ಮನೆ ಮನೆಗೆ ತೆರಳಿ ಡೀಸಿಯಿಂದ ಮತದಾರರ ಪಟ್ಟಿ ಪರಿಶೀಲನೆ

Team Udayavani, Jan 22, 2020, 6:28 PM IST

ದೇವನಹಳ್ಳಿ : ನಾವು ಹಾಕುವ ಮತ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ನಾಗರೀಕರಲ್ಲಿ ಜಾಗೃತಿ ಮೂಡಿಸಿ ಮತದಾನದ ಪ್ರಮಾಣ ಹೆಚ್ಚಿಸುವ ಜವಾಬ್ದಾರಿ ಯುವ ಜನರ ಮೇಲಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್‌.ರವೀಂದ್ರ ತಿಳಿಸಿದರು.

ತಾಲೂಕಿನ ಯರ್ತಿಗಾನ ಹಳ್ಳಿಯಲ್ಲಿ ಮನೆ ಮನೆಗೆ ತೆರಳಿ, ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಕುರಿತು ಪರಿಶೀಲನೆ ನಡೆಸಿ ಮಾತನಾಡಿದರು. ಗ್ರಾಮದ ಪ್ರತಿ ಮನೆಗೆ ತೆರಳಿ ಮತದಾರರ ಪಟ್ಟಿಯಲ್ಲಿರುವ ಲೋಪಗಳು ಬೂತ್‌ ಮಟ್ಟದ ಅಧಿ ಕಾರಿಗಳ ಕಾರ್ಯವೈಖರಿ, ನಮೂನೆ 6ರಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ಸೇರಿಸಿರುವ ಯುವಕ ಮತ್ತು ಯು ವತಿಯರ ವಿಳಾಸ ಮತ್ತು ದಾಖಲಾತಿಗಳನ್ನು ಪರಿಶೀಲಿಸುತ್ತಿದ್ದೇವೆ. ಯಾರಾದರೂ ಸತ್ತು ಹೋಗಿದ್ದರೆ ಅಂತಹವರ ಹೆಸರನ್ನು ನಮೂನೆ 7ರ ಪಟ್ಟಿಯಿಂದ ತೆಗೆಯುವ ಕಾರ್ಯವನ್ನು ಸ್ಥಳದಲ್ಲಿಯೇ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಮತದಾರರ ಪಟ್ಟಿಗೆ ನಮೂನೆ 6 (ಸೇರ್ಪಡೆ), ನಮೂನೆ 7 (ತೆಗೆದು ಹಾಕಿರುವುದು) , ನಮೂನೆ 8(ತಿದ್ದು ಪಡಿ ಮಾಡುವುದು). ನಮೂನೆ 8ಎ (ವರ್ಗಾವಣೆ ) ಅರ್ಜಿಗಳನ್ನು ಸಲ್ಲಿಸಬಹುದು. ಕರಡು ಮತದಾರರ ಪಟ್ಟಿಯಲ್ಲಿರುವ ಮಾಹಿತಿ ಯನ್ನು ಸಂಗ್ರಹಿಸಲಾಗುತ್ತಿದೆ. ಗ್ರಾಮದ ಜನರಿಗೆ ಮತದಾನದ ಹಕ್ಕಿನ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. 18 ವರ್ಷ ತುಂಬಿದ ಯುವ ಜನರು ಮತ ಪಟ್ಟಿಗೆ ಸೇರ್ಪಡೆಯಾಗಬೇಕು. ತಮ್ಮ ಹಕ್ಕನ್ನು ಚಲಾಯಿಸದೆ, ನಿರ್ಲಕ್ಷ್ಯ ವಹಿಸುವುದು ಸಹ ದೇಶ ಅಭದ್ರತೆಗೆ ಶಕ್ತಿ ತುಂಬಿದಂತೆ ಆಗುತ್ತದೆ.ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಿದರು. ಈ ವೇಳೆಯಲ್ಲಿ ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ, ಚುನಾವಣಾ ಶಿರಸ್ಥೆದಾರ್‌ ಮಂಜುನಾಥ್‌, ರಾಜಸ್ವ ನಿರೀಕ್ಷಕ ಚಂದ್ರಶೇಖರ, ಹಾಗೂ ಬೂತ್‌ ಮಟ್ಟದ ಅಧಿಕಾರಿ ಗಳು ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೊಡ್ಡಬಳ್ಳಾಪುರ:ನಗರದಲ್ಲಿ ತಲೆ ಎತ್ತುತ್ತಿರುವ ಮಾಲ್‌ಗ‌ಳು, ಆನ್‌ಲೈನ್‌ ಕಂಪನಿಗಳಿಂದ ವ್ಯಾಪಾರಸ್ಥರಿಗೆ ಹೊಡೆತ ಬೀಳುತ್ತಿದೆ. ಇದಕ್ಕೆ ಪೂರಕವಾದ ಸರ್ಕಾರದ...

  • ದೊಡ್ಡಬಳ್ಳಾಪುರ:  ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಪ್ರಸ್ತುತ ಖರೀದಿಸಲಾಗುತ್ತಿರುವ 10 ಕ್ವಿಂಟಲ್‌ ರಾಗಿ ಪ್ರಮಾಣವನ್ನು 15 ಕ್ವಿಂಟಲ್‌ಗೆ ಏರಿಸಬೇಕು....

  • ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿನೂತನ ಸಪ್ತಪದಿ ಯೋಜನೆಯ ಪ್ರಚಾರದ ಸಲುವಾಗಿ ತಾಲೂಕಿನ ಎಸ್‌.ಎಸ್‌ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ...

  • ನೆಲಮಂಗಲ: ರಾಷ್ಟ್ರದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿ, ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವ ಪ್ರತಿಯೊಬ್ಬರಿಗೂ ದೇಶದ ಅನ್ನ, ನೀರು ನೀಡದೆ ಗಡಿಪಾರು ಮಾಡಬೇಕು ಎಂದು...

  • ದೇವನಹಳ್ಳಿ: ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಾಗ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದುಇಂಡಿಯನ್‌ ಆಯಿಲ್‌...

ಹೊಸ ಸೇರ್ಪಡೆ