ನೀರು ಸಂಗ್ರಹಣಾ ಘಟಕಕ್ಕೆ ಸಹಾಯಧನ


Team Udayavani, Oct 1, 2022, 3:27 PM IST

tdy-7

ದೇವನಹಳ್ಳಿ: ಬಯಲು ಸೀಮೆಯ ಪ್ರದೇಶ ಆಗಿರುವುದರಿಂದ ಮಳೆ ನೀರನ್ನು ಅವಲಂಬಿಸಿದ್ದ ಜನರಿಗೆ ಜಿಲ್ಲೆಯಲ್ಲಿ ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ವೈಯಕ್ತಿಕ, ಸಮುದಾಯ ನೀರು ಸಂಗ್ರಹಣಾ ಘಟಕ ನಿರ್ಮಾಣ ಕಾರ್ಯಕ್ರಮಕ್ಕೆ ಸಿದ್ಧತೆ ತೊಡಗಿದೆ.

ಜಿಲ್ಲೆಯಲ್ಲಿ ಬರಗಾಲದ ಸಮಯದಲ್ಲಿ ಹಾಗೂ ಬೇಸಿಗೆಯಲ್ಲಿ ಆಧಾರಿತ ನೀರಾವರಿ ಅಗತ್ಯತೆಯನ್ನು ಒದಗಿಸುವುದು. ಮಳೆಗಾಲದಲ್ಲಿ ಅಥವಾ ಆಯಾ ಭಾಗಗಳಲ್ಲಿ ನೀರಿನ ಸೌಲಭ್ಯ ಲಭ್ಯವಿದ್ದಲ್ಲಿ ಈ ಹೆಚ್ಚುವರಿ ನೀರನ್ನು ಸಂಗ್ರಹಣೆ ಮಾಡಿ ಹಾಗೂ ತೋಟಗಾರಿಕೆ ಬೆಳೆ ಒಣಗುವ ಸಮಯದಲ್ಲಿ ನಿರ್ಣಾಯಕ ಹಂತದ ನೀರುಣಿಸುವಿಕೆಯಿಂದ ಬೆಳೆಯನ್ನು ಸಂರಕ್ಷಿಸುವ ಅವಶ್ಯಕತೆ ಇರುವುದರಿಂದ ನೀರು ಸಂಗ್ರಹಣಾ ಘಟಕ ರಚಿಸಿಬೇಕು.

ಮಳೆಗಾಲದಲ್ಲಿ ಮಳೆಯ ನೀರು, ನಾಲೆ ನೀರು, ಹರಿಯುವ ನೀರು ಹೀಗೆ ಇತ್ಯಾದಿ ಮೂಲಗಳಿಂದ ನೀರನ್ನು ಸಂಗ್ರಹಿಸಿ ಅದರ ಸದುಪಯೋಗ ಪಡಿಸಿಕೊಂಡು ಅವಶ್ಯಕವಾಗಿರುವುದರಿಂದ ನೆಲ ಮಟ್ಟದಿಂದ ಕೆಳಗೆ ರಚಿಸಿರುವ ನೀರು ಸಂಗ್ರಹಣಾ ಘಟಕ ಮತ್ತು ನೆಲ ಮಟ್ಟಕ್ಕಿಂತ ಮೇಲೆ ರಚಿಸಿರುವ ನೀರು ಸಂಗ್ರಹ ವಿನ್ಯಾಸಗಳ ಅನುಗುಣ ಸಹಾಯಧನವನ್ನು ತೋಟಗಾರಿಕೆ ಇಲಾಖೆ ನೀಡಲಾಗುವುದು ಎಂದು ಮಾಹಿತಿ ನೀಡಿದೆ. ತೋಟಗಾರಿಕೆ ಇಲಾಖೆ ವತಿಯಿಂದ 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ನೀರು ಸಂಗ್ರಹಣಾ ಘಟಕ ಅನುಷ್ಠಾನ ಗೊಳಿಸುತ್ತಿದೆ.

