ಅಂಗಡಿ ಮುಂದೆ ರಸಗೊಬ್ಬರದ ಬೆಲೆಗಳ ಫ‌ಲಕ ಹಾಕಿ; ಜಯಸ್ವಾಮಿ

ತೊಗರಿ ಬಿತ್ತನೆ ಬೀಜ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ

Team Udayavani, May 27, 2022, 5:39 PM IST

ಅಂಗಡಿ ಮುಂದೆ ರಸಗೊಬ್ಬರದ ಬೆಲೆಗಳ ಫ‌ಲಕ ಹಾಕಿ; ಜಯಸ್ವಾಮಿ

ದೊಡ್ಡಬಳ್ಳಾಪುರ: ರಸಗೊಬ್ಬರ ಮಾರಾಟದ ಅಂಗಡಿ ಗಳ ಮುಂದೆ ರಸಗೊಬ್ಬರದ ಬೆಲೆ ಪ್ರದರ್ಶನ ಮಾಡುವಂತೆ ಮಾರಾಟಗಾರರಿಗೆ ಸೂಚಿಸಲಾಗಿದ್ದು, ಹೊಸಕೋಟೆ ತಾಲೂಕಿನಲ್ಲಿ ನಕಲಿ ಕ್ರಿಮಿನಾಶ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಮಾಡಿ 35 ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಸ್ವಾಮಿ ಹೇಳಿದರು.

ನಗರದ ಕೃಷಿ ಇಲಾಖೆ ಕಚೇರಿಯಲ್ಲಿ ರೈತರು ಹಾಗೂ ರಸಗೊಬ್ಬರ ಮಾರಾಟ ಮಳಿಗೆ ಮಾಲೀಕರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ರಾಗಿ, ಮುಸುಕಿನಜೋಳ ಸೇರಿದಂತೆ ಇತರೆ ಬಿತ್ತನೆ ಸಮಯದಲ್ಲಿ ರಸಗೊಬ್ಬರ ಬಳಕೆ ಕುರಿತಂತೆ ರೈತರಿಗೆ ಮಾಹಿತಿ ನೀಡಲು 80 ಸಾವಿರ ಕರಪತ್ರ ಮುದ್ರಿಸಿ ವಿತರಣೆ ಮಾಡಲಾಗುತ್ತಿದೆ. ರಾಗಿ ಸೇರಿದಂತೆ ಒಂದೇ ಬೆಳೆಯನ್ನೇ ಬೆಳೆಯುವುದಕ್ಕೆ ಬದಲಾಗಿ ಎಣ್ಣೆಕಾಳು ಬೆಳೆ ಬೆಳೆಯುವ ಕಡೆಗೂ ಆದ್ಯತೆ ನೀಡಬೇಕು ಎಂದರು.

16 ಪೋಷಕಾಂಶ ಅಗತ್ಯ: ಯಾವುದೇ ಒಂದು ಬೆಳೆಗೆ 16 ರೀತಿಯ ಪೋಷಕಾಂಶಗಳ ಅಗತ್ಯವಿದೆ. ಇದರಲ್ಲಿ ಒಂದಿಷ್ಟು ಪೋಷಕಾಂಶಗಳು ಸ್ವಾಭಾವಿಕವಾಗಿ ಗಾಳಿ, ನೀರಿನ ಮೂಲಕ ಪಡೆದುಕೊಳ್ಳುತ್ತವೆ. ಉಳಿದವನ್ನು ನಾವು ನೀಡಬೇಕಾಗುತ್ತದೆ. ಬಹುತೇಕ ರೈತರು ರಾಗಿ, ಜೋಳ ಬಿತ್ತನೆ ಸಂದರ್ಭದಲ್ಲಿ ಯಾವುದಾದರು ಒಂದೇ ರೀತಿಯ ರಸಗೊಬ್ಬರವನ್ನೇ ಅವಲಂಬಿಸುತ್ತಾರೆ. ಆದರೆ, ನಮ್ಮಲ್ಲಿ ಲಭ್ಯವಿರುವ ರಸಗೊಬ್ಬರ ಸಂಯೋಜನೆಗೊಳಿಸಿ ನೀಡುವುದರಿಂದಲು ಉತ್ತಮ ಇಳುವರಿ ಪಡೆಯಲು ಸಾಧ್ಯವಿದೆ ಎಂದರು.

ಬಿತ್ತನೆ ಬೀಜ ದಾಸ್ತಾನು: ಒಂದು ಎಕರೆ ಪ್ರದೇಶಕ್ಕೆ ಅಗತ್ಯವಿರುವ ರಸಗೊಬ್ಬರದ ಬಳಕೆ, ಯಾವ ಬೆಳೆಗೆ ಎಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬಳಕೆ ಮಾಡಬೇಕಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಕರಪತ್ರದಲ್ಲಿ ಮುದ್ರಿಸಲಾಗಿದೆ. ಜಿಲ್ಲೆಯ ರೈತರಿಗೆ ಅಗತ್ಯವಿರುವ ರಾಗಿ,ಮುಸುಕಿನಜೋಳ, ಅಲಸಂದೆ, ತೊಗರಿ ಬಿತ್ತನೆ ಬೀಜ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ ಎಂದರು.

ರೈತರು ಯಾವುದೇ ರೀತಿಯ ಗಾಳಿಸುದ್ದಿಗೆ ಕಿವಿಗೊಡದೆ ಕೃಷಿ ಇಲಾಖೆಯಿಂದ ಬಿತ್ತನೆ ಬೀಜಗಳನ್ನು ರೀಯಾಯಿತಿ ದರದಲ್ಲಿ ಖರೀದಿಸಬಹುದಾಗಿದೆ. ರೈತರು ಬಿತ್ತನೆ ಮಾಡುವುದಕ್ಕೂ ಮುನ್ನ ಒಂದಿಷ್ಟು ಬೀಜ, ಖರೀದಿಯ ರಶೀದಿ, ಬಿತ್ತನೆ ಬೀಜದ ಬ್ಯಾಗನ್ನು ಬೆಳೆ ಕಟಾವಿಗೆ ಬರುವವರೆಗೂ ಇಟ್ಟು ಕೊಳ್ಳಬೇಕು. ಬಿತ್ತನೆ ಬೀಜ ಕಳಪೆಯಾದರೆ ಬೀಜದ ಕಂಪನಿ ವಿರುದ್ಧ ದೂರು ದಾಖಲಿಸಲು ಸುಲಭವಾಗಲಿದೆ ಎಂದರು.

ಗೊಬ್ಬರ ಕೊರತೆ ಆಗದಂತೆ ಕ್ರಮ ಕೈಗೊಳ್ಳಿ: ರೈತ
ಸಂಘದ ಜಿಲ್ಲಾ ಅಧ್ಯಕ್ಷ ಪ್ರಸನ್ನ, ತಾಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡ ಹನುಮಂತರಾಯಪ್ಪ, ವಸಂತಕುಮಾರ್‌, ಮುತ್ತೇಗೌಡ, ಸತೀಶ್‌ ಮಾತನಾಡಿ, ಬಿತ್ತನೆ ಸಂದರ್ಭದಲ್ಲಿ ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟ ಮಾಡದಂತೆ, ಗೊಬ್ಬರ ಕೊರತೆಯಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕಿ ಸುಶೀಲಮ್ಮ, ತಾಂತ್ರಿಕ ವಿಭಾಗದ ರೂಪಾ, ಕಸಬಾ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಗೀತಾ ಇದ್ದರು.

ಟಾಪ್ ನ್ಯೂಸ್

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.