ಹೊಸಕೋಟೆ ಮಾದರಿ ಕ್ಷೇತ್ರವನ್ನಾಗಿಸಲು ಪಣ

Team Udayavani, Nov 5, 2019, 3:00 AM IST

hosakote-mada

ಹೊಸಕೋಟೆ: ಹೊಸಕೋಟೆ ವಿಧಾನಸಭಾ ಕ್ಷೇತ್ರವನ್ನು ಶಿಕಾರಿಪುರದಂತೆ ಮಾದರಿಯನ್ನಾಗಿಸಲು ತಾವು ಪಣ ತೊಟ್ಟಿರುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು. ನಗರದ ಹಳೆ ಬಸ್‌ಸ್ಟಾಂಡ್‌ನ‌ಲ್ಲಿ ಏರ್ಪಡಿಸಿದ ಏತ ನೀರಾವರಿ ಯೋಜನೆ ಹಾಗೂ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.

8 ಎಕರೆ ಪ್ರದೇಶದಲ್ಲಿ 2 ಸಾವಿರ ಮನೆ ನಿರ್ಮಾಣ: ಈಗಾಗಲೇ ತಾಲೂಕಿನ 30 ಕೆರೆಗಳಿಗೆ ಕೆ.ಆರ್‌.ಪುರಂನ ಎಸ್‌ಟಿಪಿ ಘಟಕದಿಂದ ನೀರು ಹರಿಸುವ ಯೋಜನೆಯನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಇದೇ ರೀತಿ ಗ್ರಾಮೀಣ ರಸ್ತೆಗಳ ದುರಸ್ತಿಗೆ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಗೊಳ್ಳಲಿದೆ. 65 ಕೋಟಿ ರೂ.ಗಳ ವೆಚ್ಚದಲ್ಲಿ ನಗರಕ್ಕೆ ಕಾವೇರಿ 4ನೇ ಹಂತದಲ್ಲಿ ನೀರು ಸರಬರಾಜು ಮಾಡಲು ಯೋಜಿಸಲಾಗಿದೆ. ತಾಲೂಕಿನ ಕುರುಬರಹಳ್ಳಿಯಲ್ಲಿ ರಾಜೀವ್‌ ಗಾಂಧಿ ವಸತಿ ಯೋಜನೆಯಡಿ 8 ಎಕರೆ ಪ್ರದೇಶದಲ್ಲಿ 2 ಸಾವಿರ ಮನೆಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದರು.

ಕಾಡುಗೋಡಿಯಿಂದ ಹೊಸಕೋಟೆಯವರೆಗೂ ಮೆಟ್ರೋ: ಕಾಡುಗೋಡಿಯಿಂದ ಹೊಸಕೋಟೆಯವರೆಗೂ ಮೆಟ್ರೋ ರೈಲನ್ನು ವಿಸ್ತರಿಸುವ ಬಗ್ಗೆ, ಮಲ್ಲಸಂದ್ರ ಗ್ರಾಮದ ಬಳಿ ರೈಲ್ವೆ ಕ್ರಾಸಿಂಗ್‌ಗೆ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಇದೇ ರೀತಿ ನಗರದಲ್ಲಿ ಸಂಚಾರದ ದಟ್ಟಣೆ ಹೆಚ್ಚಾಗಿರುವ ಕಾರಣ ಪ್ರತ್ಯೇಕ ಸಂಚಾರ ಪೊಲೀಸ್‌ ಠಾಣೆ ಸ್ಥಾಪಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಳೆಗಳಿಗೆ ವೈಜ್ಞಾನಿಕ ಬೆಲೆ: ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಅಂತರ್ಜಲ ವೃದ್ಧಿಗೆ ಆದ್ಯತೆ ನೀಡಿ ಕೃಷಿ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದು. ಒಳಗೊಂಡಂತೆ ರೈತರ ಹಿತ ಕಾಪಾಡಲು ಸರಕಾರ ಬದ್ಧವಾಗಿದ್ದು ವಿಶಿಷ್ಟವಾದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ರಾಜ್ಯದಲ್ಲಿ ಒಂದೆಡೆ ಅತಿವೃಷ್ಟಿ, ಮತ್ತೂಂದೆಡೆ ಬರ ಪರಿಸ್ಥಿತಿಯಿದ್ದಾಗ್ಯೂ ಸಹ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುವಲ್ಲಿ ಯಾವುದೇ ತೊಂದರೆಯಿಲ್ಲ. ಕಾಂಗ್ರೆಸ್‌ ನಿರ್ಲಕ್ಷ್ಯದಿಂದಾಗಿ ಎಂಟಿಬಿ ನಾಗರಾಜ್‌ ರಾಜೀನಾಮೆ ಸಲ್ಲಿಸಿದ್ದಾರೆಯೇ ಹೊರತು ಇದಕ್ಕೆ ಬಿಜೆಪಿ ಹೊಣೆಯಲ್ಲ ಎಂದು ತಿಳಿಸಿದರು.

