ಮಳೆಗಾಲದಲ್ಲೂ ಟ್ಯಾಂಕರ್‌ ಮೂಲಕ ನೀರು


Team Udayavani, Oct 17, 2019, 3:00 AM IST

malegala

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ದೇವನಾಯಕನಹಳ್ಳಿ ಗ್ರಾಮಸ್ಥರು ಮಳೆಗಾಲದಲ್ಲೂ ನೀರಿ ಸಮಸ್ಯೆ ಎದುರಾಗಿದ್ದು, ಕುಡಿಯುವ ನೀರಿಗಾಗಿ ಟ್ಯಾಂಕರ್‌ ಮೊರೆ ಹೋಗಬೇಕಾದ ಅನಿವಾರ್ಯತೆ ಉಂಟಾಗಿದೆ. ಸತತ ಬರಗಾಲದಿಂದ ಗ್ರಾಮದಲ್ಲಿ 1500ಅಡಿಗಳಿಗೂ ಹೆಚ್ಚು ಬೋರ್‌ವೆಲ್‌ ಕೊರೆಸಿದರೂ ನೀರು ಸಿಗದ ಸ್ಥಿತಿ ಎದುರಾಗಿದೆ. ದೇವನಾಯಕನಹಳ್ಳಿ ಗ್ರಾಮದಲ್ಲಿ ಶೇ.95ರಷ್ಟು ರೈತಾಪಿ ವರ್ಗವಿದ್ದು, ಜಾನುವಾರುಗಳಿಗೆ ನೀರು ಸಾಕಾಗುತ್ತಿಲ್ಲ. ಹೈನುಗಾರಿಕೆಗೆ ಅವಲಂಬಿಸಿರುವ ರೈತರ ಜಾನುವಾರುಗಳಿಗೆ ನೀರು ಸಿಗುದಂತಾಗಿದೆ.

ಕುಸಿದ ಅಂತರ್ಜಲ: ಕೊಳವೆ ಬಾವಿಗಳಲ್ಲಿ ನೀರು ಕಡಿಮೆಯಾಗಿದ್ದು, ಮೋಟಾರು ಪಂಪ್‌ಸೆಟ್‌ ದುರಸ್ಥಿಯಾಗಿ ವಾರ ಕಳೆದರೂ ನೀರು ಸಿಗದೆ ಗಂಗವಾರ ಗ್ರಾಪಂಯಿಂದ ಗ್ರಾಮಕ್ಕೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.ಆದರೆ ಗ್ರಾಮಸ್ಥರಿಗೆ ನೀರು ಸಾಕಾಗುತ್ತಿಲ್ಲ. ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸುತ್ತಿಲ್ಲ. ಮಳೆಗಾಲದಲ್ಲೂ ಟ್ಯಾಂಕರ್‌ ಮೂಲಕ ನೀರು ಹಿಡಿದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಜನರು ಕೆಲಸ ಕಾರ್ಯಗಳನ್ನು ಬಿಟ್ಟು ನೀರಿನ ಟ್ಯಾಂಕರ್‌ಗಳಿಗೆ ಕಾಯುವಂತಾಗಿದೆ. ಸಕಾಲಕ್ಕೆ ಮಳೆಯಾಗದಿರುವುದರಿಂದ ಅಂತರ್ಜಲ ಮಟ್ಟ ಕುಸಿದಿದ್ದು, ನೀರಿಗೆ ಆಹಾಕಾರ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಎತ್ತಿನಹೊಳೆ ಯೋಜನೆ ಜಾರಿಯಾಗಲಿ: ಒಂದು ವರ್ಷ ಉತ್ತಮ ಮಳೆ ಬಂದರೆ ಮತ್ತೂಂದು ವರ್ಷ ಬರಗಾಲದ ಛಾಯೆ ರೈತರನ್ನು ಕಾಡುತ್ತದೆ. ಸರ್ಕಾರ ಇನ್ನಾದರೂ ಈ ಪ್ರದೇಶಕ್ಕೆ ಕುಡಿಯುವ ನೀರಿನ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ, ಮುಂದಿನ ದಿನಗಳಲ್ಲಿ ಗ್ರಾಮಸ್ಥರು ಗ್ರಾಮ ಬಿಟ್ಟು ಗುಳೇ ಹೋಗುವ ಪರಿಸ್ಥಿತಿ ಬರಬಹುದು ಎಮದು ಹೇಳಲಾಗುತ್ತಿದೆ. ಎತ್ತಿನಹೊಳೆ ಯೋಜನೆಯನ್ನು ತ್ವರಿತವಾಗಿ ಸರ್ಕಾರ ಜಾರಿಗೆ ತಂದರೆ ಈ ಭಾಗದ ಜನರಿಗೆ ಒಂದಿಷ್ಟು ನೀರು ಸಿಗುತ್ತದೆ ಎಂದು ಗ್ರಾಮಸ್ಥರು ಹೇಳುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳಲ್ಲಿ ಈಗಾಗಲೇ ಟ್ಯಾಂಕರ್‌ ಮೂಲಕ ನೀರು ಸರಬರಾಜು ಪೂರೈಸಲಾಗುತ್ತಿದೆ. ಸಮಸ್ಯೆ ಉದ್ಭವಿಸಿದರೆ ಅಂತಹ ಗ್ರಾಮಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಅ ಧಿಕಾರಿಗಳು ಹೇಳುತ್ತಾರೆ.

