ಬೋರ್‌ವೆಲ್‌ ಕೊರೆಸಲು ಅನುಮತಿ ಕಡ್ಡಾಯ

ಅನುಮತಿ ಪಡೆಯದಿದ್ದರೆ, ಪ್ರಕರಣ ದಾಖಲು, ಸರ್ಕಾರದ ಸೌಲಭ್ಯ ಕಡಿತ

Team Udayavani, Oct 31, 2020, 2:00 PM IST

ಬೋರ್‌ವೆಲ್‌ ಕೊರೆಸಲು ಅನುಮತಿ ಕಡ್ಡಾಯ

ದೇವನಹಳ್ಳಿ: ರಾಜ್ಯದಲ್ಲಿ ಅಂತರ್ಜಲ ಪ್ರಮಾಣ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಅಧಿಸೂಚಿತ ಪ್ರದೇಶಗಳಲ್ಲಿ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಸೂಚನೆಹೊರಡಿಸಿದೆ. ಆದರೆ, ಅನಿವಾರ್ಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಸಮಿತಿ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸಿದರೆ, ಕ್ರಿಮಿನಲ್‌ ಮೊಕದ್ಧಮ್ಮೆ ಹಾಗೂ ಕಠಿಣ ಕ್ರಮ ಎದುರಿಸಬೇಕಾಗುತ್ತದೆ.

ಅಧಿಸೂಚಿತ ಪ್ರದೇಶ: ರಾಜ್ಯದ 15 ಜಿಲ್ಲೆಗಳ 45 ತಾಲೂಕುಗಳನ್ನು ಅಧಿಸೂಚಿತ ಪ್ರದೇಶಗಳೆಂದು ಗುರುತಿಸಿರುವ ಪಟ್ಟಿಯಲ್ಲಿ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ ತಾಲೂಕುಗಳಲ್ಲಿ ಕೊಳವೆ ಬಾವಿ ಕೊರೆಸಿದರೆ, ಜಿಲ್ಲಾ ಸಮಿತಿ ಅನುಮತಿ ಜತೆಗೆ ನೋಂದಣಿ ಮಾಡಿಸಬೇಕು. ಇಲ್ಲದಿದ್ದರೆ, ಸರ್ಕಾರದಿಂದ ನೀಡುವ ಪ್ರೋತ್ಸಾಹದಾಯಕ ಯೋಜನೆಗಳು ಮತ್ತು ಕೊಳವೆ ಬಾವಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವುದಿಲ್ಲ. ಹಾಗೂ ಕೊಳವೆ ಬಾವಿ ಕೊರೆಸುವ ಭೂ ಮಾಲೀಕರು ಮತ್ತು ಕೊಳವೆ ಬಾವಿ ಯಂತ್ರದ ಮಾಲೀಕರನ್ನು ಅಪರಾಧಿಗಳೆಂದು ಪ್ರಕರಣ ದಾಖಲಿಸುವ ಕಾನೂನು ರೂಪಿಸಲಾಗಿದೆ.

ಅಲ್ಪ ಸ್ವಲ್ಪ ನೀರು: ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 38 ಸಾವಿರ ಕೃಷಿ ಮತ್ತು ಕೃಷಿಯೇತರ ಕೊಳವೆ ಬಾವಿಗಳಿದ್ದು, ಈ ಪೈಕಿ 12,300 ಕೊಳವೆ ಬಾವಿಗಳಲ್ಲಿ ನೀರಿಲ್ಲ. 5,201 ಕೊಳವೆ ಬಾವಿಗಳಿಗೆ ಭೂ ಮಾಲೀಕರು ವಿದ್ಯುತ್‌ ಸಂಪರ್ಕ ಕಡಿತಗೊಳಿಸಿಕೊಂಡಿದ್ದಾರೆ. ಕನಿಷ್ಠ 10 ಕೊಳವೆ ಬಾವಿ ಕೊರೆಸಿದರೆ, 4-5 ರಲ್ಲಿ ನೀರು ಅಲ್ಪ ಸ್ವಲ್ಪ ಸಿಗಲಿದೆ ಎಂದು ಅಂತರ್ಜಲ ನಿರ್ದೇಶನಾಲಯ ಹಾಗೂ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.

ಅಂತರ್ಜಲ ಮಟ್ಟ ಕುಸಿತ: ದೇವನಹಳ್ಳಿ ತಾಲೂಕಿನ ಬೆಟ್ಟಕೋಟೆ ಗ್ರಾಪಂ ವ್ಯಾಪ್ತಿಯಲ್ಲಿ 2011ನೇ ಸಾಲಿನಿಂದ ಅನುಮತಿ ಇಲ್ಲದೆ, ಯಾವುದೇ ಕೊಳವೆ ಬಾವಿ ಕೊರೆಯುವಂತಿಲ್ಲ. ಈ ಭಾಗದಲ್ಲಿ ಫ್ಲೋರೈಡ್‌ಯುಕ್ತ ಅಂಶ ಹೆಚ್ಚಳವಾಗಿದೆ. ಜನಜಾನುವಾರು ಹಾಗೂ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗಿದೆ. ಜಿಲ್ಲೆಯಲ್ಲಿ ಯಾವುದೇ ನದಿ ಮೂಲಗಳು ಇಲ್ಲದೆ, ಮಳೆಯಾಶ್ರೀತ ಮತ್ತು ಕೊಳವೆ ಬಾವಿಗಳ ಮೂಲಕವೇ ಕೃಷಿ ಚಟುವಟಿಕೆ ಕೈಗೊಳ್ಳ ಬೇಕಿದೆ. ಜಿಲ್ಲೆಯಲ್ಲಿ 1,200 ರಿಂದ 1,800 ಅಡಿ ವರೆಗೆ ಕೊಳವೆ ಬಾವಿ ಕೊರೆಸಿದರೂ, ನೀರು ಸಿಗದ ಪರಿಸ್ಥಿತಿ ಇದೆ. ಅಂತ ರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.