ಯಾವುದೇ ಯೋಜನೆಗೂ ಮಂಜೂರಾತಿ: ಎಂಟಿಬಿ ನಾಗರಾಜ್‌ ತಿಳಿಸುವ ಯಾವುದೇ ಯೋಜನೆಗೂ ತಾವು ಮಂಜೂರಾತಿ ನೀಡುವುದಾಗಿಯೂ ಅಧಿಕಾರಿಗಳೂ ಸಹ ಈ ಬಗ್ಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚಿಸಿದರು.

ಅನರ್ಹ ಶಾಸಕರ ಬಗ್ಗೆ ಮೆಚ್ಚುಗೆ: ಎಂಟಿಬಿ ನಾಗರಾಜ್‌ ಸರಳ ಸಜ್ಜನ ವ್ಯಕ್ತಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕ್ಷೇತ್ರದ ಮತದಾರರು ಆಶೀರ್ವದಿಸಬೇಕು ಎಂದು ಪರೋಕ್ಷವಾಗಿ ಚುನಾವಣಾ ಪ್ರಚಾರಕ್ಕೆ ನಾಂದಿ ಹಾಡಿದರು.

ಇತರೆ ಕೆರೆಗಳಿಗೆ ನೀರು: ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಗ್ರಾಮೀಣ ಬದುಕನ್ನು ಸುಸ್ಥಿರಗೊಳಿಸಲು, ವಲಸೆ ತಡೆಗಟ್ಟಲು ಸರಕಾರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಕೆರೆ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ತುಂಬಿ ಹರಿಯುವ ವ್ಯರ್ಥ ನೀರನ್ನು ಇತರೆ ಕೆರೆಗಳಿಗೆ ಹರಿಸಲು ಆದ್ಯತೆ ನೀಡಲಾಗುತ್ತಿದೆ. ಕೆ.ಸಿ. ವ್ಯಾಲಿ, ಎಚ್‌ಎನ್‌ ವ್ಯಾಲಿ ನೀರು ಹರಿಸಲು ಸಹ ಯೋಜಿಸಲಾಗಿದ್ದು ತಮಿಳುನಾಡಿಗೆ ವ್ಯರ್ಥವಾಗಿ ಹೋಗುತ್ತಿರುವ ಕೊಳಚೆ ನೀರನ್ನು ಶುದ್ಧೀಕರಿಸಲು ಸಿದ್ಧತೆ ಮಾಡಲಾಗಿದೆ.

