ನೀರಿನ ಸಮಸ್ಯೆಗೆ ಬೇಕಿದೆ ಶಾಶ್ವತ ಪರಿಹಾರ

Team Udayavani, Mar 22, 2020, 2:58 PM IST

ನೀರಿನ ಸಮಸ್ಯೆಗೆ ಬೇಕಿದೆ ಶಾಶ್ವತ ಪರಿಹಾರ

ದೊಡ್ಡಬಳ್ಳಾಪುರ: ಬೇಸಿಗೆ ಆರಂಭವಾಗಿದ್ದು, ಜತೆಗೆ ನೀರಿನ ಸಮಸ್ಯೆಯೂ ಹೆಚ್ಚುತ್ತಿದೆ. ಸರಬರಾಜಾಗುತ್ತಿರುವ ನೀರಿನ ಸ್ಥಿತಿಗತಿ ಅರಿಯಬೇಕಿದ್ದು, ನೀರಿನ ಮಿತ ಬಳಕೆಗೆ ಆದ್ಯತೆ ನೀಡಬೇಕಿದೆ.

ನಗರದಲ್ಲಿ 1.05 ಲಕ್ಷ ಜನಸಂಖ್ಯೆಯಿದ್ದು, ತಲಾ ಒಬ್ಬರಿಗೆ ದಿನಕ್ಕೆ 135 ಲೀಟರ್‌ನಂತೆ ಒಟ್ಟು 14.17 ಎಂಎಲ್‌ಡಿ (ಒಂದು ದಿನಕ್ಕೆ ದಶಲಕ್ಷ ಲೀ) ಅವಶ್ಯಕತೆಯಿದೆ. ಸದ್ಯ ತಲಾ 63 ಲೀಟರ್‌ನಂತೆ 6.61 ಎಂಎಲ್‌ಡಿ, ಕೊಳವೆ ಬಾವಿಗಳಿಂದ 4.51 ಜಕ್ಕಲಮಡಗು ಜಲಾಶಯದಿಂದ 2.10 ಎಂಎಲ್‌ಡಿ ನೀರು ಸರಬ ರಾಜು ಮಾಡಲಾಗುತ್ತಿದೆ. ಇನ್ನೂ 5.68 ಎಂಎಲ್‌ಡಿ ನೀರಿನ ಕೊರತೆಯಿದೆ. ನಗರದಲ್ಲಿ 155 ಕೊಳವೆ ಬಾವಿಗಳಿದ್ದು, 77 ಮಾತ್ರ ಕಾರ್ಯನಿರ್ವಹಿಸುತ್ತಿವೆ. ನಗರದಲ್ಲಿ 5 ರಿಂದ 6 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಜಕ್ಕಲಮಡಗು ಜಲಾಶಯದಲ್ಲಿ ಪ್ರಸ್ತುತ ಶೇಖರಣೆಯಾಗಿರುವ ನೀರಿನಮಟ್ಟ 24 ಅಡಿಗಳಿದೆ. ಈಗ ಪ್ರತಿದಿನ 2.10 ಎಂಎಲ್‌ಡಿಯಂತೆ ಸರಬರಾ ಜಾಗುತ್ತಿದೆ. ಅದರಂತೆ ಗರಿಷ್ಠ 3 ತಿಂಗಳು ಸರಬರಾಜು ಮಾಡಿಕೊಳ್ಳಬಹುದಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗ್ರಾಮಾಂತರ ಪ್ರದೇಶ: ಗ್ರಾಮಾಂತರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಾಡುತ್ತಿದೆ. ಕೆರೆಗಳಲ್ಲಿ ಹೂಳು ತಂಬಿ ನೀರು ಸಂಗ್ರಹ ಕಡಿಮೆಯಾಗಿದೆ. ಪ್ರತಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಆದರೆ ಸೂಕ್ತ ನಿರ್ವಹಣೆಯಿಲ್ಲದೆ ಹಲವುಘಟಕಗಳು ಮುಚ್ಚಿವೆ. ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಕಾಲಕಾಲಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುದಾನ ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ ಎಂಬ ಆರೋಪಗಳು ಕೇಳಿವೆ.