ಕುಡಿಯುವ ನೀರಿಗೆ ಹೆಚ್ಚಿನ ಆದ್ಯತೆ ನೀಡುತ್ತೇವೆಂದು ಹೇಳುವ ಜನಪ್ರತಿನಿಧಿಗಳು ಎಲ್ಲಿ ಆದ್ಯತೆ ನೀಡುತ್ತಿದ್ದಾರೆ. ಇಲ್ಲಿ ಯಾವುದೇ ನದಿ ಮೂಲಗಳು ಇಲ್ಲ. 1800ಕ್ಕೂ ಹೆಚ್ಚು ಅಡಿಗಳಷ್ಟು ಬೋರ್‌ವೆಲ್‌ ಕೊರೆಸಿದರೂ ನೀರು ಸಿಗುತ್ತಿಲ್ಲ. ನೀರಿನ ಸಮಸ್ಯೆಯಿಂದಾಗಿ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಕಠಿಣ ಪರಿಸ್ಥಿತಿ ಎದುರಾಗಿದೆ.
-ರತ್ನಮ್ಮ ಗ್ರಾಮಸ್ಥೆ

ಗ್ರಾಮದಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಕುಡಿಯುವ ನೀರಿನ ಭವಣೆ ನಿವಾರಣೆಗೆ ಹೆಚ್ಚಿನ ಒತ್ತು ನೀಡಲಾಗುವುದು. ಗ್ರಾಮದ ನೀರಿನ ಸಮಸ್ಯೆಯ ಬಗ್ಗೆ ಶಾಸಕರ ಗಮನಕ್ಕೂ ತಂದಿದ್ದೇವೆ. ಎಲ್ಲೆಡೆ ಕೊಳವೆ ಬಾವಿಗಳಲ್ಲಿ ಅಂತರ್ಜಲ ಕಡಿಮೆಯಾಗಿದ್ದು,ಮೋಟಾರ್‌ ಪಂಪ್‌ಸೆಟ್‌ ದುರಸ್ಥಿಯಾಗಿದೆ. ಇದಕ್ಕೆ ಹೊಸದಾಗಿ ಮೋಟಾರ್‌ ಪಂಪ್‌ಸೆಟ್‌ ಅಳವಡಿಸುವುದಕ್ಕೆ ನಾವು ತಾಪಂ ಹಾಗೂ ಕಾರ್ಯಪಾಲಕ ಅಭಿಯಂತರ ಅವರಿಗೂ ತಿಳಿಸಿದ್ದೇವೆ.
-ಮೇನಕಾ ಕೃಷ್ಣಮೂರ್ತಿ, ಗಂಗವಾರ ಚೌಡಪ್ಪನಹಳ್ಳಿ ಗ್ರಾಪಂ ಅಧ್ಯಕ್ಷೆ

