ಮಾಯಾವಾಗುತ್ತಿವೆ ವಶಕ್ಕೆ ಪಡೆದ ಕಲ್ಲು ದಿಮ್ಮಿಗಳು

Team Udayavani, Nov 22, 2019, 1:46 PM IST

br-tdy-1

ದೇವನಹಳ್ಳಿ: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಮೇಲೆ ಅಂದಿನ ಜಿಲ್ಲಾಕಾರಿ, ಭೂ ಮತ್ತು ಗಣಿ ಇಲಾಖೆ ಹಾಗೂ ತಾಲೂಕು ಕಂದಾಯ ಇಲಾಖೆಯ ಅಧಿಕಾರಿಗಳು ಕಲ್ಲು ಗಣಿಗಳ ಮೇಲೆ ದಾಳಿ ನಡೆಸಿ ವಶ ಪಡಿಸಿಕೊಂಡಿದ್ದ ಕಲ್ಲು ದಿಮ್ಮಿಗಳು ಮಾಯ ವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

2015 ರಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಬಗ್ಗೆ ವ್ಯಾಪಕ ದೂರ ಬಂದ ಹಿನ್ನಲೆ ಕೋಟ್ಯಾಂತರ ರೂ ಬೆಲೆ ಬಾಳುವ ಸುಮಾರು 5 ಸಾವಿರಕ್ಕೂ ಹೆಚ್ಚಿನ ಅಕ್ರಮ ಕಲ್ಲು ದಿಮ್ಮಿಗಳನ್ನು ವಿವಿಧ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕಲ್ಲು ಕಳ್ಳತನಕ್ಕೆ ಸರಳ: ವಶ ಪಡಿಸಿಕೊಂಡ ಕಲ್ಲು ದಿಮ್ಮಿಗಳು ವಿಶ್ವನಾಥಪುರ ಪೊಲೀಸ್‌ ಠಾಣೆ ಸುತ್ತ ಮುತ್ತ, ಆಯಾ ಗ್ರಾಮಗಳ ಒಳಗೆ ರಸ್ತೆ ಪಕ್ಕ ಹಾಗೂ ಜಮೀನು ಸೇರಿದಂತೆ ಎಲ್ಲೆಂದರಲ್ಲಿ ಕಲ್ಲು ದಿಮ್ಮಿಗಳು ಬಿದ್ದಿದ್ದು, ಅದಕ್ಕೆ ಕಾವಲುಗಾರರು ಇಲ್ಲ. ಇದರಿಂದ ಕಲ್ಲು ಕಳ್ಳತನ ಮಾಡುವವರಿಗೆ ಸರಳವಾಗಿದೆ ಎಂಬುದು ಸ್ಥಳೀಯರ ಮಾತಾಗಿದೆ.

ನಡೆಯದ ಹರಾಜು: ವಶಪಡಿಸಿಕೊಂಡ ಕಲ್ಲು ದಿಮ್ಮಿ ಗಳನ್ನು ಜಿಲ್ಲಾ ಮತ್ತು ಗಣಿ ಇಲಾಖೆ ಬಹಿರಂಗ ಹರಾಜು ಮಾಡಲು 2016 ರ ಏ.11ರಂದು ದಿನ ಪತ್ರಿಕೆಯಲ್ಲಿ ಪ್ರಕಟಣೆ ನೀಡಿತ್ತು. ಕೋಯಿರಾ, ಚಿಕ್ಕಗೊಲ್ಲಹಳ್ಳಿ, ಮೀಸಗಾನ ಹಳ್ಳಿ, ಮಾಯ ಸಂದ್ರ, ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮ ವಾಗಿ ತೆಗೆಯಲಾದ 2.848 ಗ್ರೇ ಗ್ರಾನೈಟ್‌ಗಳ ಹರಾ ಜಿಗೆ ಕನಿಷ್ಠ ಖನಿಜ ಮಾರಾಟದ ಬೆಲೆ ಮೊತ್ತ 38.28 ಕೋಟಿ ರೂ, ನಿಗದಿಪಡಿಸಿತ್ತು. ಹರಾಜಿನಲ್ಲಿ ಭಾಗ ವಹಿಸುವವರು ಒಟ್ಟು ಮೊತ್ತ ಶೇ.25 ರಷ್ಟು ಇಎಮ್‌ಡಿ ಹಣವನ್ನು ಡಿಡಿ ಮೂಲಕ ಹರಾಜು ಪ್ರಕ್ರಿಯೆ ಮುಗಿದ ನಂತರ ಬೀಡ್‌ ಪಡೆದವರು ನೀಡಬೇಕು ಎಂಬ ಷರತ್ತು ಹಾಕಲಾಗಿತ್ತು. ಹರಾಜು ಪ್ರಕ್ರಿಯೆ ಇಲಾಖೆ ನಿಯಮದಂತೆ ನಡೆಯದ ಕಾರಣ ಅದನ್ನು ಕೈಬಿಟ್ಟದ್ದರು ಎಂದು ಸ್ಥಳಿಯ ಮುಖಂಡರು ಹೇಳುತ್ತಾರೆ.

ಪ್ರತಿಯೊಂದು ದಿಮ್ಮಿ ಕಲ್ಲಿನ ಅಗಲ ಎತ್ತರ ಮತ್ತು ಉದ್ದವನ್ನು ಅಳತೆ ಮಾಡಿ ಆಯಾ ಗ್ರಾಮಗಳ ವ್ಯಾಪ್ತಿಯ ಸರ್ವೇ ನಂಬರ್‌ ಅನ್ವಯ ದಿಮ್ಮಿಗಳ ಮೇಲೆ ಸಂಖ್ಯೆ ನಮೋದಿಸಲಾಗಿತ್ತು. ಅಂದು ವಶ ಪಡಿಸಿಕೊಂಡಿದ್ದ ಶೇ.50 ರಷ್ಟು ದಿಮ್ಮಿಗಳು ಈಗ ಇಲ್ಲ. ಕಲ್ಲು ಗಣಿ ಮಾಫಿಯಾ ಅವರಿಗೆ ಗಣಿ ಇಲಾಖೆ ಅಧಿಕಾರಿಗಳ ಪರೋಕ್ಷ ಬೆಂಬಲದಿಂದ ದಿಮ್ಮಿಳನ್ನು ರಾತ್ರೋ ರಾತ್ರಿ ಸಾಗಿಸುತ್ತಿರುವುದು ಮತ್ತು ಬಿದ್ದಿರುವ ದಿಮ್ಮಿಗಳನ್ನೇ ಸೀಳಿ ತಂತಿ ಬೇಲಿಗೆ ಉಪಯೋಗಿಸುವ ಕಲ್ಲು ಕಂಬಗಳನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಸ್ಥಳೀಯ ಗ್ರಾಮಸ್ಥರ ಆರೋಪವಾಗಿದೆ.

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.