ವಸತಿಹೀನರಿಗೆ ಸೌಕರ್ಯ ಕಲ್ಪಿಸಲು ಆಗ್ರಹ

Team Udayavani, Aug 3, 2019, 3:00 AM IST

vasdati

ದೊಡ್ಡಬಳ್ಳಾಪುರ: ವಸತಿಹೀನರಿಗೆ ವಸತಿ ಸೌಕರ್ಯ, ಪೊಲೀಸರ ಕಿರುಕುಳ ತಪ್ಪಿಸಲು ನ್ಯಾಯಾಲಯಗಳ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಬಡ ಪರಿಶಿಷ್ಟರಿಗೆ ಸಾಗುವಳಿ ಜಮೀನು ಬಿಡಿಸಿಕೊಡಬೇಕು ಎಂದು ಒತ್ತಾಯಿಸಿ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರಜಾ ವಿಮೋಚನಾ ಚಳವಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಮುನಿಆಂಜನಪ್ಪ ಮಾತನಾಡಿ, ತಾಲೂಕು ಆಡಳಿತದಿಂದ ಶೋಷಿತ ವರ್ಗಗಳಿಗೆ ನ್ಯಾಯ ದೊರಕುತ್ತಿಲ್ಲ. ಕಂದಾಯ ಇಲಾಖೆ ಅಧಿಕಾರಿಗಳು ರಾಜಕಾರಣಿಗಳ ಒತ್ತಡಕ್ಕೆ ಮಣಿದು, ದುರ್ಬಲರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ನೀಡುತ್ತಿಲ್ಲ. ಇದರಿಂದಾಗಿ ದಲಿತರು, ಬಡವರಿಗೆ ಸೌಲಭ್ಯಗಳು ಸಿಗದಂತಾಗಿದೆ. ಅಧಿಕಾರಿಗಳಿಗೆ ಹಣ ನೀಡಲಾಗದ ಆರ್ಥಿಕ ಕಾರಣ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ನ್ಯಾಯಾಲಯದ ಆದೇಶದ ಅನುಸಾರ ಸಮರ್ಪಕವಾಗಿ ವಸತಿ ಹೀನರಿಗೆ ವಸತಿ ನೀಡಬೇಕು. ಇಲ್ಲವಾದಲ್ಲಿ ಉಗ್ರಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪ್ರಜಾ ವಿಮೋಚನಾ ಚಳವಳಿ ತಾಲೂಕು ಅಧ್ಯಕ್ಷ ಮದ್ದೂರಪ್ಪ ಮಾತನಾಡಿ, ನ್ಯಾಯಾಲಯದ ಆದೇಶದಂತೆ ಖಾತಾ ದಾಖಲಿಸುವುದು. ಬಡ ಪರಿಶಿಷ್ಟ ರೈತರಿಗೆ ಬಲಾಡ್ಯರಿಂದ ಸಾಗುವಳಿ ಜಮೀನು ಬಿಡಿಸಿಕೊಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಇದುರುವರೆಗೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಹನುಮಣ್ಣ ಗೂಳ್ಯ ಮಾತನಾಡಿ, ಸಾಸಲು ಹೋಬಳಿಯ ಕನಕೇನಹಳ್ಳಿ ಗ್ರಾಮದಲ್ಲಿರುವ ಎಲ್ಲಾ ಜಾತಿಯ ಬಡವರು ಸರ್ವೇ ನಂ.58ರಲ್ಲಿನ 3 ಎಕರೆ 20 ಗುಂಟೆ ಜಮೀನಿನಲ್ಲಿ ವಸತಿಗಾಗಿ ಗುಡಿಸಲುಗಳನ್ನು ಕಟ್ಟಿಕೊಂಡಿದ್ದರೂ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾಡಳಿತ ವಸತಿ ಹೀನ ಬಡವರಿಗೆ ಪೊಲೀಸ್‌ ಇಲಾಖೆ ನೀಡುತ್ತಿರುವ ಕಿರುಕುಳ ತಪ್ಪಿಸಿ, ಶೋಷಿತರನ್ನು ಒಕ್ಕಲೆಬ್ಬಿಸದಂತೆ ತಡೆಯೊಡ್ಡಬೇಕು ಎಂದು ಒತ್ತಾಯಿಸಿದರು.

ಕನಕೇನಹಳ್ಳಿ ಗ್ರಾಮದಲ್ಲಿರುವ ಎಲ್ಲಾ ಜಾತಿಯ ಬಡವರು ಸರ್ವೇ ನಂ.58ರಲ್ಲಿನ 3 ಎಕರೆ 20ಗುಂಟೆ ಜಮೀನಿನಲ್ಲಿ ವಸತಿಗಾಗಿ ಗುಡಿಸಲುಗಳನ್ನು ಕಟ್ಟಿಕೊಳ್ಳಲಾಗಿದೆ. ತಂಬೇನಹಳ್ಳಿ ಗ್ರಾಮದ ಸರ್ವೇ ನಂ. 68/1,68/3ರಲ್ಲಿನ ಜಮೀನುಗಳನ್ನು ನ್ಯಾಯಾಲಯದ ಆದೇಶದಂತೆ ಬಡವರಿಗೆ ಬಿಡಿಸಿಕೊಡಬೇಕು ಎಂದು ಹಕ್ಕೊತ್ತಾಯ ಮಾಡಲಾಯಿತು.

ಬೆಂಗಳೂರು ನಗರ ಅಧ್ಯಕ್ಷ ಅಯೂಬ್‌ಖಾನ್‌,ಉಪಾಧ್ಯಕ್ಷ ಭೈರಪ್ಪ, ವಿಭಾಗೀಯ ಕಾರ್ಯದರ್ಶಿ ಮುನಿರಾಜ್‌ ಆಲೂರು, ಕಾರ್ಯದರ್ಶಿಗಳಾದ ಕಾಕೋಳ್‌ ಚೆನ್ನಮರಿಯಪ್ಪ, ಲಿಂಗಣ್ಣ, ದೊಡ್ಡಬಳ್ಳಾಪುರ ನಗರ ಅಧ್ಯಕ್ಷ ಮಂಜುನಾಥ್‌, ತಾಲೂಕು ಸಂಘಟನೆ ಕಾರ್ಯದರ್ಶಿ ನೆಲ್ಲುಕುಂಟೆ ಮೂರ್ತಿ, ತಾಲೂಕು ಮಹಿಳಾ ಅಧ್ಯಕ್ಷೆ ರತ್ನಮ್ಮ, ಆಟೋ ಘಟಕದ ಅಧ್ಯಕ್ಷ ಲೋಕೇಶ್‌, ದೇವನಹಳ್ಳಿ ತಾಲೂಕು ಅಧ್ಯಕ್ಷ ಸೋಲೂರು ನಾಗರಾಜ್‌, ಮುಖಂಡರಾದ ಮುನಿಲಕ್ಷ್ಮಮ್ಮ, ಪುಷ್ಪಾ, ಶೀಲಾ, ಸುಲೋಚನಮ್ಮ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.