ಕುಡಿಯುವ ನೀರಿಗಾಗಿ ಪ್ರತಿಭಟನೆ

Team Udayavani, Jan 11, 2020, 4:11 PM IST

br-tdy-1

ದೇವನಹಳ್ಳಿ: ತಾಲೂಕಿನ ಬೀರಸಂದ್ರಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಿ, ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಗ್ರಾಮದ ನಿವಾಸಿಗಳು ಪ್ರತಿಭಟನೆ ನಡೆಸಿದರು. ಕಳೆದ ಎರಡು ವರ್ಷಗಳಿಂದ ಕಾಲೋನಿಯಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಎರಡು ಕೊಳವೆ ಬಾವಿಇದ್ದರೂ, ವಾಟರ್‌ ಮ್ಯಾನ್‌ ಸರಿಯಾದ ರೀತಿ ನಿರ್ವಹಣೆ ಮಾಡುತ್ತಿಲ್ಲ ಎಂದುಗ್ರಾಮಸ್ಥರು ಆರೋಪಿಸಿದರು.

ಗ್ರಾಮಸ್ಥ ನಾರಾಯಣಸ್ವಾಮಿ ಮಾತನಾಡಿ, ಬೀರಸಂದ್ರ ಗ್ರಾಮದಕಾಲೋನಿ ಮತ್ತು ಇನ್ನಿತರೆ ಕಡೆ 35 ಮನೆಗಳು ಇದ್ದೂ, ಎರಡು ವರ್ಷ ದಿಂದ ನೀರಿನ ಸಮಸ್ಯೆ ಕಾಡುತ್ತಿದೆ. ವಾಟರ್‌ ಮ್ಯಾನ್‌ಗೆ ಸರಿಯಾದ ರೀತಿಕೊಳವೆ ಬಾವಿ ನಿರ್ವಹಣೆ ಮಾಡಿ,ನೀರು ಬಿಡುವಂತೆ ಪಿಡಿಒ ಸೂಚಿಸಿದರೂ, ಪಿಡಿಒ ಸೂಚನೆಗೆ ಬೆಲೆ ಇಲ್ಲದಂತಾಗಿದೆ ಎಂದರು.

ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ಇಲ್ಲದಂತಾಗಿದೆ. ಚರಂಡಿಗಳಲ್ಲಿ ಕಸ ತುಂಬಿಕೊಂಡಿದ್ದರೂ, ಗ್ರಾಪಂ ಸ್ವತ್ಛ ಪಡಿಸುವ ಕಾರ್ಯ ಮಾಡುತ್ತಿಲ್ಲ. ಇದರಿಂದ ದಿನ ನಿತ್ಯ ದುರ್ವಾಸನೆ ಮತ್ತು ಸೊಳ್ಳೆಗಳ ಹಾವಳಿ ಹೆಚ್ಚಾಗಿದೆ. ಗ್ರಾಪಂ ಸದಸ್ಯರಿಗೆ ಸಮಸ್ಯೆ ಗಳ ಬಗ್ಗೆ ತಿಳಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗ್ರಾಮಸ್ಥೆ ಲಕ್ಷ್ಮೀ ಮಾತನಾಡಿ, ಒಂದು ಬಿಂದಿಗೆ ನೀರಿಗಾಗಿ ತೋಟಮತ್ತು ಇನ್ನಿತರೆ ಕಡೆಗಳಲ್ಲಿ ಬೇಡಾಡಿ ತರುವ ದುಸ್ಥಿತಿ ಇದೆ. ಗ್ರಾಪಂಗೆ ಎರಡೆರಡು ಬಾರಿ, ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಚರಂಡಿಯ ಪೈಪ್‌ ಗಳು ಬ್ಲಾಕ್‌ ಆಗಿದೆ. ನಮ್ಮ ಸಮಸ್ಯೆಗಳನ್ನು ಕೇಳುವವರಿಲ್ಲ. ವಾರಕ್ಕೆ ಒಂದು ಬಾರಿ 450 ರೂ.ಕೊಟ್ಟು ಟ್ಯಾಂಕರ್‌ ಮೂಲಕ ನೀರುಕೊಳ್ಳುತ್ತಿದ್ದೇವೆ. ಕಾಂಕ್ರೀಟ್‌ ರಸ್ತೆ ಹಾಳಾಗಿದ್ದು, ನೀರಿನ ಪೈಪ್‌ ಲೈನ್‌ಕಾಮಗಾರಿ ಮುಗಿಸಬೇಕು. ಮಕ್ಕಳು ಈ ರಸ್ತೆಯಲ್ಲಿ ಬಿದ್ದು ಮೊಣಕಾಲು, ಕೈ ಗಳಿಗೆ ಗಾಯಗಳಾಗುತ್ತಿವೆ ಎಂದು ತಮ್ಮ ಕಷ್ಟ ತೋಡಿಕೊಂಡರು. ಗ್ರಾಮಸ್ಥ ಮದ್ದೂರಪ್ಪ ಮಾತನಾಡಿ, ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಕೊಂಡು ಗ್ರಾಮದ ಸಮಸ್ಯೆಗಳನ್ನು ಶೀಘ್ರ ಬಗೆ ಹರಿಸಬೇಕು ಎಂದರು.ಪ್ರತಿಭಟನೆಯಲ್ಲಿ ಗ್ರಾಮದ ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

80‌ ಕೋಟಿ ರೂ. ಸಂಭಾವನೆ ಕೇಳಿ ಅಲ್ಲು ಜೊತೆ ಸಿನಿಮಾ ಮಾಡುವ ಅವಕಾಶ ಕಳೆದುಕೊಂಡ್ರಾ ಅಟ್ಲಿ?

PM-MODI-yoga

Yoga Day 2024: ದಾಲ್‌ ಸರೋವರ ಬಳಿ ಪ್ರಧಾನಿ ಮೋದಿ ಈ ಬಾರಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Heatwave: ದೆಹಲಿಯಲ್ಲಿ ಬಿಸಿಲ ಝಳಕ್ಕೆ ಐವರು ಮೃತ್ಯು; 12 ಮಂದಿ ಚಿಂತಾಜನಕ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Muddebihal ಕ್ರೂಸರ್‌ ಪಲ್ಟಿ: 15 ಮಂದಿಗೆ ಗಾಯ: ಮೂವರು ಗಂಭೀರ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

Raichur: ಬಸ್ ನಲ್ಲಿ ಮರೆತು ಹೋಗಿದ್ದ 2.50 ಲಕ್ಷ ಮರಳಿಸಿದ KSRTC ಚಾಲಕ, ನಿರ್ವಾಹಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಉದಾಸೀನವೇಕೆ?

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

Gujarat: ಮಾನವನ ಬೆರಳು,ಇಲಿ ಆಯ್ತು.. ಈಗ ಚಿಪ್ಸ್ ಪ್ಯಾಕೆಟ್‌ನಲ್ಲಿ ಸತ್ತ ಕಪ್ಪೆ ಪತ್ತೆ!

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಿ; ಶಾಸಕ ಎಚ್‌.ಡಿ.ತಮ್ಮಯ್ಯ

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

ಬಳ್ಳಾರಿಯಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ಸರಿಯಲ್ಲ-ಹೋರಾಟಕ್ಕೆ ಸಜ್ಜು: ಹಿರೇಮಠ

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Mumbai: ಐಸ್ ಕ್ರೀಮ್ ನಲ್ಲಿ ಪತ್ತೆಯಾದ ಬೆರಳು ಯಾರದ್ದು? ಪೊಲೀಸರು ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.