ಜಲ ಮೂಲ ರಕ್ಷಣೆ ನಮ್ಮೆಲ್ಲರ ಹೊಣೆ


Team Udayavani, May 8, 2019, 3:00 AM IST

adichuncha

ದೇವನಹಳ್ಳಿ: ಜೀವಜಲ ಮೂಲವನ್ನು ತಲತಲಾಂತರಗಳಿಂದ ನಮ್ಮ ಪೂರ್ವಜರು ರಕ್ಷಿಸಿಕೊಂಡು ಬರುತ್ತಿದ್ದರು. ಇದೀಗ ಜಲ ಮೂಲ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕನ್ನಮಂಗಲ ಕರೆಯಂಗಳದಲ್ಲಿ ಸ್ಥಳೀಯರ ಸಮ್ಮುಖದಲ್ಲಿ ನಡೆಯುತ್ತಿರುವ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದರು.

ನೀರು ಉಳಿಸಿ: ಮನುಷ್ಯ ನೀರಿಗಾಗಿ ಏನು ಬೇಕಾದರೂ ಕೊಟ್ಟುಬಿಡುತ್ತಾನೆ. ನೀರೇ ಸರ್ವಸ್ವ, ನೀರಿಲ್ಲವೆಂದರೆ ನಾವೇ ಇರಲ್ಲ. ಪ್ರಪಂಚದಲ್ಲಿನ ಸಕಲ ಚರಾಚರಗಳೂ ಇರಲ್ಲ. ನೀರಿಗಾಗಿ ಹಾಹಾಕಾರ ಹೆಚ್ಚುತ್ತಿದೆ. ಪರಿಸರ ಸಮತೋಲನ ಕಾಯ್ದುಕೊಳ್ಳಬೇಕಾದರೆ ನೀರಿನ ಅಂಶ ಇರಬೇಕು. ನೀರಿನ ಸಮಸ್ಯೆಗೆ ಸರ್ಕಾರವನ್ನು ಅವಲಂಬಿತರಾಗುವುದು ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ. ನಾವೇ ನೀರನ್ನು ಉಳಿಸಿಕೊಂಡು ಹೋದಲ್ಲಿ ಮುಂದೊಂದು ದಿನ ನಮ್ಮ ಪೀಳಿಗೆಗೆ ಕೊಡುಗೆಯಾಗುತ್ತದೆ ಎಂದು ಹೇಳಿದರು.

ಜಲ ಕ್ರಾಂತಿಯೇ ಆಗಲಿ: ನಾವು, ನಮ್ಮ ಕೆರೆ, ಬಾವಿ, ಕುಂಟೆ, ಗೋಕಟ್ಟೆಯನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಸ್ಥಳೀಯರು ಮನಸ್ಸು ಮಾಡಿ ಮುಂದೆ ಬರಬೇಕು. ಒಂದು ಗ್ರಾಮದ ಅಭಿವೃದ್ಧಿ ಆ ಗ್ರಾಮದಲ್ಲಿ ವಾಸಿಸುವ ಜನರ ಕರ್ತವ್ಯ ಪ್ರಜ್ಞೆಯಲ್ಲಿರುತ್ತದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಸಿ.ಎಸ್‌.ಕರೀಗೌಡ ಅವರು ಈ ಭಾಗಕ್ಕೆ ಜಿಲ್ಲಾಧಿಕಾರಿಯಾಗಿ ಉತ್ತಮ ಸಹಕಾರ ನೀಡುವುದರ ಜೊತೆಗೆ ಜನರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲೆಗೆ ಸೀಮಿತವಾಗದೇ ಇಡೀ ರಾಜ್ಯ ಮಟ್ಟದಲ್ಲಿ ಈ ಕಾರ್ಯ ನಡೆದರೆ ಜಲ ಕ್ರಾಂತಿಯೇ ಆಗಲಿದೆ ಎಂದರು.

ಜಿಲ್ಲಾಧಿಕಾರಿಗೆ ಅಭಿನಂದನೆ: ಕೆರೆ ಅಭಿವೃದ್ಧಿಪಡಿಸಿರುವುದನ್ನು ಕಂಡು ಸಂತಸದಿಂದ ಇದೇ ಮಾದರಿಯಲ್ಲಿ ತುಮಕೂರು ಜಿಲ್ಲೆಯಲ್ಲಿ ಆರಂಭಿಸುವ ಚಿಂತನೆ ಯಾಕೆ ಮಾಡಬಾರದು ಎಂದು ಅನಿಸುತ್ತದೆ. ನೋಡೋಣ ದೈವ ಪ್ರೇರಣೆ ಎಂದು ಜಿಲ್ಲಾಧಿಕಾರಿಗಳಿಗೆ ಸ್ಥಳದಲ್ಲಿಯೇ ಅಭಿನಂದಿಸಿದರು.

16 ಕೆರೆಗಳ ಕಾಮಗಾರಿ ಪೂರ್ಣ: ಜಿಲ್ಲಾಧಿಕಾರಿ ಕರೀಗೌಡ ಮಾತನಾಡಿ, ಗ್ರಾಮೀಣ ಪ್ರದೇಶದ ಜನರು ನೀರಿಗಾಗಿ ತತ್ತರಿಸುತ್ತಿದ್ದಾರೆ. ಜಿಲ್ಲೆಯಲ್ಲಿರುವ ತಾಲೂಕುಗಳಲ್ಲಿನ ಸ್ಥಳೀಯರ ಸಹಭಾಗಿತ್ವದಲ್ಲಿ ಸರ್ಕಾರದಿಂದ ನಯಾಪೈಸೆ ಅನುದಾನವಿಲ್ಲದೇ ಕರೆ ಅಭಿವೃದ್ಧಿಪಡಿಸಲಾಗುತ್ತಿದೆ. ಖಾಸಗಿ ಕಂಪನಿಗಳ ಸಾಮಾಜಿಕ ಕಳಕಳಿಯಿಂದ ಜಿಲ್ಲೆಯಲ್ಲಿ 22 ಕೆರೆಗಳನ್ನು ಗುರುತಿಸಿಕೊಂಡು 16 ಕೆರೆಗಳ ಕಾಮಗಾರಿ ಸಂಪೂರ್ಣ ಮುಗಿಸಲಾಗಿದೆ.

ಉಳಿದ ಕರೆಗಳ ಕಾಮಗಾರಿ ಪ್ರಗತಿಯಲ್ಲಿವೆ. ಇನ್ನು ಕೆಲವು ಕೆರೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಸ್ಥಳೀಯರು ಉತ್ತಮ ಸಹಕಾರ ನೀಡುತ್ತಿರುವುದು ಸಂತಸ ಹಾಗೂ ಮಾಡುವ ಕಾರ್ಯದಲ್ಲಿ ತೃಪ್ತಿ ತಂದಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ಮಂಜುನಾಥ್‌, ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.