ಬರ ಪರಿಸ್ಥಿತಿಯನ್ನು ನಿವಾರಿಸಲು ಶಾಶ್ವತ ಪರಿಹಾರಕ್ಕೆ ಜಾನುವಾರು ಸಾಕಣೆ , ಕೃಷಿಗೆ ಅಗತ್ಯವಾದ ನೀರು ಒದಗಿಸಲು ರಾಜ್ಯದಲ್ಲಿ ಸಂಭವಿಸಿರುವ ನೆರೆ ಪರಿಸ್ಥಿತಿಯಿಂದ ತಡವಾಗುತ್ತಿದೆ ಎಂದರು. ಕಂದಾಯ, ಪೌರಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ಮಾತನಾಡಿ, ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್‌ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಯಾರಿಂದಲೂ ತೆಗಳು ಸಾಧ್ಯವಿಲ್ಲ. ಇಂಥ ಜನಪ್ರತಿನಿಧಿಯನ್ನು ಮತ್ತೂಮ್ಮೆ ಆಯ್ಕೆ ಮಾಡಿಕೊಳ್ಳಬೇಕಾದ್ದು ಅವಶ್ಯಕತೆಯಿದೆ ಎಂದು ತಿಳಿಸಿದರು.

ನೆರೆ ನಿರ್ವಹಣೆ ಬಗ್ಗೆ ಟೀಕೆಗಳಿಗೆ ಪ್ರತ್ಯುತ್ತರ: ವಿರೋಧ ಪಕ್ಷದವರು ನೆರೆಯಿಂದಾಗಿ ಹಾನಿಗೊಂಡವರಿಗೆ ಬಿಡಿಗಾಸು ನೀಡಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ಇದುವರೆಗೂ 2.4 ಲಕ್ಷ ಜನರಿಗೆ ತಲಾ 10 ಸಾವಿರ ರೂ.ಗಳಷ್ಟು ಪರಿಹಾರ ಬಿಡುಗಡೆ ಮಾಡಲಾಗಿದೆ. ಈ ಮಾಹಿತಿಯನ್ನು ಯಾರೂ ಬೇಕಾದರೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಂದ ಪಡೆಯಬಹುದಾಗಿದೆ ಎಂದರು.

ಯಾರಿಂದಲೂ ಬಿಜೆಪಿಗೆ ಪಾಠಬೇಡ: ಮನೆ ನಿರ್ಮಿಸಿಕೊಳ್ಳಲು ಸಹ ಈಗಾಗಲೇ 5 ಲಕ್ಷ ರೂ.ಗಳನ್ನು ನೀಡಿದ್ದು ಆರೋಪ ಮಾಡುವ ವಿರೋಧ ಪಕ್ಷದವರು ಎಷು ಬಾರಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು ಎಂಬುದನ್ನು ತಿಳಿಸಲು ಎಂದು ಸವಾಲೆಸೆದರು. ಕೊಡಗು ಜಿಲ್ಲೆಯಲ್ಲಿ ಭೂಕುಸಿತದಿಂದ ಹಾನಿಗೊಳಗಾದವರಿಗೆ ಬದಲಿಯಾಗಿ 380 ಎಕರೆಯಷ್ಟು ಜಮೀನನ್ನು ನೀಡಲಾಗಿದೆ. ಕೇಂದ್ರದಲ್ಲಿಯೂ ಬಿಜೆಪಿ ಸರಕಾರವಿದ್ದು ರಾಜ್ಯದ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ದೊರಕುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸ್ವತಃ ಹೋರಾಟ ಮನೋಭಾವ ಉಳ್ಳವರಾಗಿದ್ದು ರಾಜ್ಯದ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದಾರೆ. ಈ ಬಗ್ಗೆ ಯಾರಿಂದಲೂ ಬಿಜೆಪಿ ಪಾಠ ಕಲಿಯಬೇಕಾಗಿಲ್ಲ ಎಂದರು.

