ವಿವಿಧ ಗ್ರಾಮಗಳ ಊರ ಜಾತ್ರೆ: 4 ಗಂಟೆ 15 ಕಿ.ಮೀ. ಟ್ರಾಫಿಕ್‌

Team Udayavani, Apr 27, 2022, 3:25 PM IST

Untitled-1

ನೆಲಮಂಗಲ: ತಾಲೂಕಿನ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಒಂದೇ ದಿನ ಬಾಡೂಟದ ಊರ ಜಾತ್ರೆ ನಡೆದ ಪರಿಣಾಮ, ರಾಷ್ಟ್ರೀಯ ಹೆದ್ದಾರಿಗಳಲ್ಲಿ 15ಕ್ಕೂ ಹೆಚ್ಚು ಕಿ.ಮೀ. ಟ್ರಾಫಿಕ್‌ಜಾಮ್‌ ಉಂಟಾಗಿ ಸಾವಿರಾರು ವಾಹನಗಳು 4 ಗಂಟೆಗಳಷ್ಟು ಹೆದ್ದಾರಿಯಲ್ಲಿ ನಿಲ್ಲುವಂತಾಯಿತು.

ತಾಲೂಕಿನ ಬೂದಿಹಾಳ್‌ ಕರಗದ ಶ್ರೀ ಲಕ್ಷ್ಮೀ ದೇವರ ಅದ್ಧೂರಿ ಜಾತ್ರಾ ಮಹೋತ್ಸವ ಹಾಗೂ ವಿವಿಧ ಗ್ರಾಮಗಳ ಗ್ರಾಮದೇವತೆಗಳ ಮಹೋತ್ಸವ 2ವರ್ಷದ ನಂತರ ನಡೆದ ಪರಿಣಾಮ, ಮಂಗಳವಾರ ಏಕಕಾಲದಲ್ಲಿ ಸಾವಿರಾರು ವಾಹ ನಗಳು ಬೆಂಗಳೂರು, ತುಮಕೂರು ಹಾಗೂ ನೆಲಮಂಗಲ ನಗರ ಸೇರಿ ವಿವಿಧ ತಾಲೂಕುಗಳಿಂದ ಗ್ರಾಮಗಳಿಗೆ ಬಂದ ಪರಿಣಾಮ ಹೆದ್ದಾರಿ ರಸ್ತೆ ಸಂಪೂರ್ಣ ಜಾಮ್‌ ಉಂಟಾಗಿ ವಾಹನ ಸವಾರರು ಪರದಾಡಿದರು.

ಟ್ರಾಫಿಕ್‌ ಪೊಲೀಸರಾದ ಸಾರ್ವಜನಿಕರು: ಜಾತ್ರೆಗಳ ಪರಿಣಾಮ 15ಕ್ಕೂ ಹೆಚ್ಚು ಕಿ.ಮೀ. ಉಂಟಾಗಿದ್ದ ಟ್ರಾಫಿಕ್‌ ಜಾಮ್‌ ನಡುವೆ ಐದಕ್ಕೂ ಹೆಚ್ಚು ಆ್ಯಂಬುಲೆನ್ಸ್‌ ಸಿಲುಕಿಕೊಂಡು ಸೈರನ್‌ ಹಾಕಿದರೂ ಆ್ಯಂಬುಲೆನ್ಸ್‌ಗೆ ಸುಗಮ ಸಂಚಾರ ಮಾಡಲು ಸಾಧ್ಯವಾಗಲಿಲ್ಲ. ಕುಣಿಗಲ್‌ ಬೈಪಾಸ್‌ ಬಳಿ ಟ್ರಾಫಿಕ್‌ ಪೊಲೀಸರು ಇಲ್ಲದ ಪರಿಣಾಮ ಸಾರ್ವಜನಿಕರೇ ಟ್ರಾಫಿಕ್‌ ಪೊಲೀಸರಂತೆ ಕೆಲಸ ಮಾಡಿ ಆ್ಯಂಬುಲೆನ್ಸ್‌ಗೆ ಗಂಟೆಗಳ ನಂತರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಡಕಮಾರನಹಳ್ಳಿಯಿಂದ ಟಿ.ಬೇಗೂರಿನವರೆಗೂ ಟ್ರಾಫಿಕ್‌ ಜಾಮ್‌ ಉಂಟಾದರೆ, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಯಂಟಗನಹಳ್ಳಿಯವರೆಗೂ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಕುಣಿಗಲ್‌ ಬೈಪಾಸ್‌ಬಳಿ ಸರಾಗವಾಗಿ ವಾಹನ ಓಡಾಟ ಮಾಡದ ಪರಿಣಾಮ 4 ಗಂಟೆಗೂ ಹೆಚ್ಚು ಕಾಲ 15 ಕಿ.ಮೀ.ಗಳಷ್ಟು ದೂರ ಹೆದ್ದಾರಿ ಯಲ್ಲಿ ವಾಹನಗಳು ನಿಲ್ಲುವಂತಾಗಿತ್ತು.

ಪೊಲೀಸ್‌ ಸಿಬ್ಬಂದಿ ಕೊರತೆ: ಸಂಚಾರ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆ ಇರುವ ಬಗ್ಗೆ ಅನೇಕ ದೂರು, ಮನವಿ ಬಂದರೂ ಸಹ ಮೇಲಾಧಿಕಾರಿಗಳು ಬಗೆಹರಿಸದ ಪರಿಣಾಮ ಮಂಗಳವಾರ ಟ್ರಾಫಿಕ್‌ ಜಾಮ್‌ ಉಂಟಾಗಲು ಕಾರಣವಾಯಿತು.

ಕುಣಿಗಲ್‌ ಬೈಪಾಸ್‌ ಬಳಿ ಇಬ್ಬರು ಸಿಬ್ಬಂದಿ ಮಾತ್ರ ಕೆಲಸ ನಿರ್ವಹಿಸಿದ್ದು, ಸಿಬ್ಬಂದಿ ಕಷ್ಟವನ್ನು ನೋಡದೆ ಸಾರ್ವಜನಿಕರೇ ಟ್ರಾಫಿಕ್‌ ಪೊಲೀಸರಂತೆ ನಿಂತು ಸುಗಮ ಸಂಚಾರಕ್ಕೆ ಕೆಲಸ ಮಾಡಿದರು.

ನಾಲ್ಕು ಕಡೆ ಟ್ರಾಫಿಕ್‌ ಜಾಮ್‌: ತಾಲೂಕಿನಲ್ಲಿ ಬಹಳಷ್ಟು ಗ್ರಾಮದಲ್ಲಿ ಊರ ಜಾತ್ರೆಗಳ ಪರಿಣಾಮ ಹೆದ್ದಾರಿ ಎರಡು ಭಾಗದಲ್ಲಿ ವಾಹನಗಳು ಏಕಕಾಲದಲ್ಲಿ ಬಂದ ಪರಿಣಾಮ ನಾಲ್ಕು ಕಡೆಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಸಿಬ್ಬಂದಿ ಗಳ ಪರಿಶ್ರಮದಿಂದ ಟ್ರಾಫಿಕ್‌ ಜಾಮ್‌ ನಿಯಂತ್ರಣ ಮಾಡಿದ್ದೇವೆ ಎಂದು ನೆಲಮಂಗಲ ಸಂಚಾರ ಪೊಲೀಸ್‌ ಠಾಣೆ ಸರ್ಕಲ್‌ ಇನ್ಸ್‌ಪೆಕ್ಟರ್‌ ಶಿವಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.