ನ.8ರಿಂದ ಹಾಲಿನ ಬೆಲೆ ಏರಿಕೆಗೆ ಆಗ್ರಹಿಸಿ ಧರಣಿ

Team Udayavani, Nov 1, 2022, 3:48 PM IST

ನ.8ರಿಂದ ಹಾಲಿನ ಬೆಲೆ ಏರಿಕೆಗೆ ಆಗ್ರಹಿಸಿ ಧರಣಿ

ದೊಡ್ಡಬಳ್ಳಾಪುರ: ಪಶು ಆಹಾರದ ಬೆಲೆ ದಿನೇ ದಿನೆ ಹೆಚ್ಚಾಗುತ್ತಿದ್ದರೂ ಹಾಲಿನ ದರ ಮಾತ್ರ ಅವೈಜ್ಞಾನಿಕವಾಗಿದೆ. ಈ ದಿಸೆಯಲ್ಲಿ ಹಾಲಿನ ಬೆಲೆ ಏರಿಕೆಗೆ ಆಗ್ರಹಿಸಿ ನ.8ರಂದು ರಾಜಾನುಕುಂಟೆಯ ಕೆಎಂಎಫ್‌ ಪಶು ಆಹಾರ ಘಟಕದ ಮುಂದೆ ಅನಿರ್ಧಿಷ್ಟಾವಧಿ ಧರಣಿ ಪ್ರಾರಂಭಿಸಲಾಗುತ್ತಿದೆ ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ಪಶು ಆಹಾರದ ಬೆಲೆಯನ್ನು ಏಕಾಏಕಿ ಒಂದು ಟನ್‌ಗೆ 3.5 ಸಾವಿರ ರೂ. ಏರಿಕೆ ಮಾಡಲಾಗಿದೆ. ಹಾಲಿನ ಬೆಲೆ ಮಾತ್ರ ಏರಿಕೆ ಮಾಡದೇ ರೈತರನ್ನು ಶೋಷಣೆ ಮಾಡಲಾಗುತ್ತಿದೆ. ಒಕ್ಕೂಟವು ಗ್ರಾಹಕರಿಗೆ ಮಾರಾಟ ಮಾಡುತ್ತಿರುವ ಹಾಲಿಗೂ, ರೈತರಿಂದ ಖರೀದಿಸುತ್ತಿರುವ ಹಾಲಿನ ಬೆಲೆ ನಡುವೆ 15 ರೂ. ವ್ಯತ್ಯಾಸವಿದೆ. ಕೆಎಂಎಫ್‌ ಅಧಿಕಾರಿಗಳು ರೈತರೊಂದಿಗೆ ಚರ್ಚಿಸಿ, ಹಾಲಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವವರೆಗೂ ಧರಣಿ ಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದರು.

ನಿರ್ವಹಣೆಗಾಗಿ ಕೋಟ್ಯಂತರ ರೂ. ವೆಚ್ಚ: ಹಾಲು ಒಕ್ಕೂಟವು ಆಡಳಿತ ನಿರ್ವಹಣೆಗಾಗಿಯೇ ಅನಗತ್ಯವಾಗಿ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ಆದರೆ, ರೈತರಿಗೆ ಮಾತ್ರ ನ್ಯಾಯಯುತವಾದ ದರ ನೀಡುತ್ತಿಲ್ಲ, ಗ್ರಾಹಕರಿಂದ ದುಬಾರಿ ಹಣ ವಸೂಲಿ ಮಾಡುತ್ತಿದೆ. ಗೋ ಶಾಲೆಗಳನ್ನು ಪ್ರಾರಂಭಿಸಿದರೆ ಸರ್ಕಾರ ಶೆ.50ರಷ್ಟು ಸಹಾಯಧನ ನೀಡುತ್ತಿದೆ. ಆದರೆ, ರೈತರು ಸರ್ಕಾರದಿಂದ ಯಾವುದೇ ಸಬ್ಸಿಡಿ ಪಡೆಯದೇ ಹೈನುಗಾರಿಕೆ ಮಾಡಿದರು ಹಾಲಿಗೆ ವೈಜ್ಞಾನಿಕ ಬೆಲೆ ನೀಡುತ್ತಿಲ್ಲ. ಗ್ರಾಮೀಣ ಜನರ ಆರ್ಥಿಕ ಜೀವನಾಡಿಯಾಗಿರುವ ಹೈನುಗಾರಿಕೆ ಯನ್ನು ಸಣ್ಣ ಹಿಡುವಳಿದಾರ ರೈತ ಕೈತಪ್ಪಿಸುವ ಹುನ್ನಾರ ಪ್ರಾರಂಭವಾಗಿದೆ ಎಂದು ಹೇಳಿದರು.

ಬಿಜೆಪಿ ರೈತರ ಪರವಾಗಿ ಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆದರು ಸಹ ರಾಜ್ಯದಲ್ಲಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಕ್ಕೆ ಬದಲಾಗಿ ಮತ್ತಷ್ಟು ವೇಗವಾಗಿ ಜಾರಿಗೊಳಿಸಲಾಗುತ್ತಿದೆ. ಭೂ ಸುಧಾರಣೆ ತಿದ್ದುಪಡಿಯಿಂದಾಗಿ ಕೃಷಿ ಭೂಮಿ ಬಂಡವಾಳ ಶಾಹಿಗಳ ಕೈ ಸೇರುತ್ತಿದೆ. ಹಾಲಿನ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ನ.8ರಂದು ನಡೆಯಲಿರುವ ಧರಣಿಯಲ್ಲಿ ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯ ಐದು ಜಿಲ್ಲೆಗಳ ಹಾಲು ಉತ್ಪಾದಕರು ಭಾಗವಹಿಸಲಿದ್ದಾರೆ. ಎಂದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆಂಚಪ್ಪಗೌಡ, ಕಾರ್ಯದರ್ಶಿ ಬೈರೇಗೌಡ, ಜಿಲ್ಲಾ ಕಾರ್ಯದರ್ಶಿ ಆರ್‌.ಪ್ರಸನ್ನ, ಮುಖಂಡರಾದ ಸತೀಶ್‌, ಶಿವರಾಜ್, ಮಹದೇವ್‌, ಸುರೇಶ್‌, ಮಾಳಪ್ಪ, ಬಸವರಾಜು, ಶ್ರೀನಿವಾಸ್‌ ಹಾಜರಿದ್ದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.