ದೇಶದ ಬದಲಾವಣೆಗೆ ಹೊಸ ತಂತ್ರಜ್ಞಾನ ಅನಿವಾರ್ಯ

Team Udayavani, Nov 13, 2019, 3:00 AM IST

deshada-bada

ನೆಲಮಂಗಲ: ಜಗತ್ತಿನಲ್ಲಿ ಅಭಿವೃದ್ಧಿ ಹೊಂದಿರುವ ದೇಶಗಳ ಜೊತೆ ಸ್ಪರ್ಧೆ ನಡೆಸಲು ಹೊಸ ತಂತ್ರಜ್ಞಾನ ಅನಿವಾರ್ಯ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೊಸ ಮಾದರಿ ತಯಾರಿಸಿದ್ದಾರೆ ಎಂದು ಡಯಟ್‌ನ ಜಿಲ್ಲಾ ನೋಡಲ್‌ ಅಧಿಕಾರಿ ಜಿ.ಎಚ್‌. ಶಶಿಧರ್‌ ತಿಳಿಸಿದರು. ಪಟ್ಟಣದ ಸುಭಾಷ್‌ ನಗರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಡಯಟ್‌ನಿಂದ ಆಯೋಜಿಸಲಾಗಿದ್ದ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ವಸ್ತು ಪ್ರದರ್ಶನ ನಡೆಸಲಾಯಿತು.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ವಿದ್ಯಾರ್ಥಿಗಳಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನದ ಬದಲಾವಣೆಯನ್ನು ಸಮಾಜಕ್ಕೆ ಪರಿಚಯಿಸುವ ಒಂದು ವೇದಿಕೆಯನ್ನು ಶಿಕ್ಷಣ ಇಲಾಖೆ ಹಾಗೂ ಡಯಟ್‌ ಒದಗಿಸುತ್ತಿದೆ. ಈ ಹಿಂದೆ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ತಾಲೂಕಿನಲ್ಲಿ ನೋಡಿದ್ದೇವೆ.

ಇನ್ನೂ ಹೆಚ್ಚು ವಿದ್ಯಾರ್ಥಿಗಳು ಸಾಧಕರಾಗಲು ಸರ್ಕಾರ ಉತ್ತಮ ಅವಕಾಶ ರೂಪಿಸಿದೆ ಎಂದರು. ಡಯಟ್‌ ಡಿಡಿಪಿಐ ನಾಗಮಣಿ ಮಾತನಾಡಿ, ಮಕ್ಕಳ ಸೃಜನಶೀಲತೆಯಿಂದ ಕಲಿಕೆ ಜ್ಞಾನ ಹೆಚ್ಚಾಗಿ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆ. ವಿದ್ಯಾರ್ಥಿಗಳು ಪಠ್ಯದ ಶಿಕ್ಷಣದ ಜೊತೆ ವಿಜ್ಞಾನ ತಂತ್ರಜ್ಞಾನ ನೂತನ ಅನ್ವೇಷಣೆ ಮಾಡಿದರೆ ಸಮಾಜದಲ್ಲಿ ಸಾಧಕರಾಗಲು ಸಾಧ್ಯವಾಗುತ್ತದೆ ಎಂದರು.

48 ಮಾದರಿಗಳು: ಜಿಲ್ಲೆಯಯಿಂದ ಒಟ್ಟು 48 ತಂಡಗಳ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು 6 ವಿಭಾಗಗಳಾದ ಸ್ವತ್ಛತೆ ಆರೋಗ್ಯ, ಕೈಗಾರಿಕೆ ಅಭಿವೃದ್ಧಿ, ಸಂಪನ್ಮೂಲ ನಿರ್ವಹಣೆ, ಭವಿಷ್ಯದಲ್ಲಿ ಸಾರಿಗೆ ಸಂಪತ್ತು, ಸುಸ್ಥಿರ ಕೃಷಿ ಪದ್ಧತಿ, ಗಣಿತ ಮಾದರಿಯಲ್ಲಿ 48 ಮಾದರಿಗಳನ್ನು ಪ್ರದರ್ಶಿಸಿದರು.

ಸರ್ಕಾರಿ ಶಾಲೆಗೆ ಬಹುಮಾನ: ಜಿಲ್ಲಾ ಮಟ್ಟದ ವಿಜ್ಞಾನ ಹಾಗೂ ತಂತ್ರಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ತಾಲೂಕಿನ ಸೋಲದೇವನಹಳ್ಳಿ ಸರ್ಕಾರಿ ಪ್ರೌಢಶಾಲೆ ಚೇತನ್‌ ಹಾಗೂ ಪ್ರಶಾಂತ್‌ ಸಂಪನ್ಮೂಲ ನಿರ್ವಹಣೆಯಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರವೀಣ್‌ ಹಾಗೂ ದರ್ಶನ ಸುಸ್ಥಿರ ಕೃಷಿ ಪದ್ಧತಿಯಲ್ಲಿ ದ್ವಿತೀಯ, ಸ್ವತ್ಛತೆ ಆರೋಗ್ಯದಲ್ಲಿ ಪುರುಷೋತ್ತಮ, ಅಭಿಷೇಕ್‌ ದ್ವೀತಿಯ ಸ್ಥಾನ ಪಡೆಯುವ ಮೂಲಕ ಸರ್ಕಾರಿ ಶಾಲೆ ಹಿರಿಮೆ ಹೆಚ್ಚಿಸಿದ್ದಾರೆ. ದೈಹಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವಿ.ಜಿ. ಮಂಜುನಾಥ್‌, ಉಪನ್ಯಾಸಕಿ ಮಧುಮತಿ, ಮುಖ್ಯ ಶಿಕ್ಷಕ ಗಂಗಾ ಬೈಲಪ್ಪ, ಬಿಆರ್‌ಸಿ ಕೃಷ್ಣಮೂರ್ತಿ, ಪೆದ್ದಣ್ಣ, ಶಿಕ್ಷಕ ಶ್ರೀನಿವಾಸಮೂರ್ತಿ, ಸರ್ವಮಂಗಲ, ಹೇಮಾವತಿ ಮತ್ತಿತರರಿದ್ದರು.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.