ರಸ್ತೆ ಗುಂಡಿ ಮುಚ್ಚಲು ಆಗ್ರಹಿಸಿ ಧರಣಿ

ಮಾಗಡಿ ತಾಲೂಕು ರೈತ ಸಂಘದಿಂದ ಬೃಹತ್‌ ಪ್ರತಿಭಟನೆ

Team Udayavani, May 28, 2019, 10:40 AM IST

ಮಾಗಡಿ: ಹದಿನೈದು ದಿನಗಳೊಳಗೆ ಮಾಗಡಿ-ಕುಣಿಗಲ್-ಹುಲಿಯೂರುದುರ್ಗದ ರಸ್ತೆ ಗುಂಡಿ ಮುಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಲೋಕೋಪ ಯೋಗಿ ಇಲಾಖೆ ಎಇಇ ರಾಮಣ್ಣ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ರಸ್ತೆ ತಡೆ ಪ್ರತಿಭಟನೆ ಧರಣಿ ಕೈಬಿಟ್ಟಿರುವುದಾಗಿ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ತಿಳಿಸಿದರು.

ರಸ್ತೆಯಲ್ಲಿ ಅಡುಗೆ ತಯಾರಿಸಿ ಧರಣಿ: ಪಟ್ಟಣದ ಸೋಮೇಶ್ವರಸ್ವಾಮಿ ವೃತ್ತದಲ್ಲಿ ರಸ್ತೆಯಲ್ಲಿ, ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ನೇತೃತ್ವದಲ್ಲಿ ಬೃಹತ್‌ ರಸ್ತೆ ತಡೆ ಪ್ರತಿಭಟನೆ ಧರಣಿ ನಡೆಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದರು.

ರಸ್ತೆ ಗುಂಡಿ ಮುಚ್ಚಲು ಆಗ್ರಹ: ಇಲ್ಲಿನ ಸೋಮೇಶ್ವರ ಸ್ವಾಮಿ ವೃತ್ತದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಕೇಶ್‌ ಮಾತ ನಾಡಿ, ಮಾಗಡಿ- ಕುಣಿಗಲ್- ಹುಲಿಯೂರುದುರ್ಗ ಮಾರ್ಗ ದ ರಸ್ತೆ ಗುಂಡಿಗಳಿಂದಾಗಿ ನಿತ್ಯವೂ ಅಪಘಾತಗಳು ಸಂಭವಿಸು ತ್ತಿದ್ದವು. ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಳ್ಳಬೇಕೆಂದರು.

ಚರಂಡಿ ನೀರು ಕೆರೆ ಸೇರದಂತೆ ಮಾಡಿ: ಪಟ್ಟಣದ ಒಳಚರಂಡಿ ನೀರು ಭರ್ಗಾವತಿ ಕೆರೆ ಸೇರುತ್ತಿದ್ದು, ಕೆರೆಯ ನೀರು ಕಲುಷಿತಗೊಂಡು ದುರ್ವಾಸನೆ ಬೀರುತ್ತಿದೆ. ಇದರಿಂದ ನಾಗರಿಕರು ರೋಗರುಜಿನಗಳಿಂದ ನರಳುವಂತಾಗಿದೆ. ಭರ್ಗಾವತಿ ಕೆರೆಗೆ ಪಟ್ಟಣದ ಒಳಚರಂಡಿ ಕಲುಷಿತ ನೀರು ಕೆರೆಗೆ ನೀರು ಸೇರುತ್ತಿರುವುದನ್ನು ತಡೆದು, ಕೆರೆ ದುರಸ್ತಿಗೊಳಿಸುವ ಮೂಲಕ ಕೆರೆ ಸ್ವಚ್ಛಗೊಳಿಸಬೇಕು ಎಂದರು.

