- Friday 06 Dec 2019
ಆಧುನಿಕತೆಯಿಂದಾಗಿ ಆಧ್ಯಾತ್ಮಿಕತೆಯ ಅಧಃಪತನ
Team Udayavani, Nov 18, 2019, 3:00 AM IST
ವಿಜಯಪುರ: ಆಧುನಿಕತೆಯ ಪ್ರಭಾವಕ್ಕೆ ಸಿಲುಕಿ ಪ್ರತಿಯೊಬ್ಬರೂ ಪೈಪೋಟಿಯ ಮತ್ತು ಒತ್ತಡದ ಜೀವನಕ್ಕೆ ಸಿಲುಕಿದ್ದಾನೆ. ಹಣ, ಅಧಿಕಾರ ಗಳಿಕೆಯ ಆಸೆಯಿಂದಾಗಿ ಆಧ್ಯಾತ್ಮಿಕತೆಯ ಕಡೆಗೆ ಗಮನ ಹರಿಸಲು ಸಮಯವಿಲ್ಲದಂತಾಗಿದೆ ಎಂದು ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ, ಪಂಪಮಹಾಗಣಪತಿ ದೇವಾಲಯದ ಅರ್ಚಕ ಜೆ.ವಿ.ಮುನಿರಾಜುಸ್ವಾಮಿ ತಿಳಿಸಿದರು.
ಪಟ್ಟಣದ ಕೆರೆಕೋಡಿಯ ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ, ಪಂಪಮಹಾಗಣಪತಿ ದೇವಾಲಯದಲ್ಲಿ ಆಯೋಜಿಸಿದ್ದ ಅಯ್ಯಪ್ಪಸ್ವಾಮಿ ಮಂಡಲಪೂಜೆ, ದೀಪೋತಸ್ವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಮಾಜದಲ್ಲಿ ಆಧುನೀಕರಣ, ಖಾಸಗೀಕರಣ ಮತ್ತು ಜಾಗತೀಕರಣಗಳ ಪರಿಣಾಮವಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ಅರಾಜಕತೆ, ಅನೈತಿಕತೆ, ಅನ್ಯಾಯ, ಭ್ರಷ್ಟಾಚಾರ, ಅಕ್ರಮಸಂಪಾದನೆ ಚಟುವಟಿಕೆಗಳು ತಾಂಡವವಾಡುವಂತಾಗಿದೆ ಎಂದರು.
ದೇವಾಲಯ ಸಮಿತಿಯ ನಿರ್ದೇಶಕ ಪ್ರಭು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಮಾನವೀಯತೆಯ ಚಟುವಟಿಕೆಗಳು ಹೆಚ್ಚಿ ಸ್ವಾಸ್ಥ್ಯ ಕಲುಷಿತಗೊಳ್ಳುತ್ತಿದೆ. ಧಾರ್ಮಿಕ ಆಚರಣೆಗಳ ಮೂಲಕ ಉತ್ತಮ ಸಂಸ್ಕಾರಯುತವಾದ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯವಿದೆ ಎಂದರು.
ಧಾರ್ಮಿಕ ಮುಖಂಡ ಮನೋಹರ್ಬಾಬು ಮಾತನಾಡಿ, ಮಕ್ಕಳಲ್ಲಿ ನೈತಿಕಮೌಲ್ಯಗಳು ಕುಸಿಯುತ್ತಿವೆ. ಮಕ್ಕಳಲ್ಲಿ ಮೌಲ್ಯಗಳ ಮರುಸ್ಥಾಪನೆಯ ಅಗತ್ಯವಿದೆ ಎಂದರು.ಧಾರ್ಮಿಕ ಮುಖಂಡ ರವಿಶಂಕರ್, ಹರೀಶ್, ಅಯ್ಯಪ್ಪಮಾಲೆಧಾರಿಗಳು ಪಾಲ್ಗೊಂಡಿದ್ದರು. ದೀಪೋತ್ಸವ, ದೇವರಿಗೆ ವಿಶೇಷಪೂಜೆ, ಭಜನೆ ಕಾರ್ಯಕ್ರಮಗಳು ನಡೆದವು.
