ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

Team Udayavani, Aug 11, 2021, 3:58 PM IST

ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ದೇವನಹಳ್ಳಿ: ವಿದ್ಯುತ್‌ ಖಾಸಗೀಕರಣ ಹಾಗೂ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಕೆ ವಿರೋಧಿಸಿ ಜಿಲ್ಲಾ ಮತ್ತು ತಾಲೂಕು ರೈತಸಂಘ
ವತಿಯಿಂದ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ರಾಜ್ಯ ರೈತ ಸಂಘದ ಉಪಾಧ್ಯಕ್ಷ ವೆಂಕಟನಾರಾಯಣಪ್ಪ ಮಾತನಾಡಿ,ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಹುಮುಖ್ಯವಾದ ವಿದ್ಯುತ್‌
ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ನಿರ್ಧಾರಕ್ಕೆ ಸರ್ಕಾರಗಳು ಮುಂದಾಗಿದ್ದು, ರೈತರ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಸಿ ದರ ನಿಗದಿಗೊಳಿಸಲು ತೀರ್ಮಾನಿಸಿದೆ. ಇದರಿಂದ ರೈತ ಸಮುದಾಯಕ್ಕೆ ತೊಂದರೆಯಾಗಲಿದ್ದು, ಈ ನಿರ್ಧಾರವನ್ನು ಖಂಡಿಸುತ್ತೇವೆ. ಇತ್ತೀಚೆಗೆ ಸರ್ಕಾರ ಕೃಷಿಗೆ ಸಂಬಂಧಪಟ್ಟಂತೆ ಮೂರು ಕಾಯ್ದೆ ಜಾರಿಗೆ ತಂದಿದ್ದು, ಈ ಕೃಷಿ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಿ ರೈತರು ಭೂಮಿ ಮಾರಿಕೊಂಡು ಒಕ್ಕಲೆಬ್ಬಿಸು‌ವ ಕುತಂತ್ರವಾಗಿದೆ ಎಂದು ಕಿಡಿಕಾರಿದರು.

ರೈತರನ್ನು ದಿವಾಳಿ ಮಾಡಲು ಮುಂದಾದ ಸರ್ಕಾರ: ಜಿಲ್ಲಾ ಹಸಿರು ಸೇನೆ ಅಧ್ಯಕ್ಷ ಕೆ.ಎಸ್‌.ಹರೀಶ್‌ ಮಾತನಾಡಿ, ಪಂಪ್‌ ಸೆಟ್‌ಗಳ ಮೇಲೆ
ಇಷ್ಟ ಬಂದ ರೀತಿ ಹಣವನ್ನು ಮೀಟರ್‌ಗಳ ಮೂಲಕ ಹಾಕಿ, ರೈತರನ್ನು ದಿವಾಳಿ ಮಾಡಲು ಸರ್ಕಾರ ಮುಂದಾಗಿದೆ. ವಿದ್ಯುತ್‌ ಖಾಸಗೀಕರಣ ಮಾಡಿದರೆ ಲಕ್ಷಾಂತರ ಬೆಸ್ಕಾಂ ನೌಕರರು ಉದ್ಯೋಗ ಕಳೆದುಕೊಳ್ಳಲಿದ್ದಾರೆ ಎಂದು ಹೇಳಿದರು.

ಜಿಲ್ಲಾ ರೈತ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್‌ ಮಾತನಾಡಿ,ಜಾಗತೀಕರಣಮತ್ತುಉದಾರೀಕರಣ ಹೆಸರಿನಲ್ಲಿ ಅಧಿಕಾರದ ಹಿಡಿದಂತಹಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ದೇಶದ ಆಹಾರ ಭದ್ರತೆಯನ್ನು ಕಾಪಾಡಿಕೊಂಡು ಬಂದಿರುವ ರೈತ ಪ್ರತಿನಿಧಿಸುವ ಕೃಷಿ ಕ್ಷೇತ್ರ ಮತ್ತು ಇದಕ್ಕೆ
ಸಂಬಂಧಪಟ್ಟ ಇಲಾಖೆಯನ್ನು ಖಾಸಗಿ ಕಂಪನಿ ಮತ್ತು ಬಂಡವಾಳ ಶಾಹಿಗಳಿಗೆ ಹಸ್ತಾಂತರ ಮಾಡುತ್ತಿರುವ ನಿರ್ಧಾರವನ್ನು ರದ್ದುಪಡಿಸಬೇಕು. ಕೃಷಿ ಪಂಪ್‌ ಸೆಟ್‌ಗಳಿಗೆ ಮೀಟರ್‌ ಅಳವಡಿಸಲು ಹೊರಟಿರುವುದು ಅಪಾಯಕಾರಿ ಸಂಗತಿ ಎಂದರು.

ಇದನ್ನೂ ಓದಿ:ಆನಂದ‌ ಸಿಂಗ್ ಭೇಟಿ ವಿಚಾರದಲ್ಲಿ ಮಾಹಿತಿ ಬಿಟ್ಟು ಕೊಡದ ಸ್ಪೀಕರ್

ಪ್ರತಿಭಟನಾಕಾರರು ಜಿಲ್ಲಾಧಿಕಾರಿಕೆ.ಶ್ರೀನಿವಾಸ್‌ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ನಿರ್ದೇಶಕ ಕೆಂಚೇಗೌಡ, ದೇವನಹಳ್ಳಿ ತಾಲೂಕು ರೈತ ಸಂಘದ ಅಧ್ಯಕ್ಷ ಗಾರೆ ರವಿಕುಮಾರ್‌, ಕಾರ್ಯಾಧ್ಯಕ್ಷ ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿದಲೂರು ರಮೇಶ್‌,
ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ವಕೀಲ ಸಿದ್ದಾರ್ಥ, ಮುನಿಶಾಮಪ್ಪ, ಪ್ರಜಾ ವಿಮೋಚನಾ ಚಳವಳಿ ಸ್ವಾಭಿಮಾನ ರಾಜ್ಯಾಧ್ಯಕ್ಷ ಮುನಿ ಆಂಜಿನಪ್ಪ ಹಾಗೂ ರೈತ ಸಂಘದ ಪದಾಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.