ಆ. 5,2020 ರಿಂದ ಜಾರಿಗೆ ಬರುವಂತೆ ಈ ಹಿಂದೆ ಪ್ರಾಧಿಕಾರ ನಿರ್ದೇಶನಾಲಯ ಹಾಗೂ ಸದಸ್ಯ ಕಾರ್ಯದರ್ಶಿಗಳ ಕಚೇರಿ ಯಿಂದ ಅಧಿಸೂಚನೆ ಹೊರಡಿಸಲಾಗಿದೆ. ಈ ಕಾನೂನಿನಂತೆ ಮುಂಬ ರುವ ದಿನಗಳಲ್ಲಿ ಕೊಳವೆ ಬಾವಿ ಕೊರೆಯಲು ಜಿಲ್ಲಾ ಮಟ್ಟದ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಪ್ರಸ್ತುತ ಬಳಕೆಯಲ್ಲಿರುವ ಬಳಕೆದಾರರು ತಮ್ಮ ಹೆಸರನ್ನು ಅಂತರ್ಜಲ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಅನು ಮತಿ ಪಡೆಯದಿದ್ದರೆ, ಯಾವುದೇ ಸರ್ಕಾರದ ಸೌಲಭ್ಯ ಪಡೆಯಲು ಅನರ್ಹರಾಗಿರುತ್ತಾರೆ.

ಸರ್ಕಾರದ ಗೊಂದಲದ ಆದೇಶಗಳು ರೈತರನ್ನು ಕತ್ತು ಹಿಸುಕುತ್ತಿವೆ. ಅಂತರ್ಜಲ ಅಭಿವೃದ್ಧಿಗೆ ಅಗತ್ಯವಾದ ಶಾಶ್ವತ ನೀರಾವರಿ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರಗಳು ವಿಫಲವಾಗಿವೆ. ಇಂತಹ ತಲೆಕೆಟ್ಟ ಆದೇಶಗಳು ರೈತರಿಗೆ ಮಾರಕವೇ ಹೊರತು ಒಳಿತಲ್ಲ. ಇಂತಹ ಕೆಲಸಕ್ಕೆ ಕೈ ಹಾಕಬಾರದು. ಸಣ್ಣ ನೀರಾವರಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಕೊಳವೆ ಬಾವಿ ಕೊರೆಸಲು ಅನುಮತಿಗೆ ಮಾನದಂಡ ತಿಳಿಸಿಲ್ಲ. ವೆಂಕಟನಾರಾಯಣಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ

ಪ್ರತಿ 2 ವರ್ಷಕ್ಕೊಮ್ಮೆ ಅಂತರ್ಜಲ ಮೌಲ್ಯೀಕರಣವನ್ನು ಇಲಾಖೆ ಮಾಡುತ್ತಿದೆ. ಇನ್ನು ಮುಂದೆ ಸರ್ಕಾರ ಘೋಷಣೆ ಮಾಡಿರುವ ಕಾನೂನಿನ ಪ್ರಕಾರ ಕೈಗಾರಿಕೆಗಳು, ಕೃಷಿ ಚಟುವಟಿಕೆಗೆ ರೈತರು, ಸಾರ್ವಜನಿಕರು ಕೊಳವೆ ಬಾವಿ ಕೊರೆಸಲು ಅನುಮತಿ ಕಡ್ಡಾಯವಾಗಿದೆ. ಪಲ್ಲವಿ, ಜಿಲ್ಲಾ ಅಂತರ್ಜಲ ನಿರ್ದೇಶನಾಲಯ ಹಿರಿಯ ಭೂ ವಿಜ್ಞಾನಿ

ಅಂತರ್ಜಲ ಪ್ರಾಧಿಕಾರದ ಗಮನಕ್ಕೆ ತಂದು ಇನ್ನು ಮುಂದೆ ಸಾರ್ವಜನಿಕರು ಕೊಳವೆ ಬಾವಿಗಳನ್ನು ಕೊರೆಸಲು ಮುಂದಾಗಬೇಕು. ಇಲ್ಲದಿದ್ದರೆ ಅಗತ್ಯ ಕ್ರಮವನ್ನು ಇಲಾಖೆ ಕೈಗೊಳ್ಳುತ್ತದೆ. ಪಿ.ಎನ್‌.ರವೀಂದ್ರ, ಜಿಲ್ಲಾಧಿಕಾರಿ

 

ಎಸ್‌.ಮಹೇಶ್‌

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

driving practice

ಆದಿವಾಸಿ ನಿರುದ್ಯೋಗಿಗಳಿಗೆ ವಾಹನ ಚಾಲನಾ ತರಬೇತಿ

ಕರೆ ಅಭಿವೃದ್ಧಿ

ಕೆರೆ ಅಭಿವೃದ್ಧಿಗೆ ಒಂದಾದ ಅಧಿಕಾರಿಗಳು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ನರ್ಸಿಂಗ್‌ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಸೋಂಕು

ಕುಟುಂಬಗಳ ನಡುವೆ ಮಾರಾಮಾರಿ

ಕುಟುಂಬಗಳ ನಡುವೆ ಮಾರಾಮಾರಿ

ನವಜಾತ ಶಿಶು ಪತ್ತೆ

ದೇಗುಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ..!

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: 7 ವರ್ಷ ಜೈಲು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.