ಇದೇ ವೇಳೆ ರೈತ ಚಿಕ್ಕಚೆನ್ನ‌ಯ್ಯ, ಕಳೆದ ನಾಲ್ಕುವರ್ಷಗಳಿಂದ ರಸ್ತೆ ಬದಿ ಜಂಗಲ್ ಕತ್ತರಿಸಿಲ್ಲ, ಇದರಿಂದ ರೈತರು ರಾತ್ರಿ ವೇಳೆ ತಮ್ಮ ಗ್ರಾಮಗಳಿಗೆ ಹೋಗಲಾಗುತ್ತಿಲ್ಲ, ತಮ್ಮ ಹೊಲಗದ್ದೆ ಬಳಿ ಹಸಿರು ಬಳ್ಳಿಗಳು ಬೆಳೆದು ನಿಂತಿವೆ ಎಂದು ಆರೋಪಿಸಿ ಪಿಡ್ಲೂಡಿ ಎಂಜಿನಿಯರ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಧುಗೌಡ, ಟೌನ್‌ ಅಧ್ಯಕ್ಷ ರಂಗಸ್ವಾಮಯ್ಯ, ಶಿವಕುಮಾರ್‌, ರಂಗಪ್ಪ, ಗಿರೀಶ್‌,ರಾಜಣ್ಣ, ಶಶಿಧರ್‌,ಚೆನ್ನಪ್ಪ, ವೆಂಕಟೇಶ್‌, ಮೂರ್ತಿ, ನರಸಿಂಹಮೂರ್ತಿ, ಪ್ರಕಾಶ್‌, ಕೆಂಚಪ್ಪ, ಶ್ರೀನಿವಾಸ್‌, ಗಿರೀಶ್‌ ರಮೇಶ್‌, ಆನಂದ್‌, ಚಿಕ್ಕಣ್ಣ, ಶಂಕರ್‌ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ನೆಲಮಂಗಲ: ರಾಷ್ಟ್ರದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿ, ಶತ್ರು ರಾಷ್ಟ್ರಗಳ ಪರ ಘೋಷಣೆ ಕೂಗುವ ಪ್ರತಿಯೊಬ್ಬರಿಗೂ ದೇಶದ ಅನ್ನ, ನೀರು ನೀಡದೆ ಗಡಿಪಾರು ಮಾಡಬೇಕು ಎಂದು...

  • ದೇವನಹಳ್ಳಿ: ಯಾವುದೇ ಅಗ್ನಿ ಅವಘಡಗಳು ಸಂಭವಿಸಿದಾಗ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದುಇಂಡಿಯನ್‌ ಆಯಿಲ್‌...

  • ನೆಲಮಂಗಲ : ರೈತರಿಗೆ ಎದುರಾಗುವ ಬೆಲೆ ಕುಸಿತ, ಬೆಳೆಹಾನಿಯ ಸಂಕಷ್ಟಗಳ ನಡುವೆ ಸರ್ವರ್‌ ಸಮಸ್ಯೆಯಿಂದಾಗಿ, ಸಾಲ ಸೌಲಭ್ಯಕ್ಕಾಗಿ ಬೆಳೆ ಆಧಾರ್‌ ಪತ್ರ ಪಡೆಯಲು ಅಲೆದಾಡುವ...

  • ನೆಲಮಂಗಲ : ತರಕಾರಿ ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರು, ಬೆಳೆದ ಬೆಳೆಯನ್ನು ರಸ್ತೆಗೆ ಸುರಿಯದೇ ಮಠಗಳು ಹಾಗೂ ದಾಸೋಹ ಕೇಂದ್ರಗಳಿಗೆ ರವಾನೆ ಮಾಡುವ ಮೂಲಕ ಸಂಕಷ್ಟದಲ್ಲೂ...

  • ಹೊಸಕೋಟೆ: ಶಿವಾಜಿ ಮಹಾರಾಜರು ಹೊಂದಿದ್ದ ಹೋರಾಟ ಮನೋಭಾವ, ತೋರಿದ ದೈರ್ಯ, ಶೌರ್ಯ ಯುವಕರಿಗೆ ಸ್ಪೂರ್ತಿಯಾಗಿದೆ ಎಂದು ತಹಶೀಲ್ದಾರ್‌ ವಿ. ಗೀತಾ ಹೇಳಿದರು. ಅವರು...

ಹೊಸ ಸೇರ್ಪಡೆ