ ಇಲ್ಲಿ ಸರಳ ವಿವಾಹವಾಗುವ...

  • ಜಮ್ಮು: ಕರ್ನಾಟಕ ತಂಡ ರಣಜಿ ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಪರಿಸ್ಥಿತಿಯ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತಲ್ಲದೆ ಅನನುಭವಿ ತಂಡವೊಂದರ ವಿರುದ್ಧ ಹಿನ್ನಡೆ...

  • ಜಾಗತಿಕ ತಾಪಮಾನ ಏರಿಕೆ 2050ರ ವೇಳೆಗೆ ಭಾರತದ ಜಿಡಿಪಿ ಬೆಳವಣಿ ಗೆಯ ಮೇಲೆ ಸಾಕಷ್ಟು ಪ್ರತಿಕೂಲ ಪರಿಣಾಮಗಳನ್ನು ಬೀರಲಿದೆ ಎಂದು ಮೆಕಿನ್ಸೆ ಗ್ಲೋಬಲ್‌ ಇನ್‌ಸ್ಟಿಟ್ಯೂಟ್‌...