ಕುಣಿಯುತ್ತಾ ನಲಿಯುತ್ತಾ ಶಾಲೆಗೆ ಬಂದ ಚಿಣ್ಣರು

Team Udayavani, Oct 26, 2021, 1:17 PM IST

ಕುಣಿಯುತ್ತಾ ನಲಿಯುತ್ತಾ ಶಾಲೆಗೆ ಬಂದ ಚಿಣ್ಣರು

ನೆಲಮಂಗಲ: ಒಂದು ಮುಕ್ಕಾಲು ವರ್ಷಗಳನಂತರ ಶಾಲೆಯ ಅಂಗಳಕ್ಕೆ ಬಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗೆಳೆಯರ ಜತೆ ಹಾಡಿಕುಣಿದಿದ್ದಾರೆ. ತಾಲೂಕಿನಲ್ಲಿ ಶೇ.74ರಷ್ಟು ಮಕ್ಕಳು ಶಾಲೆಗೆ ಹಾಜರಾಗಿದ್ದಾರೆ.

ತಾಲೂಕಿನ ಸರಕಾರಿ 292 ಪ್ರಾಥಮಿಕ ಶಾಲೆಗಳು, 3 ಸರಕಾರಿ ಅನುದಾನಿತ, 42 ಅನುದಾನ ರಹಿತ ಶಾಲೆಗಳು ಸೇರಿದಂತೆ 337 ಶಾಲೆಗಳಲ್ಲಿ 16485 ವಿದ್ಯಾರ್ಥಿಗಳು ದಾಖಲಾತಿ ಹೊಂದಿದ್ದು ಮೊದಲ ದಿನ ಸೋಮವಾರ 12324 ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಿದ್ದಾರೆ. ಮೊದಲ ದಿನ ಮಕ್ಕಳಿಗೆ ಆಟದಜತೆ ಪಾಠ ಹೇಳಿದ್ದು ರಜಾ ದಿನದ ಸಮಯವನ್ನುಶಿಕ್ಷಕರು ಕೇಳುವಮೂಲ ಜಾಗೃತಿ ಯಿಂದ ಶಾಲೆಗೆ ಬರುವಂತೆ ಸಲಹೆ ನೀಡಿದ್ದಾರೆ.

ಅಧಿಕಾರಿಗಳ ಪರಿಶೀಲನೆ: ತಾಲೂಕಿನ 337ಪ್ರಾಥಮಿಕ ಶಾಲೆಗಳಲ್ಲಿ ಕೆಲವು ಪ್ರಮುಖ ಶಾಲೆಗಳಿಗೆಬಿಇಓ ರಮೇಶ್‌ಕೆ.ಸಿ ಭೇಟಿ  ನೀಡಿ ಪರಿಶೀಲನೆ ಮಾಡಿದರೆ, ಉಳಿದ ಶಾಲೆಗಳಿಗೆ ವಿವಿಧ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಕೊರೊನಾ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಲಾಗಿದ್ದು ಕೊಠಡಿಗಳಿಗೆ ಸ್ಯಾನಿ ಟೈಸ್‌ ಮಾಡಿದ್ದು ವಿದ್ಯಾರ್ಥಿಗಳು ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ.

ಮಕ್ಕಳಿಗೆ ಭವ್ಯ ಸ್ವಾಗತ: 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ಇಂದಿನ ಶಾಲೆಗೆ ಆಗಮಿಸಿದ ಕಾರಣ ಕೆಲವು ಕಡೆ ಶಾಲಾ ಶಿಕ್ಷಕರು ಮಕ್ಕಳಿಗೆ ಗುಲಾಬಿ ನೀಡಿ, ತಮಟೆ ಬಾರಿಮೂಲಕ ಶಾಲೆಗೆ ಸ್ವಾಗತ ಮಾಡಿಕೊಂಡಿದ್ದಾರೆ. ಕೆಲವು ಕಡೆಗಳಲ್ಲಿ ಶಾಲೆಯನ್ನು ಅಲಂಕಾರಮಾಡಿ ಸಹಿ ನೀಡಿ ಸ್ವಾಗತ ಮಾಡಿದ್ದು ಗೆಳೆಯರ ಜತೆ ಕುಣಿಯುತ್ತಾ ಮೊದಲ ದಿನಶಾಲೆಗೆ ವಿದ್ಯಾರ್ಥಿಗಳು ಬಂದಿದ್ದಾರೆ.

ಶಿಕ್ಷಕರ ಕೊರತೆ: ಕೊಠಡಿಗೆ ಕೇವಲ 20ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿರುವುದರಿಂದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಬಹಳಷ್ಟು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದುರಾಗಿದ್ದು ಕೆಲವು ಕಡೆ ಹುದ್ದೆಗಳು ಖಾಲಿ ಇದ್ದು ಭರ್ತಿ ಮಾಡಲು ಸೂಚಿಸಲಾಗಿದೆ ಎಂದು ಬಿಇಒ ತಿಳಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆಸಿ ರಮೇಶ್‌ ಮಾತನಾಡಿ, ತಾಲೂಕಿನಲ್ಲಿ ಶೇ74ರಷ್ಟು ವಿದ್ಯಾರ್ಥಿಗಳು ಮೊದಲ ದಿನ ಶಾಲೆಗೆ ಬಂದಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಲಿದ್ದಾರೆ, ಸರಕಾರದ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಶಾಲೆ ಆರಂಭಿಸಿದೆ ಎಂದರು.

ಕೊಠಡಿ ಕೊರತೆ:

ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಕೊಠಡಿಗೆ 20ವಿದ್ಯಾರ್ಥಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ, ತಾಲೂಕಿನಲ್ಲಿ ಮೊದಲ ದಿನ ಶೇ74ರಷ್ಟು ವಿದ್ಯಾರ್ಥಿಗಳು ಹಾಜರಾತಿ ಪಡೆದಿದ್ದು ಅನೇಕ ಶಾಲೆಗಳಲ್ಲಿ ಕೊಠಡಿಗಳ ಕೊರತೆ ಉಂಟಾಗಿದೆ, ಉಳಿದ ಶೇ26ರಷ್ಟು ಜನರು ಶಾಲೆಗೆ ಹಾಜರಾದರೆ ಬಹಳಷ್ಟು ಸಮಸ್ಯೆ ಎದುರಾಗಲಿದ್ದು  ಪಾಳಿಯ ವ್ಯವಸ್ಥೆ ಅಥವಾ ಕೊಠಡಿ ಹೆಚ್ಚುಮಾಡುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.