ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾಡಳಿತ ಸಿದ್ಧತೆ


Team Udayavani, Jan 10, 2022, 3:44 PM IST

ಪೋಲಿಯೋ ಲಸಿಕಾ ಅಭಿಯಾನಕ್ಕೆ ಜಿಲ್ಲಾಡಳಿತ ಸಿದ್ಧತೆ

ದೇವನಹಳ್ಳಿ : ರಾಷ್ಟ್ರೀಯ ಪಲ್ಸ್ ಪೋಲಿಯೋ- 2022ರ ಲಸಿಕಾ ಕಾರ್ಯಕ್ರಮವು 23 ರಿಂದ 26ರವರೆಗೆ ನಡೆಯಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಐದು ವರ್ಷದೊಳಗಿನ
ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದ ಯಶಸ್ಸಿಗೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್‌ ಸೂಚಿಸಿದರು.

ಲಸಿಕೆ ಗುರಿ: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2022ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.

ಲಸಿಕೆ ಬೂತ್‌ಗಳ ಸ್ಥಾಪನೆ: ಜ.23ರಂದು ಬೆಳಗ್ಗೆ 8 ರಿಂದ ಸಂಜೆ 5ರವರೆಗೆ ಬೂತ್‌ಗಳಲ್ಲಿ ಲಸಿಕಾ ನೀಡಲಾಗುವುದು. 24 ರಿಂದ 25 ರವರೆಗೆ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ, 24 ರಿಂದ
26ರವರೆಗೆ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ಪಲ್ಸ್ ಪೋಲಿಯೋ ಲಸಿಕೆ ನೀಡಲಾಗುವುದು. ಅಲ್ಲದೇ ರೈಲ್ವೆ, ವಿಮಾನ, ಬಸ್‌ ನಿಲ್ದಾಣಗಳಲ್ಲಿ ಟೋಲ್‌ ಪ್ಲಾಜಾಗಳಲ್ಲಿ, ಪೋಲಿಯೋ ಲಸಿಕಾ ಬೂತ್‌ಗಳು ಕಾರ್ಯ ನಿರ್ವಹಿಸಲಿವೆ ಎಂದರು.

ತಾಲೂಕುವಾರು ಲಸಿಕೆ ಗುರಿ: ದೇವನಹಳ್ಳಿ ತಾಲೂಕಿ ನಲ್ಲಿ 22424, ಹೊಸಕೋಟೆ ತಾಲೂಕಿನಲ್ಲಿ 29584, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 30995 ಮತ್ತು ನೆಲಮಂಗಲ ತಾಲೂಕಿನಲ್ಲಿ 23271 ಮಕ್ಕಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 106274 ಐದು ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಸಿಬ್ಬಂದಿ ನಿಯೋಜನೆ: ದೇವನಹಳ್ಳಿ ತಾಲೂಕಿನಲ್ಲಿ 107 ಬೂತ್‌ ಗಳಿಗೆ 428 ಸಿಬ್ಬಂದಿಗಳು 23 ಸೂಪರ್‌ ವೈಸರ್ಸ್‌, ಹೊಸಕೋಟೆ ತಾಲೂಕಿನಲ್ಲಿ 114 ಬೂತ್‌ ಗಳಿಗೆ 456 ಸಿಬ್ಬಂದಿಗಳು 22
ಸೂಪರ್‌ ವೈಸರ್ಸ್‌ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 153 ಬೂತ್‌ಗಳಿಗೆ 612 ಸಿಬ್ಬಂದಿ 30 ಸೂಪರ್‌ ವೈಸರ್ಸ್‌ ಹಾಗೂ ನೆಲಮಂಗಲ ತಾಲೂಕಿನಲ್ಲಿ 92 ಬೂತ್‌ಗಳಿಗೆ 368 ಸಿಬ್ಬಂದಿ 18
ಸೂಪರ್‌ ವೈಸರ್ಸ್‌ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 466 ಲಸಿಕಾ ಬೂತ್‌ಗಳಲ್ಲಿ 1864 ಸಿಬ್ಬಂದಿ 93 ಸೂಪವೈಸರ್‌ಗಳು ಹಾಗೂ 91 ಸಂಚಾರಿ ಬೂತ್‌ ಗಳಲ್ಲಿ 182 ಸಿಬ್ಬಂದಿಗಳು 9 ಸೂಪರ್‌ವೈಸರ್‌ ಗಳನ್ನು ನಿಯೋಜಿಸಲಾಗುವುದು ಎಂದರು.

ಲಸಿಕೆ ಅರಿವು: ನಗರ ಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿ, ಕೊಳಚೆ ಮತ್ತು ಇತರೆ ಎಚ್‌ಆರ್‌ಎ ಪ್ರದೇಶಗಳಲ್ಲಿ ಲಸಿಕೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು.

ವಿವಿಧ ಇಲಾಖೆ ಸಹಕಾ ಅಗತ್ಯ: ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಯಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಸ್ಕಾಂ, ಪ್ರಾದೇಶಿಕ ಸಾರಿಗೆ ಇಲಾಖೆಗಳ ಪಾತ್ರ ಮಹತ್ವವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸಬೇಕೆಂದು ನಿರ್ದೇಶಿಸಿದರು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್‌, ಜಿಲ್ಲಾ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕಿ ಸುಮ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಬಂಧಿಸಿದ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ತಹಶೀಲ್ದಾರ್‌ಗಳು ಇದ್ದರು.

ಟಾಪ್ ನ್ಯೂಸ್

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.