ಮಳೆ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ಥ

20ಕ್ಕೂ ಹೆಚ್ಚು ಮನೆಗೆ ನುಗ್ಗಿದ ಮಳೆ ನೀರು „ ಅಡಕೆ, ಬಾಳೆ, ರಾಗಿ, ಜೋಳದ ಬೆಳೆ ಹಾನಿ

Team Udayavani, Oct 13, 2021, 3:49 PM IST

ಅಡಕೆ ಜೋಳದ ಬೆಳೆ ಹಾನಿ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸತತವಾಗಿ ಬೀಳುತ್ತಿ  ನಾಗರಿಕರು ನಗರಸಭೆ ಸದಸ್ಯ ನಾಗರಾಜ್‌ ನೇತೃತ್ವದಲ್ಲಿ ಕೆರೆಗೆ ಬಾಗಿನ ಅರ್ಪಿಸಿದರು. ರುವ ಮಳೆಯಿಂದ ಹಲವು ಕೆರೆಗಳಿಗೆ ನೀರು ಹರಿದು ಸಂತಸಕ್ಕೆ ಕಾರಣವಾಗಿದ್ದರೆ, ಮತ್ತೆ ಕೆಲವೆಡೆ ಅವಾಂತರ ಸೃಷ್ಟಿಸಿ ಸಾರ್ವಜನಿಕರ ಆಸ್ತಿಪಾಸ್ತಿ ನಷ್ಟ ಉಂಟಾಗಿದೆ.

ನಗರದ ಹೊರವಲಯದ ಕರೇನಹಳ್ಳಿಯ ಪ್ರೇಮನಾಥ್‌ ಎಂಬುವರ ಮನೆ ಕುಸಿದು ಬಿದ್ದಿದೆ. ಅದೃಷ್ಟವಷಾತ್‌ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತವಾಗಿಲ್ಲ. ಈಗ ಕುಸಿದು ಬಿದ್ದಿರುವ ಮನೆಯಲ್ಲಿ ಪ್ರೇಮನಾಥ್‌ ಮಗ್ಗಗಳನ್ನು ಹಾಕಿದ್ದರು. ಇತ್ತೀಚೆಗಷ್ಟೇ ಮಗ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಮನೆ ಖಾಲಿ ಇತ್ತು. ಸೋಮವಾರ ರಾತ್ರಿ ಸುರಿದ ಮಳೆಗೆ ಮನೆ ಕುಸಿದು ಬಿದ್ದಿದ್ದು, ಲಕ್ಷಾಂತರ ರೂ. ಹಾನಿಯಾಗಿದೆ. ತಾಲೂಕಿನ ಕುರುಬರಹಳ್ಳಿಯಲ್ಲಿಯೂ ಒಂದು ಹಳೆಯ ಮನೆ ಕುಸಿದಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ.

ಬೆಳೆ ಹಾನಿ: ತಾಲೂಕಿನ ಕೊಡಿಗೆಹಳ್ಳಿ, ಮೆಣಸಿ ಕ್ರಾಸ್‌, ಹುಸ್ಕೂರು ಮೊದಲಾದ ಗ್ರಾಮಗಳ ತೋಟಗಳಿಗೆ ಮಳೆ ನೀರು ನುಗ್ಗಿ ಬೆಳೆ ಹಾನಿಯಾಗಿವೆ. ಹುಸ್ಕೂರು ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿವೆ. ತಾಲೂಕಿನ ಕೊಡಿಗೆಹಳ್ಳಿಯಲ್ಲಿ ಮಳೆ ನೀರು ನುಗ್ಗಿ, ಅಡಕೆ, ಬಾಳೆ, ರಾಗಿ ಹಾಗೂ ಜೋಳ ಬೆಳೆ ಹಾನಿಯಾಗಿವೆ. ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆ ತೆರವಾಗಬೇಕು. ಜಮೀನಿಗೆ ಮಳೆ ನೀರು ಹರಿಯಲು ಕಾರಣವಾಗಿರುವ ಹಳ್ಳಗಳನ್ನು ತೆರವು ಮಾಡಲು ಕ್ರಮ ವಹಿಸಬೇಕು ಎಂದು ಗ್ರಾಮದ ಅಶ್ವತ್ಥಪ್ಪ ಒತ್ತಾಯಿಸಿದ್ದಾರೆ.

ಸಂಪರ್ಕ ಸೇತುವೆ ಕಡಿತ: ಸತತ 5 ವರ್ಷಗಳಿಂದ ಸಂಪರ್ಕ ಸೇತುವೆ ಕಡಿತಗೊಂಡು ತಾತ್ಕಾಲಿಕ ಸೇತುವೆಯನ್ನೆ ಆಶ್ರಯಿಸಿರುವ ತಾಲೂಕಿನ ಕೊಟ್ಟಿಗೇಮಾಚೇನಹಳ್ಳಿ ಗ್ರಾಮಸ್ಥರಿಗೆ ಮಳೆ ಮತ್ತೆ ಸಂಕಷ್ಟ ತಂದೊಡ್ಡಿದೆ. ಸೋಮವಾರ ಸುರಿದ ಮಳೆಯಿಂದ ತಾತ್ಕಾಲಿಕ ಸೇತುವೆ ಒಂದು ಭಾಗ ಕುಸಿದಿದ್ದು, ಮತ್ತೆ ಗ್ರಾಮಕ್ಕೆ ಸಂಪರ್ಕ ಕಡಿತಗೊಳ್ಳುವ ಆತಂಕ ಎದುರಾಗಿ¨

ಆರು ಮೇಕೆ ಸಾವು-

ತಾಲೂಕಿನ ಕೂಗೋನಹಳ್ಳಿ ಕಾಲೋನಿಯಲ್ಲಿ ಗೋಡೆ ಕುಸಿದ ಪರಿಣಾಮ 6 ಮೇಕೆ ಸಾವನ್ನಪ್ಪಿವೆ. ಸೋಮವಾರ ರಾತ್ರಿ ಸುರಿದ ಮಳೆಗೆ ಕೂಗೋನಹಳ್ಳಿ ಕಾಲೋನಿಯಲ್ಲಿ ಚೆನ್ನಪ್ಪ ಎನ್ನುವರ ಕೊಟ್ಟಿಗೆಯ ಮೇಲೆ ಗೋಡೆ ಕುಸಿದ ಪರಿಣಾಮ ಕೊಟ್ಟಿಗೆಯಲ್ಲಿದ್ದ 6 ಮೇಕೆ ಸಾವನಪ್ಪಿವೆ. ಇದರಿಂದ ರೈತ ಚೆನ್ನಪ್ಪರಿಗೆ ಸಾವಿರಾರು ರೂ. ನಷ್ಟವಾಗಿದೆ.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.