Udayavni Special

ಮಳೆ ನೀರು ಕೊಯ್ಲು ಕಡ್ಡಾಯ


Team Udayavani, Apr 2, 2021, 11:51 AM IST

ಮಳೆ ನೀರು ಕೊಯ್ಲು ಕಡ್ಡಾಯ

ದೇವನಹಳ್ಳಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಟ್ಟಡ ಹಾಗೂ ಕೈಗಾರಿಕೆಗಳು ಮಳೆ ನೀರು ಕೊಯ್ಲು ಪದ್ಧತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಂಡು ಮಳೆ ನೀರನ್ನು ಸಂಗ್ರಹಿಸುವ ಮೂಲಕ ಅಂತರ್ಜಲ ಮರುಪೂರಣ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ತಿಳಿಸಿದರು.

ತಾಲೂಕಿನ ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಜಲಶಕ್ತಿ ಅಭಿಯಾನ ಆಂದೋಲನ ಕ್ರಿಯಾಯೋಜನೆ ಅನುಷ್ಠಾನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರಿಯಾ ಯೋಜನೆ ಸಲ್ಲಿಸಿ: ಪ್ರಧಾನಿ ನರೇಂದ್ರ ಮೋದಿ ಅವರ ಕಾಳಜಿ ಮೇರೆಗೆ “ಕ್ಯಾಚ್‌ ದ ರೈನ್‌’ ಅಭಿಯಾನದಡಿ ಮಳೆನೀರು ಸಂಗ್ರಹಕ್ಕೆ ಮುಂದಾಗಿದ್ದು, ಏ.6ರೊಳಗೆ ಎಲ್ಲಾ ಇಲಾಖೆ ಗಳು ತಮ್ಮವ್ಯಾಪ್ತಿಯಲ್ಲಿನ ಜಲಶಕ್ತಿ ಅಭಿಯಾನ ಆಂದೋಲನ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ನಗರ ಪ್ರದೇಶಗಳಲ್ಲಿ ಈಗಾಗಲೇ ಬ್ಲಾಕ್‌ವಾರು ಕೋವಿಡ್‌ ಲಸಿಕೆ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿಯೂ ಈ ಕಾರ್ಯ ಆಗಬೇಕು ಎಂದರು. ಅಲ್ಲದೇ, ಕಳೆದ 3 ವರ್ಷಗಳಿಂದಜಿಲ್ಲೆಯಲ್ಲಿ ಕೊರೆದಿರುವ ಕೊಳವೆ ಬಾವಿ ಗಳ ಮಾಹಿತಿ ನೀಡುವಂತೆ ಸೂಚಿಸಿದರು.ಹಾಗೆಯೇ ಅಗತ್ಯವಿರುವ ಗ್ರಾಮಗಳಿಗೆ ತುರ್ತಾಗಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವಂತೆಗ್ರಾಮೀಣಾಭಿವೃದ್ಧಿ ಮತ್ತು ಕುಡಿವ ನೀರುಸರಬರಾಜು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಸಿಇಒ ಎಂ.ಆರ್‌.ರವಿಕುಮಾರ್‌ ಮಾತನಾಡಿ, ಒತ್ತುವರಿ ತೆರವುಗೊಳಿಸಿಕೆರೆಗಳ ಸುತ್ತಲೂ ಮರ ಬೆಳೆಸಬೇಕು, ಅರಣ್ಯ ಪ್ರದೇಶದಲ್ಲಿ ಜಲಾನಯನಯೋಜನೆಯಡಿ ನಿರ್ಮಿಸಿರುವ ಚೆಕ್‌ ಡ್ಯಾಂಗಳನ್ನು ಮಳೆಗಾಲ ಆರಂಭಕ್ಕೂಮುನ್ನ ಸುಸ್ಥಿಯಲ್ಲಿಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ.ಜಗದೀಶಕೆ.ನಾಯಕ್‌, ಜಿಪಂ ಉಪ ಕಾರ್ಯದರ್ಶಿಕೆ.ಕರಿಯಪ್ಪ, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಜಿಲ್ಲಾಧಿಕಾರಿ ಸೂಚನೆ ಏನೇನು? :

„ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಪಂಗಳು ಕೊಳವೆ ಬಾವಿಗಳ ಮರುಪೂರಣಕ್ಕೆ ಒತ್ತು ನೀಡಬೇಕು.

„ ಕೆರೆ, ಕುಂಟೆ ಹಾಗೂ ಕಲ್ಯಾಣಿಗಳಲ್ಲಿ ಹೂಳು ತೆಗೆಯಿರಿ.

„ ನೀರಿನ ಸಂಗ್ರಹದ ಮೂಲ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳಬೇಕು.

„ ನೀರಿನ ನಾಲೆ ಗುರುತಿಸಿ ಸರಾಗವಾಗಿ ಹರಿಯುವಂತೆ ಮಾಡಬೇಕು.

