ಶೀಘ್ರ ಡೀಸಿ ಕಚೇರಿ ಕಾಮಗಾರಿ ಮುಗಿಯಲಿ


Team Udayavani, Oct 16, 2018, 3:09 PM IST

blore-6.jpg

ದೇವನಹಳ್ಳಿ: ತಾಲೂಕಿನ ಚಪ್ಪರದ ಕಲ್ಲು ಬಳಿ ನಿರ್ಮಾಣವಾಗಿರುವ ಜಿಲ್ಲಾಡಳಿತ ಸಂಕೀರ್ಣಕ್ಕೆ ಶೀಘ್ರ ಎಲ್ಲಾ ಇಲಾಖಾ ಕಚೇರಿಗಳು ಸ್ಥಳಾಂತರವಾಗಿ ಕಾರ್ಯಾರಂಭವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ತಾಲೂಕಿನ ಚಪ್ಪರದ ಕಲ್ಲು ಬಳಿ ನಿರ್ಮಾಣ ವಾಗಿರುವ ಜಿಲ್ಲಾಡಳಿತ ಸಂಕೀರ್ಣಕ್ಕೆ ಭೇಟಿ ನೀಡಿ ಅಲ್ಲಿನ ಕಾಮಗಾರಿ ಮತ್ತು ಕಟ್ಟಡ ಪರಿಶೀಲಿಸಿ ಮಾತನಾಡಿದರು.

ವರದಿ ಸಿದ್ಧಗೊಳಿಸಿ:ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲ ಇಲಾಖೆಗಳು ಚಪ್ಪರದ ಕಲ್ಲು ಬಳಿ ನಿರ್ಮಾಣ ವಾಗಿರುವ ಜಿಲ್ಲಾಡಳಿತ ಸಂಕೀರ್ಣಕ್ಕೆ ಸ್ಥಳಾಂತರಗೊ ಳ್ಳುತ್ತಿದೆ. ಉಳಿದಿರುವ ಎಲ್ಲಾ ಕೆಲಸಗಳು ತ್ವರಿತವಾಗಿ ಆಗಬೇಕು. ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ಬಿಡುಗಡೆಯಾಗಲಿದ್ದು ಅದಕ್ಕೆ ಎಲ್ಲಾ ರೀತಿಯ ಯೋಜನಾ ವರದಿ ಸಿದ್ಧಗೊಳಿಸಬೇಕು ಎಂದು ಹೇಳಿದರು.

ಒಂದೇ ಸೂರಿನಡಿ ಕಚೇರಿಗಳು : ಜಿಲ್ಲಾ ಪಂಚಾಯ್ತಿ, ಜಿಲ್ಲಾಧಿಕಾರಿ ಕಚೇರಿ, ಖಜಾನೆ, ಚುನಾವಣಾ ಕಚೇರಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಸಂಸದರ ಕಚೇರಿ, ಜಿಲ್ಲಾಧಿಕಾರಿಗಳ ನ್ಯಾಯಾಲಯ ಹಾಗೂ ವಿವಿಧ ನ್ಯಾಯಾಲಯಗಳು ಹಾಗೂ ವಿವಿಧ ಇಲಾಖೆಗಳು ಒಂದೇ ಸೂರಿನಡಿ ಕಾರ್ಯ ನಿರ್ವಹಿಸಲಿವೆ ಎಂದು ಹೇಳಿದರು.

ಆಯುಧ ಪೂಜೆ ಮಾಡಿ: ಪ್ರತಿ ಜನರಿಗೂ 4 ತಾಲೂಕುಗಳಿಂದ ಬರುವ ಜನರಿಗೆ ಬಸ್‌ಗಳ ಸೌಲಭ್ಯ, ರಸ್ತೆಗಳ ಅಭಿವೃದ್ಧಿ ಹೀಗೆ ಎಲ್ಲಾ ರೀತಿಯ ಸೌಲಭ್ಯ ನೀಡಬೇಕು. ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಈ ಭಾಗದ ಜನರಿಗೆ ತಪ್ಪುವಂತಾ ಗಿದೆ. ಬಹಳ ವರ್ಷಗಳಿಂದ ಬೆಂಗಳೂರಿನಲ್ಲಿಯೇ ಜಿಲ್ಲಾ ಕಚೇರಿಗಳು ಕಾರ್ಯಾರಂಭ ಮಾಡುತ್ತಿದ್ದವು. 

ರಾಮನಗರ ಜಿಲ್ಲೆ ಆದಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಒಳಗೊಂಡ 4 ತಾಲೂಕುಗಳು ಇದ್ದವು. ಆಯುಧ ಪೂಜೆಯನ್ನು ಇಲ್ಲಿಯೇ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಜಿಲ್ಲಾಧಿಕಾರಿ ಕರೀಗೌಡ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆರ್‌.ಲತಾ, ಜಿಪಂ ಉಪಾಧ್ಯಕ್ಷೆ ಅನಂತಕುಮಾರಿ, ಜಿಪಂ ಸದಸ್ಯ ಕೆ.ಸಿ.ಮಂಜುನಾಥ್‌, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಾಮನಾಥಪುರ ಸಿ.ಪ್ರಸನ್ನ ಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಎಸ್‌ಸಿ ವಿಭಾಗದ ಮಾಜಿ ಅಧ್ಯಕ್ಷ ಎ.ಚಿನ್ನಪ್ಪ ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.