ಈ ವಿಭಾಗದಿಂದ ಇನ್ನಷ್ಟು
-
ದೇವನಹಳ್ಳಿ : ಅಂಗನವಾಡಿ ಕೇಂದ್ರಗಳಲ್ಲಿ ಶಾಲಾ ಪೂರ್ವ ಪ್ರಾಥಮಿಕ ತರಗತಿಗಳ ಪ್ರಾರಂಭ ಮತ್ತಿತರ ಬೇಡಿಕೆಗೆಗೆ ಆಗ್ರಹಿಸಿ ಜಿಲ್ಲಾ ಮತ್ತು ತಾಲೂಕು ಅಂಗನವಾಡಿ ನೌಕರರ...
-
ನೆಲಮಂಗಲ: ಕೆರೆಯಲ್ಲಿ ಹೂಳೆತ್ತುವ ನೆಪದಲ್ಲಿ ತೆಗೆದ ಗುಂಡಿಗಳು ಜನರಿಗೆ ಮೃತ್ಯುಕೂಪದಂತಾಗಿದ್ದು, ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ. ತಾಲೂಕಿನ...
-
ನೆಲಮಂಗಲ: ಪಟ್ಟಣದ ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಕಚೇರಿ ಆವರಣದಲ್ಲಿನ ಪ್ಲಾಸ್ಟಿಕ್ ತ್ಯಾಜ್ಯ ಕಂಡು ಸ್ವತ: ಪೊರಕೆ...
-
ನೆಲಮಂಗಲ: ನೆಲಮಂಗಲ ತಾಲೂಕು ಕಚೇರಿ ಇನ್ಮುಂದೆ ಸಂಪೂರ್ಣ ಇ-ಆಫೀಸ್ ವ್ಯಾಪ್ತಿಗೆ ಬರಲಿದೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ ಬೀಳಲಿದೆ. ಸರಕಾರಿ ಕಚೇರಿಗಳಲ್ಲಿ...
-
ಹೊಸಕೋಟೆ: ಕ್ಷೇತ್ರದಲ್ಲಿ ಡಿ.5ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸ ಬೇಕೆಂದು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಹೊಸ ಸೇರ್ಪಡೆ
-
ಮುಂಬಯಿ, ಡಿ. 4: ಹೊರನಾಡ ಕನ್ನಡ ಸಂಘಟನೆಗಳಲ್ಲಿ ಹಿರಿಯರ ದಂಡೇ ಹೆಚ್ಚಾಗಿರುವಾಗ ಯುವಕ-ಯುವತಿಯರೇ ತುಂಬಿದ ಪಲವಾ ಕನ್ನಡಿಗರ ಸಂಘ ಯುವ ಪಡೆಯ ಕನ್ನಡಾಭಿಮಾನವನ್ನು...
-
ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 87 ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ದುರಸ್ತಿಗಾಗಿ ಇದೇ ಪ್ರಥಮ ಬಾರಿಗೆ ಸರ್ಕಾರ 15 ಕೋಟಿ ರೂ....
-
ತೆಲಂಗಾಣ/ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ವಿಶ್ವನಾಥ ಸಜ್ಜನರ್ ನೇತೃತ್ವದ...
-
ಚಿಕ್ಕನಾಯಕನಹಳ್ಳಿ: ತಾಲೂಕಿನ ಮಲ್ಲಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಪಾಳ್ಯದ ಪ್ರಾಥಮಿಕ ಶಾಲೆಯ ಛಾವಣಿ ಹಾಗೂ ಕಂಬ ಕುಸಿದು ಬಿದ್ದಿದ್ದು, ಅದೃಷ್ಟವಶಾತ್...
-
ಚಿತ್ರದುರ್ಗ: ಹೆಣ್ಣುಮಗು ಬೇಡ ಎನ್ನುವ ಭಾವನೆ ಇಂದು ಲಿಂಗಾನುಪಾತದಲ್ಲಿ ವ್ಯತ್ಯಾಸವಾಗುವಂತೆ ಮಾಡಿದೆ. ಇದರಿಂದ ಇಂದು ವಧುವಿಗಾಗಿ ಹುಡುಕಾಡುವ ಸ್ಥಿತಿ ನಿರ್ಮಾಣವಾಗಿದೆ...