ಜಿಲ್ಲೆಯ 1075 ಕಂದಾಯ ಗ್ರಾಮಗಳಲ್ಲಿನ ಕೊಳವೆಬಾವಿಗಳ ಬಳಿ ಇಂಗು ಗುಂಡಿನಿರ್ಮಿಸಬೇಕು. ಪ್ರವಾಸೋದ್ಯಮ, ಮುಜರಾಯಿ ಇಲಾಖೆಹಾಗೂ ಪ್ರಾಚ್ಯವಸ್ತು ಸಂಗ್ರಹಾಲಯದಡಿ ಬರುವ ಕಲ್ಯಾಣಿಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛಗೊಳಿಸಲು ಮುಂದಾಗಬೇಕು. – ಎಂ.ಆರ್‌.ರವಿಕುಮಾರ್‌, ಜಿಪಂ ಸಿಇಒ

ಟಾಪ್ ನ್ಯೂಸ್

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಸದವದ್

ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಖಾಸಗೀಕರಣದ ಹೆಸರಿನಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ಲಕ್ಷ್ಯ : ಐವನ್‌ ಡಿ’ಸೋಜಾ ಆರೋಪ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ: ಅನುಮೋದನೆಯೊಂದೇ ಬಾಕಿ

ಉಡುಪಿ-ಮಣಿಪಾಲವನ್ನು ದೇಶಕ್ಕೆ ಮಾದರಿ ನಗರವನ್ನಾಗಿಸಲು ಯತ್ನ : ಅನುಮೋದನೆಯೊಂದೇ ಬಾಕಿ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರನ್ನು ಸರ್ವನಾಶ ಮಾಡಲು ಹುನ್ನಾರ ನಡೆಸಿದೆ :ಬೈರೇಗೌಡ

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಖಾಲಿ ಸಿಲಿಂಡರಿಗೆ ಅಡುಗೆ ಅನಿಲ ತುಂಬಿಸಿ ಮಾರಾಟ : ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆ

ಹರಿದ್ವಾರ ಕುಂಭಮೇಳ; ಕಳೆದ ಐದು ದಿನಗಳಲ್ಲಿ 1,701 ಕೋವಿಡ್ ಪ್ರಕರಣ ಪತ್ತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The curious sun circle

ಕುತೂಹಲ ಮೂಡಿಸಿದ ಸೂರ್ಯ ವೃತ್ತ

Rs. 5000 Fine for  D-Mart store

ಡಿ ಮಾರ್ಟ್‌ ಮಳಿಗೆಗೆ 5 ಸಾವಿರ ರೂ. ದಂಡ

bbmp

ಬಿಎಂಟಿಸಿ ನಿರ್ವಾಹಕಿ, 5 ಮಹಿಳೆಯರು ಸೆರೆ

Ambedkar’s Thought and Philosophy

ಅಂಬೇಡ್ಕರ್‌ರ ಚಿಂತನೆ, ತತ್ವ ಸಿದ್ಧಾಂತ ಪಾಲಿಸಿ

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

ಸಾರಿಗೆ ನೌಕರರ ಪ್ರತಿಭಟನೆಗೆ ಇತರೆ ಸಂಘಟನೆಗಳ ಬೆಂಬಲ

MUST WATCH

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

udayavani youtube

ಹೊಟ್ಟೆ ತುಂಬಾ ಊಟ ಮಾಡಿದ ಕೂಡಲೇ ಮಲಗಬಾರದು ಏಕೆ?

ಹೊಸ ಸೇರ್ಪಡೆ

15-2

ಡಾ|ಅಂಬೇಡ್ಕರ್‌ ಜೀವನ ಮೌಲ್ಯಗಳು ಸ್ಫೂರ್ತಿದಾಯಕ

gjjsddgdf

ಮರಾಠಿಗರು ಪಾಕ್‌ನವರಲ್ಲ,ಲಷ್ಕರಿಗಳಲ್ಲ : ಸಂಜಯ ರಾವುತ್‌

ಕಹಜಕಲಹಗಹ

ಡಾ| ಅಂಬೇಡ್ಕರ್ ಆದರ್ಶ ಪಾಲಿಸಿ : ಈಶ್ವರಪ್ಪ

sfe

ಕಾಂಗ್ರೆಸ್‌ ಅಭ್ಯರ್ಥಿ ಸತೀಶ ಗೆಲುವು ಖಚಿತ : ಶಾಸಕಿ ಲಕ್ಷ್ಮಿ ಹೆಬ್ಬಾಳಕರ

15-1

ಕಾನ್ಸರ್ ಕಿಲ್ಲರ್ ‘ನೆಲ್ಲಿಕಾಯಿ’ : ಆರೋಗ್ಯ ಉಪಯೋಗಗಳೇನು ಗೊತ್ತಾ..?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.