ಜಿಲ್ಲೆಯ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿಗಳನ್ನು ತೋಟಗಾರಿಕೆ ಇಲಾಖೆ ಆಹ್ವಾನಿಸಿದೆ. ಅ.7ರ ಒಳಗಾಗಿ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ತೋಟಗಾರಿಕೆ ಇಲಾಖೆ ಕೋರಿದೆ.

ಅಧಿಕಾರಿಗಳನ್ನು ಸಂಪರ್ಕಿಸಿ: ತೋಟಗಾರಿಕೆ ಬೆಳೆಗಳಿಗೆ ನೀರಿನ ಸೌಕರ್ಯ ಕಲ್ಪಿಸುವ ಉದ್ದೇಶದಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೆಲಮಟ್ಟಕ್ಕಿಂತ ಕೆಳಗಿರುವ 4,500 ಚ.ಮೀ., 6,500 ಚ.ಮೀ. ಅಳತೆಯುಳ್ಳ ವೈಯಕ್ತಿಕ, ಸಮುದಾಯ ನೀರು ಸಂಗ್ರಹಣ ಘಟಕಗಳನ್ನು ನಿರ್ಮಿಸಿಕೊಳ್ಳುವ ಫ‌ಲಾನುಭವಿಗಳಿಗೆ ನೆಲಮಟ್ಟಕ್ಕಿಂತ ಕೆಳಗೆ ರಚಿಸಿರುವ ವಿನ್ಯಾಸಗಳಿಗೆ ಸಹಾಯ ನೀಡಲು ಅವಕಾಶವಿದೆ. ಘಟಕಗಳ ರಚನೆ ಗಾತ್ರ, ಘಟಕ ವೆಚ್ಚ, ಗರಿಷ್ಠ ಸಹಾಯಧನ ಹಾಗೂ ಹೆಚ್ಚಿನ ಮಾಹಿತಿಗೆ ಸಂಬಂಧಿಸಿದ ತಾಲೂಕುಮಟ್ಟದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸಬೇಕು.

ಇಲಾಖೆಯಿಂದ ಟ್ಯಾಂಕರ್‌ ವಿತರಣೆ: ಇತ್ತೀಚಿನ ದಿನಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೆರೆ ಕುಂಟೆಗಳಲ್ಲಿ ಉತ್ತಮ ನೀರು ಬಂದಿರುವುದರಿಂದ ಅಂತರ್ಜಲಮಟ್ಟ ಹೆಚ್ಚಾಗಿದೆ. ಈ ನಡುವೆ ಕೊರೊನಾ ಲಾಕ್‌ಡೌನ್‌ನಿಂದ ಹೂವು, ಹಣ್ಣು ಬೆಳೆಗಾರರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಇದೀಗ ಅವರನ್ನು ಮತ್ತೆ ತೋಟಗಾರಿಕೆ ಬೆಳೆಯತ್ತ ಆಕರ್ಷಿಸಲು ಮತ್ತು ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಟ್ಯಾಂಕರ್‌ ವಿತರಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

ಜಿಲ್ಲಾ ತೋಟಗಾರಿಕೆ ಇಲಾಖೆ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ನೀರು ಸಂಗ್ರಹಣಾ ಘಟಕವನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಇದರಿಂದ ರೈತರು ನೀರು ಸಂಗ್ರಹಣೆ ಮಾಡಿ ಬೆಳೆಗೆ ನೀರನ್ನು ಬಳಸಬಹುದು. ವೈಯಕ್ತಿಕ, ಸಮುದಾಯ ನೀರು ಸಂಗ್ರಹಣಾ ಘಟಕ ನಿರ್ಮಿಸುವ ಫ‌ಲಾನುಭವಿಗಳಿಗೆ ಜಿಲ್ಲಾ ವ್ಯಾಪ್ತಿಯ ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. -ಗುಣವಂತ, ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.