ಜ.4ರಿಂದ ಘಾಟಿ ದನಗಳ ಜಾತ್ರೆ: ಸಿದ್ಧತೆ ಆರಂಭ


Team Udayavani, Dec 20, 2021, 11:40 AM IST

Untitled-1

ದೊಡ್ಡಬಳ್ಳಾಪುರ: ದಕ್ಷಿಣ ಭಾರತದಲ್ಲೇ ಪ್ರಸಿದ್ಧವಾದ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಭಾರೀ ದನಗಳ ಜಾತ್ರೆಗೆ ಈ ಬಾರಿಯೂ ಅನುಮತಿ ನೀಡಲಾಗಿದ್ದು, ಪ್ರಖ್ಯಾತ ಘಾಟಿ ದನಗಳ ಜಾತ್ರೆ ಜನವರಿ 4 ರಿಂದ ಜ.14 ರವರೆಗೆ 10 ದಿನಗಳ ಕಾಲ ನಡೆಸಲು ಸಿದ್ಧತೆ ನಡೆಸಲಾಗಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ನೇತೃತ್ವದಲ್ಲಿ ಜಾತ್ರಾ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಜ.4 ರಿಂದ ಘಾಟಿ ದನಗಳ ಜಾತ್ರೆ ಹಾಗೂ ಜ.8ರಂದು ಬ್ರಹ್ಮ ರಥೋತ್ಸವ ನಡೆಸಲು ತೀರ್ಮಾನಿಸಲಾಗಿದೆ. ಸಭೆಯಲ್ಲಿ ಕೋವಿಡ್‌ ನಿಯಮ ಪಾಲಿಸಿ ಕೋವಿಡ್‌ ಎರಡು ಡೋಸ್‌ ಲಸಿಕೆ ಪಡೆದವರಿಗೆಮಾತ್ರ ಅವಕಾಶ, ರಾಸುಗಳಿಗೆ ಕಾಲುಬಾಯಿ ರೋಗದ ಲಸಿಕೆ ಹಾಕಿಸಿರುವುದು ಖಾತ್ರಿ ಪಡಿಸಿಕೊಂಡು ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವುದು. ರಾಸುಗಳಿಗೆ ನೀರಿನ ಸರಬರಾಜು,ದೇವಾಲಯಕ್ಕೆ ಭೇಟಿ ನೀಡುವ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಕುರಿತು ಚರ್ಚೆ ನಡೆಸಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ ಇ.ರವಿಕುಮಾರ್‌, ಉಪವಿಭಾಗಾಧಿಕಾರಿ ಅರುಳ್‌ ಕುಮಾರ್‌, ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್, ಜಿಲ್ಲಾ ಮುಜರಾಯಿ ಸಹಾಯಕ ಆಯುಕ್ತ ಎನ್‌.ನಾರಾಯಣಸ್ವಾಮಿ, ಮುಜರಾಯಿ ತಹಶೀಲ್ದಾರ್‌ ಹೇಮಾವತಿ, ಘಾಟಿ ದೇವಾಲಯದ ಇಒ ಎನ್‌.ಕೃಷ್ಣಪ್ಪ ಇದ್ದರು.

ಸಿದ್ಧತೆಗಳು ಆರಂಭ: ಕಳೆದ ವರ್ಷ ಕೋವಿಡ್‌ನಿಂದಾಗಿ ದನಗಳ ಜಾತ್ರೆ ನಡೆಯುವುದೇ ಅನುಮಾನ ವಾಗಿತ್ತು. ರೈತರು ಜಾತ್ರೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದರು. ಕೊನೆ ಕ್ಷಣದಲ್ಲಿ ಅನುಮತಿ ಸಿಕ್ಕ ನಂತರ ಜಾತ್ರೆ ಜೋರಾಗಿಯೇ ನಡೆಯಿತು.

ಜ.4ರಿಂದ ಘಾಟಿ ದನಗಳ ಜಾತ್ರೆಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದರೂ, ದನಗಳ ಜಾತ್ರೆಗೆ ಮಾರಾಟಗಾರರಿಂದ ಸಿದ್ಧತೆಗಳುನಡೆಯುತ್ತಿವೆ. ರಾಸುಗಳ ಪ್ರದರ್ಶನಕ್ಕಾಗಿ ಆಕರ್ಷಕ ಪೆಂಡಾಲ್‌ಗಳ ನಿರ್ಮಾಣ ಕಾರ್ಯ ನಡೆಯುತ್ತಿವೆ. ಪ್ರತಿ ವರ್ಷವೂ ಅವಧಿಗೆ ಮುನ್ನವೇ ರಾಸುಗಳು ಆಗಮಿಸುವುದು ಇಲ್ಲಿನ ಪರಿಪಾಟವಾಗಿದ್ದು, ಪೆಂಡಾಲ್‌ಗ‌ಳ ಸಿದ್ಧತೆಗಳ ವೇಗ ನೋಡಿದರೆ ಈಬಾರಿಯೂ ನಿಗದಿತ ಅವಧಿಗಿಂತ ಮುನ್ನವೇ ದನಗಳ ಜಾತ್ರೆ ಆರಂಭವಾಗಲಿದೆ ಎನ್ನಲಾಗಿದೆ.

ಘಾಟಿ ಜಾತ್ರೆಗೆ ಬಳ್ಳಾರಿ, ದಾವಣಗೆರೆ, ಧಾರವಾಡ, ಗುಲ್ಬರ್ಗ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಿಂದ ಬೇಸಾಯಕ್ಕಾಗಿ ಎತ್ತುಗಳನ್ನು ಖರೀದಿಸಲು ನೂರಾರುಸಂಖ್ಯೆಯಲ್ಲಿ ರೈತರು ಬರುತ್ತಾರೆ. ಕಳೆದ ವರ್ಷದ ಜಾತ್ರೆಯಲ್ಲಿ ಒಂದು ಜೊತೆ ಎತ್ತುಗಳು 5ಲಕ್ಷದವರೆಗೂ ಮಾರಾಟವಾಗಿದ್ದವು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.