ದೇವಾಲಯಗಳು ನೆಮ್ಮದಿ ನೀಡುವ ತಾಣಗಳಾಗಲಿ


Team Udayavani, Mar 16, 2019, 7:36 AM IST

devalaya.jpg

ದೊಡ್ಡಬಳ್ಳಾಪುರ: ದೇವಸ್ಥಾನಗಳು ಮಾನಸಿಕ ವಾಗಿ ನೋಂದವರಿಗೆ ನೆಮ್ಮದಿ ನೀಡುವ ಆಶ್ರಯ ತಾಣಗಳಾಗಬೇಕೆಂದು ಬೆಂಗಳೂರಿನ ಬೇಲಿ ಮಠದ ಶಿವರುದ್ರ ಸ್ವಾಮೀಜಿ ಹೇಳಿದರು.

ತಾಲೂಕಿನ ನಾಗಸಂದ್ರ ಗ್ರಾಮದಲ್ಲಿ ಜೀರ್ಣೋ ದ್ಧಾರಗೊಳಿಸಲಾಗಿರುವ ಅಭಯ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸುವಂತೆ ಮಾಡುವಲ್ಲಿ ದೇವಾಲಯಗಳು ಜನರಿಗೆ ಭಯ, ಭಕ್ತಿಯನ್ನು ಕಲ್ಪಿಸುವ ಕೇಂದ್ರಗಳನ್ನಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.

ದೇಗುಲ ನ್ಯಾಯಾಲಯಗಳಾಗಿದ್ದವು: ಹಿಂದೆ ನಮ್ಮ ಹಿರಿಯರು ದೇವಾಲಯಗಳನ್ನು ಕೇವಲ ಭಕ್ತಿಯ ಕೇಂದ್ರಗಳಾಗಿ ಮಾತ್ರ ನೋಡುತ್ತಿರಲಿಲ್ಲ. ದೇವಾಲಯಗಳನ್ನು ಗ್ರಾಮಗಳ ನ್ಯಾಯಾಲಯ ದಂತೆಯೂ ಬಳಸಿಕೊಳ್ಳುತ್ತಿದ್ದರು ಎಂಬು ದನ್ನು ಪ್ರತಿಯೊಬ್ಬರೂ ಗಮನಿಸಬೇಕಾದ ಮಹತ್ವದ ಸಂಗತಿಯಾಗಿದೆ. ಆದರೆ, ಇಂದಿನ ಆಧುನಿಕ ಸಮಾ ಜದಲ್ಲಿ ಈ ನಡವಳಿಕೆ ಸಂಪೂರ್ಣ ಬದಲಾಗಿದೆ ಎಂದು ತಿಳಿಸಿದರು.

ಉಗ್ರಗಾಮಿ ಪ್ರವೃತ್ತಿ ಅಪಾಯಕಾರಿ: ಶಿವಗಂಗೆ ಯ ಮೇಲಣಗವಿ ಮಠದ ಮಲಯ ಶಾಂತ ಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಇಷ್ಟು ದಿನ ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಕೊಡು ತ್ತಿದ್ದರು. ಈಗ ತಮ್ಮ ಉದ್ದೇಶಗಳ ಈಡೇರಿಕೆಗಾಗಿ ಮನುಷ್ಯ ಮನುಷ್ಯರನ್ನೇ ಬಲಿಕೊಡುವ ಉಗ್ರ ಗಾಮಿ ಪ್ರವೃತ್ತಿ ಬೆಳೆಯುತ್ತಿದೆ ಎಂದು ತೀವ್ರ ಬೇಸರ ಹಾಗೂ ಆಕ್ರೋಶ ವ್ಯಕ್ತಪಡಿಸಿದರು.

ಉಗ್ರಗಾಮಿಗಳ ಮಟ್ಟ ಹಾಕಿ: ಧರ್ಮ, ಸಂಸ್ಕೃತಿ ಯ ಹೆಸರಿನಲ್ಲಿ ನಡೆಯುತ್ತಿ ರುವ ಉಗ್ರಗಾಮಿಗಳ ಹೋರಾಟ ನಿಲ್ಲಲೇಬೇಕು. ಜಗತ್ತಿನಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಎಲ್ಲರೂ ಶಕ್ತಿಮೀರಿ ಶ್ರಮಿಸ ಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾಗರಿಕರು ಜಾಗೃತರಾಗಬೇಕಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್‌.ಸಿ.ದೇವರಾಜ್, ಕಾರ್ಯ ದರ್ಶಿ ಎಂ.ಬಸವರಾಜು, ಅರ್ಚಕ ಆನಂದ, ಸದಸ್ಯ ರಾದ ಎನ್‌.ಸಿ.ಬಸವರಾಜು, ಎಂ.ವೀರಭದ್ರಯ್ಯ, ಜಿ.ಎಸ್‌.ಮಲ್ಲಪ್ಪ, ನಾಗರತ್ನಮ್ಮ, ಲಲಿತಮ್ಮ, ಮುನಿ ಸ್ವಾಮಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಭರತನಾಟ್ಯ ಪ್ರದರ್ಶನ: ಇದೇ ಸಂದರ್ಭದಲ್ಲಿ ಬೆಂಗಳೂರಿನ ಆರಾಧನಾ ನೃತ್ಯ ಶಾಲೆಯ ನಾಗ ಭೂಷಣ್‌ ತಂಡದಿಂದ ಭರತನಾಟ್ಯ ಪ್ರದರ್ಶನ ಕಾರ್ಯಕ್ರಮವೂ ನಡೆಯಿತು.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.