ಗ್ರಾಮಸ್ಥರಿಗೆ ನೀರಿನ ಸಮಸ್ಯೆಯಾಗದಂತೆ ಟ್ಯಾಂಕರ್‌ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದೇವೆ. ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ನೀಡಲಾಗುತ್ತದೆ.
-ಶ್ರೀನಿವಾಸ್‌ ಮೂರ್ತಿ, ಪಿಡಿಒ

ಟಾಪ್ ನ್ಯೂಸ್

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

ಟೀಂ ಇಂಡಿಯಾದ ದ.ಆಫ್ರಿಕಾ ಸರಣಿ ಮೊಟಕು: ಕೋವಿಡ್ ಭೀತಿಯಿಂದ ಟಿ20 ಸರಣಿ ಮುಂದೂಡಿಕೆ

shivaraj-kumar

ಪುನೀತ್ ಡ್ರೀಮ್ ಪ್ರಾಜೆಕ್ಟ್ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ ನೀಡಿದ ಶಿವಣ್ಣ

1-ff

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ರಾಜ್ಯಪಾಲ ಕೆ. ರೋಸಯ್ಯ ವಿಧಿವಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PANCHAYATH ELECTION

ಗ್ರಾಪಂಗಳಿಗೆ ಚುನಾವಣೆ ಘೋಷಣೆ

lake filled

ಬೂದಿಗೆರೆ ಕೆರೆಯಲ್ಲಿನ್ನು 24ಗಂಟೆಯೂ ನೀರು

protest

ಸಚಿವರ ಮನವಿಗೂ ಕ್ಯಾರೆ ಎನ್ನಲಿಲ್ಲ..!

ಆನೆಗಳ ಹಿಂಡು

ಆನೇಕಲ್‌ನಲ್ಲಿ ಕಾಡಾನೆ ಹಿಂಡು ದಾಳಿ: ರಾಗಿ ಬೆಳೆ ನಾಶ

aids victims in benglore rural

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ 3,771 ಮಂದಿ ಏಡ್ಸ್‌ ಪೀಡಿತರು..

MUST WATCH

udayavani youtube

Omicron Virus ಕುರಿತು CM Highprofile ಮೀಟಿಂಗ್ !!

udayavani youtube

ಎಚ್ಚರಿಕೆ! ದೆಹಲಿ ಆಸ್ಪತ್ರೆಯಲ್ಲಿ ಒಮಿಕ್ರಾನ್

udayavani youtube

Podcast ಲೋಕದಲ್ಲಿ ಏನಿದು ಹೊಸ ಸಂಚಲನ ?!

udayavani youtube

ಸರ್ಕಾರಿ ಕಚೇರಿಯಲ್ಲಿನ ಕಾಗದ ಹೊತ್ತೊಯ್ದ ಮೇಕೆ ಹಿಂದೆ ಓಡುತ್ತಿರುವ ನೌಕರರು

udayavani youtube

ಅಜ್ಜಂಪುರ ತಾಲೂಕಿನ ಹಲವೆಡೆ ವರುಣನ ಅಬ್ಬರ

ಹೊಸ ಸೇರ್ಪಡೆ

10bjp

ಬಿಜೆಪಿಗೆ ಪಾಠ ಕಲಿಸಿ: ಡಾ| ಅಜಯಸಿಂಗ್‌

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

ಮುಂಬೈ ಟೆಸ್ಟ್: ಹತ್ತಕ್ಕೆ ಹತ್ತೂ ವಿಕೆಟ್ ಕಿತ್ತ ಅಜಾಜ್ ಪಟೇಲ್ ಹೊಸ ದಾಖಲೆ

10kannada

ಕನ್ನಡ-ತಮಿಳು ಪರಸ್ಪರ ಆಪ್ತ ಸಂಬಂಧ

arrest-25

ಕಾವೂರಿನಲ್ಲಿ ಮಾರಕಾಯುಧ ಝಳಪಿಸಿ 3 ಗೋವುಗಳ ಕಳ್ಳತನ : ಮೂವರ ಬಂಧನ

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

ಒಮಿಕ್ರಾನ್ ಸೋಂಕಿನ ಭಯ: ಪತ್ನಿ, ಮಕ್ಕಳನ್ನು ಕೊಂದು ಪರಾರಿಯಾದ ಪ್ರೊಫೆಸರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.