ಕಾರ್ಯಗತವಾಗದ ನೀರಾವರಿ ಯೋಜನೆ: ಸಧ್ಯಕ್ಕೆ ಜಕ್ಕಲಮಡು ಗುವಿನಿಂದ ನಗರಕ್ಕೆ ನೀರು ಸರಬರಾಜಾಗುತ್ತಿರುವುದರಿಂದ ಪರಿ ಸ್ಥಿತಿ ತಿಳಿಯಾಗಿದೆ. ಎತ್ತಿನ ಹೊಳೆ ಯೋಜನೆಗೆ ನಿರ್ಮಿಸ ಲಾಗುತ್ತಿರುವ ಬೈರಗೊಂಡ್ಲು ಜಲಾಶಯದ ವಿವಾದ ಇನ್ನೂ ಬಗೆಹರಿದಿಲ್ಲ. ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕುಗಳಿಗೆ ವೃಷಭಾವತಿ, ನಾಯಂಡ ಹಳ್ಳಿಯಿಂದ ಶುದ್ದೀಕರಿಸಿದ ನೀರು ಹರಿಸುವ ಯೋಜನೆ ರೂಪಿಸಲಾಗಿದೆ.

ಶುದ್ಧ ನೀರಿನ ಘಟಕ ನಿರ್ವಹಣೆಗೆ 3 ವರ್ಷ ಗುತ್ತಿಗೆ ನೀಡಲಾಗಿದೆ. ಆದರೆ ಹೆಚ್ಚು ನೀರು ವ್ಯರ್ಥವಾಗುತ್ತಿದೆ ಎಂಬ ಆರೋಪ ಗಳಿವೆ. ಹೀಗಾಗಿ ವ್ಯರ್ಥ ನೀರನ್ನು ಕೊಳವೆ ಬಾವಿ ಮರು ಪೂರಣಕ್ಕೆ ಯೋಜನೆ ರೂಪಿಸಲಾಗಿದೆ.  ಆರ್‌.ಮಂಜುನಾಥ್‌, ಪೌರಾಯುಕ್ತ

ಡಿ.ಶ್ರೀಕಾಂತ

ಟಾಪ್ ನ್ಯೂಸ್

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Miracle: ವರ್ತುಲ ಕಾಮನಬಿಲ್ಲಿನಲ್ಲಿ ಸೆರೆಯಾದ ಆದಿತ್ಯ… ವಿಜಯಪುರದಲ್ಲಿ ಖಗೋಳ ಅಚ್ಚರಿ

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

Sandalwood: ಸ್ವಾತಂತ್ರ್ಯ ದಿನಕ್ಕೆ ದುನಿಯಾ ವಿಜಿ ನಿರ್ದೇಶನದ ʼಭೀಮʼ ರಿಲೀಸ್?‌

ರೇಣುಕಾಸ್ವಾಮಿ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎಷ್ಟೇ ಪ್ರಬಲ ವ್ಯಕ್ತಿಯಾಗಿದ್ದರೂ ಶಿಕ್ಷೆ ಕಟ್ಟಿಟ್ಟ ಬುತ್ತಿ

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

Actor Pratham: ಬಿಗ್‌ ಬಾಸ್‌ ಖ್ಯಾತಿಯ ನಟ ಪ್ರಥಮ್‌ಗೆ ಜೀವ ಬೆದರಿಕೆ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

Flyover ಮಧ್ಯೆ ಸಿಲುಕಿ ನೇತಾಡಿದ ಕೆಎಸ್ಸಾರ್ಟಿಸಿ ಬಸ್‌

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

14

ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್

No court relief, Arvind Kejriwal to remain in jail till July 3

Delhi Liquor Case: ಸಿಎಂ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನ ಜು.3ವರೆಗೆ ವಿಸ್ತರಣೆ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

ಜೂ.24 ರಿಂದ ಗೋವಾದಲ್ಲಿ12ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

13-

Dharmsthala ಯೋಜನೆ ವತಿಯಿಂದ ರಾಜ್ಯಾದ್ಯಂತ 770 ಕೆರೆ ಪುನಶ್ಚೇತನ: ಆನಂದ್‌ ಸುವರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.