ಘಾಟಿಯಲ್ಲಿ ಶ್ರದ್ಧಾ ಭಕ್ತಿಯಿಂದ ನಾಗರಪಂಚಮಿ ಆಚರಣೆ

Team Udayavani, Aug 6, 2019, 3:00 AM IST

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಹಬ್ಬಗಳ ಸಾಲಿನ ಮೊದಲ ಹಬ್ಬ ನಾಗರಪಂಚಮಿಯನ್ನು ತಾಲೂಕಿನಲ್ಲಿ ಸಂಭ್ರಮ-ಸಡಗರ ಹಾಗೂ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಜನಪದರಲ್ಲಿ ಅಣ್ಣ ತಂಗಿಯರ ಬಾಂಧವ್ಯದ ಬೆಸುಗೆಯಾಗಿ ಆಚರಿಸಲ್ಪಡುವ ಈ ಹಬ್ಬದಲ್ಲಿ ನಾಗಪೂಜೆ ಪ್ರಮುಖವಾಗಿದೆ. ಈ ದಿನದಂದು ನಾಗರಕಲ್ಲುಗಳಿಗೆ, ಹುತ್ತಗಳಿಗೆ ಪೂಜೆ ಸಲ್ಲಿಸಿ ಮನೆಯಲ್ಲಿ ಸಿಹಿಯೂಟ ಮಾಡುವ ಮೂಲಕ ಆಚರಿಸಲಾಗುತ್ತದೆ.

ಭಾನುವಾರವಷ್ಟೇ ನಾಗರ ಚೌತಿ ಆಚರಿಸಲಾಯಿತು. ಮದುವೆಯಾದ ನವ ದಂಪತಿಗಳು ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ಮಹಿಳೆಯರು ನಾಗ ಪ್ರತಿಷ್ಠಾಪನೆಯಾಗಿರುವ ದೇವಾಲಯಗಳಿಗೆ ತೆರಳಿ ನಾಗರ ಕಲ್ಲಿಗೆ ಹಾಲೆರೆದು ಪೂಜೆ ಸಲ್ಲಿಸಿದರು. ತಾಲೂಕಿನ ಘಾಟಿ ಪುಣ್ಯಕ್ಷೇತ್ರದಲ್ಲಿನ ನಾಗರಕಲ್ಲುಗಳಿಗೆ ಸಹಸ್ರಾರು ಭಕ್ತಾದಿಗಳು ಹಾಲೆರೆದು ವಿಶೇಷ ಪೂಜೆ ಸಲ್ಲಿಸಿದರು. ಸಹಸ್ರಾರು ಭಕ್ತರು ದೇವಾಲಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ನಾಗರಪಂಚಮಿ ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯ ರಾಜಬೀದಿ ಉತ್ಸವ ನಡೆಯಿತು.

ನಾಗರ ಕಲ್ಲುಗಳನ್ನು ಪೂಜಿಸುವುದರಿಂದ ನಾಗದೋಷದಿಂದ ಉಂಟಾಗುವ ಎಲ್ಲಾ ಸಮಸ್ಯೆ ಬಗೆ ಹರಿಯುತ್ತದೆ. ಶ್ರೀಘಾಟಿ ಸುಬ್ರಹ್ಮಣ್ಯ ಕ್ಷೇತ್ರ ದೇವಸ್ಥಾನ ನಾಗದೋಷಗಳಿಗೆ ಹೆಸರವಾಸಿ ಪುಣ್ಯಕ್ಷೇತ್ರ. ಇಲ್ಲಿ ಮಕ್ಕಳ ದೋಷ. ಸ್ತ್ರೀ ದೋಷಗಳಿದ್ದರೆ ಇಲ್ಲಿ ಬಂದು ನಾಗರಕಲ್ಲುಗಳಿಗೆ 5 ವಾರ ಪೂಜೆ ಸಲ್ಲಿಸಿದರೆ ದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯಿದೆ ಎಂದು ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ನಿಧಿ ಹೇಳುತ್ತಾರೆ.

ನಗರದ ನೆಲದಾಂಜನೇಯಸ್ವಾಮಿ ದೇವಾಲಯ ಮೊದಲಾಗಿ, ಕೆರೆಕಟ್ಟೆ ನಾಗರಕಲ್ಲುಗಳು ಹಾಗೂ ವಿವಿಧ ದೇವಾಲಯದಲ್ಲಿನ ನಾಗರಕಲ್ಲುಗಳಿಗೆ ಹಾಲೆರೆದು ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮದುವೆಯಾದ ಹೆಣ್ಣುಮಕ್ಕಳನ್ನು ತವರು ಮನೆಗೆ ಕರೆಸಿಕೊಂಡು ಅವರಿಗೆ ಉಡಿ ತುಂಬುವುದು, ಅವರು ತಮ್ಮ ತವರು ಮನೆಗೆ ಒಳಿತಾಗಲಿ ಎಂದು ಹಾರೈಸುವುದು. ವರ್ಷ ಪೂರ್ತಿ ಕೆಲಸ ಮಾಡುವ ರೈತಾಪಿ ಜನರಿಗೆ ಹಾವು ಕಚ್ಚಬಾರದು ಎನ್ನುವ ನಂಬಿಕೆಯಿಂದ ಹಾಲು ಎರೆದು ಪೂಜಿಸುವುದು ಹಬ್ಬದ ವಿಶೇಷತೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಹೊಸಕೋಟೆ: ಕೇಂದ್ರ ಸರಕಾರ ರೈತರ ಹಿತ ಕಾಪಾಡಲು ಬದ್ಧವಾಗಿದ್ದು ಜಾರಿಗೊಳಿಸಿರುವ ವಿಶಿಷ್ಟ ಯೋಜನೆಗಳಿಂದ ರಾಷ್ಟ್ರವು ಕೃಷಿಯಲ್ಲಿ ಸ್ವಾವಲಂಬನೆ ಸಾಧಿಸಿದೆ ಎಂದು...

  • ದೇವನಹಳ್ಳಿ: ಸರ್ಕಾರದಿಂದ ನೀಡುತ್ತಿರುವ ಲ್ಯಾಪ್‌ಟಾಪ್‌ ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು. ನಗರದ...

  • ದೊಡ್ಡಬಳ್ಳಾಪುರ:ನಗರದಲ್ಲಿ ತಲೆ ಎತ್ತುತ್ತಿರುವ ಮಾಲ್‌ಗ‌ಳು, ಆನ್‌ಲೈನ್‌ ಕಂಪನಿಗಳಿಂದ ವ್ಯಾಪಾರಸ್ಥರಿಗೆ ಹೊಡೆತ ಬೀಳುತ್ತಿದೆ. ಇದಕ್ಕೆ ಪೂರಕವಾದ ಸರ್ಕಾರದ...

  • ದೊಡ್ಡಬಳ್ಳಾಪುರ:  ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಪ್ರಸ್ತುತ ಖರೀದಿಸಲಾಗುತ್ತಿರುವ 10 ಕ್ವಿಂಟಲ್‌ ರಾಗಿ ಪ್ರಮಾಣವನ್ನು 15 ಕ್ವಿಂಟಲ್‌ಗೆ ಏರಿಸಬೇಕು....

  • ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿನೂತನ ಸಪ್ತಪದಿ ಯೋಜನೆಯ ಪ್ರಚಾರದ ಸಲುವಾಗಿ ತಾಲೂಕಿನ ಎಸ್‌.ಎಸ್‌ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ...

ಹೊಸ ಸೇರ್ಪಡೆ