ಆಮಿಷಗಳಿಗೆ ಒಳಗಾಗಿಲ್ಲ: ಮಾಜಿ ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ಸಮ್ಮಿಶ್ರ ಸರಕಾರದಲ್ಲಿ 10 ತಿಂಗಳು ಶಾಸಕನಾಗಿ, 6 ತಿಂಗಳು ಸಚಿವನಾಗಿದ್ದಾಗ್ಯೂ ಸಹ ನಿಗದಿಪಡಿಸಿದ ಯೋಜನೆಗಳಿಗೆ ಹಣ ಬಿಡುಗಡೆಯಾಗಲೀ ಕಾಮಗಾರಿಗಳನ್ನು ಪ್ರಾರಂಭಿಸುವ ಬಗ್ಗೆ ಬಹಳಷ್ಟು ಭಾರೀ ಮನವಿ ಮಾಡಿದರೂ ಸಹ ಕವಡೆ ಕಿಮ್ಮತ್ತು ಸಹ ನೀಡಿಲ್ಲದ ಕಾರಣ ಬೇಸತ್ತು ರಾಜೀನಾಮೆ ನೀಡಬೇಕಾಯಿತೆ ಹೊರತು ಯಾವುದೇ ಆಮಿಷಗಳಿಗೆ ಒಳಗಾಗಿಯಲ್ಲ ಎಂದು ಸ್ಪಷ್ಟಪಡಿಸಿದರು.

ಜನಸೇವೆಯೇ ಪ್ರಮುಖ ಉದ್ದೇಶ: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಎಂದಿಗೂ ಹಣ, ಅಧಿಕಾರದಾಸೆ ಪಟ್ಟಿಲ್ಲದೆ ಜನಸೇವೆ ಮಾಡುವುದೇ ಪ್ರಮುಖ ಉದ್ದೇಶವಾಗಿದೆ. ಬಿಜೆಪಿ ಸರಕಾರ ಅತಂತ್ರವಾಗಿದ್ದು ಯಾವುದೇ ಸಂದರ್ಭದಲ್ಲಾದರೂ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ವಿರೋಧ ಪಕ್ಷದವರು ಹಗಲುಗನಸು ಕಾಣುತ್ತಿದ್ದು ಯಡಿಯೂರಪ್ಪ ನೇತೃತ್ವದ ಸರಕಾರ ಉಳಿದಿರುವ ಅವಧಿಯನ್ನು ಪೂರ್ಣಗೊಳಿಸುವುದಲ್ಲಿ ಯಾವುದೇ ಸಂಶಯವಿಲ್ಲ. ಹಿಂದೆ ತಡೆಹಿಡಿದಿದ್ದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿಗಳು ಒಂದು ತಿಂಗಳೊಳಗಾಗಿ ಮಂಜೂರಾತಿ ನೀಡಿ ಕಾಮಗಾರಿ ಪ್ರಾರಂಭಿಸಲು ಅವಕಾಶ ಮಾಡಿಕೊಟ್ಟಿದ್ದಾರೆ.

ತಮ್ಮ ಬಹಳಷ್ಟು ಪ್ರಸ್ತಾ ವನೆಗಳಿಗೂ ಸಹ ಅನುಮೋದನೆ ನೀಡುವ ಭರವಸೆ ನೀಡಿದ್ದಾರೆ ಎಂದರು. ತಾಪಂ ಅಧ್ಯಕ್ಷ ವಿ.ಸಿ.ಜಯದೇವಯ್ಯ, ಜಿಲ್ಲಾಧಿಕಾರಿ ರವೀಂದ್ರ ಇನ್ನಿತರರು ಭಾಗವಹಿಸಿದ್ದರು. ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಮತ್ತು ಜಡಿಗೇನಹಳ್ಳಿ ಹೋಬಳಿ ವ್ಯಾಪ್ತಿಯ 30 ಕೆರೆಗಳಿಗೆ 100 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಆರ್‌.ಪುರಂನ ಎಸ್‌ಟಿಪಿಯಿಂದ ನೀರು ತುಂಬಿಸುವ ಕಾಮಗಾರಿ, ಸಮ್ಮೇತನಹಳ್ಳಿ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.