ರಾಜ್ಯ ಬಿಜೆಪಿ ಸರ್ಕಾರದ್ದು ದ್ವೇಷದ ರಾಜಕಾರಣ

Team Udayavani, Sep 21, 2019, 3:00 AM IST

rajya-bjiya

ನೆಲಮಂಗಲ: ರಾಜ್ಯದ ಅಭಿವೃದ್ಧಿಗೆ ಸದಾ ಮುಂದಿರುವೆ ಎಂದು ಹೇಳುವ ಮುಖ್ಯಮಂತ್ರಿ ಯಡಿಯೂರಪ್ಪ ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳ ಅನುದಾನ ಹಿಂಪಡೆದುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಯಂಟಗನಹಳ್ಳಿ ಗ್ರಾಮ ಪಂಚಾಯಿತಿಯ ಕೋಡಪ್ಪನಹಳ್ಳಿ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

ಬಿಜೆಪಿಯದ್ದು ದ್ವೇಷ ರಾಜಕಾರಣ: ತಾಲೂಕಿನ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ, ಚರಂಡಿಗಳಿಗೆ ಅನುದಾನ ನೀಡುವ ಮೂಲಕ ಗ್ರಾಮಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡುವಂತೆ ಕುಮಾರಸ್ವಾಮಿ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಆದರೆ ಇಂದಿನ ಬಿಜೆಪಿ ನೇತೃತ್ವದ ಸರ್ಕಾರ ಅನುದಾನ ಹಿಂಪಡೆದುಕೊಂಡಿದ್ದು, ಬಹಳ ಬೇಸರದ ಸಂಗತಿ.

ಈ ರೀತಿ ಸರ್ಕಾರ ದ್ವೇಷದ ರಾಜಕಾರಣ ಮಾಡಿದರೆ, ನಾವು ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿ ಮಾಡುವುದಾದರೂ ಹೇಗೆ? ಜನರಿಗೆ ಯಾವ ರೀತಿ ಉತ್ತರ ನೀಡಲು ಸಾಧ್ಯ? ಸರ್ಕಾರ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷದ ಶಾಸಕರ ಕ್ಷೇತ್ರಗಳಲ್ಲಿ ಅನುದಾನ ನಿಲ್ಲಿಸಿರುವುದು ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದರು.

ವಿಧಾನಪರಿಷತ್‌ ಮಾಜಿ ಸದಸ್ಯ ಇ.ಕೃಷ್ಣಪ್ಪ ಮಾತನಾಡಿ, ಅಭಿವೃದ್ಧಿ ಕೆಲಸ ಪೂರ್ಣವಾದ ಮೇಲೆ ಹಳ್ಳಿಯ ಜನರು ಸೌಲಭ್ಯಗಳನ್ನು ಕಾಪಾಡಿಕೊಳ್ಳಬೇಕು. ಗ್ರಾಮ ಸಮೃದ್ಧಿಯಾಗಬೇಕೆಂದರೆ ಗ್ರಾಮದ ಜನ ಒಗ್ಗಟ್ಟಾಗುವುದು ಬಹಳ ಮುಖ್ಯ. ಉತ್ತಮ ಆರೋಗ್ಯಕ್ಕಾಗಿ ಸಾರ್ವಜನಿಕರು ಶುದ್ಧ ಕುಡಿಯುವ ನೀರಿನ ಘಟಕದ ನೀರನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಕಾಮಗಾರಿಗೆ ಚಾಲನೆ: ತಾಪಂ 1.5 ಲಕ್ಷ ರೂ. ಅನುದಾನದಲ್ಲಿ ರಸ್ತೆ ಚರಂಡಿ ಕಾಮಗಾರಿಗೆ ಚಾಲನೆ ಹಾಗೂ ಕೋಡಪ್ಪನಹಳ್ಳಿಯಲ್ಲಿ 20 ಲಕ್ಷ ರೂ. ವೆಚ್ಚದ ರಸ್ತೆ ಹಾಗೂ 5 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಶಂಕುಸ್ಥಾಪನೆ ಮಾಡಿದರು.

ಉದ್ಘಾಟನೆ: 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಾಜಿ ವಿಧಾನ ಪರಿಷತ್‌ಸದಸ್ಯ ಇ.ಕೃಷ್ಣಪ್ಪ, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಉದ್ಘಾಟಿಸಿದರು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಬಸವನಹಳ್ಳಿ ರಂಗನಾಥ್‌, ಜಿಲ್ಲಾ ಪಂಚಾಯಿತಿ ಸದಸ್ಯೆ ಪುಷ್ಪಸಂಪತ್‌, ತಾಲೂಕು ಪಂಚಾಯಿತಿ ಸದಸ್ಯ ರುದ್ರೇಶ್‌, ಗ್ರಾಮಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾಚಿಕ್ಕಣ್ಣ, ಸದಸ್ಯೆ ಲಕ್ಷೀದೇವಮ್ಮ ವೆಂಕಟೇಶ್‌,ಗಂಗಲಕ್ಷಮ್ಮ, ಎಪಿಎಂಸಿ ನಿರ್ದೇಶಕ ಗೋವಿಂದರಾಜು, ಪಿಡಿಒ ಪ್ರಶಾಂತ್‌, ಕೋಡಪ್ಪನಹಳ್ಳಿ ವೆಂಕಟೇಶ್‌, ಕೃಷಿಕ ಸಮಾಜದ ಅಧ್ಯಕ್ಷ ಸಿದ್ದಪ್ಪ, ಮುಖಂಡರಾದ ಜಯರಾಮು, ರುದ್ರಪ್ಪ, ಬಾಲಕೃಷ್ಣ, ಚಿಕ್ಕಣ್ಣ, ಪ್ರಕಾಶ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.